ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 28 ಮಾರ್ಚ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಗುರುಹಿರಿಯರನ್ನು ಭೇಟಿಯಾಗುವ ಯೋಗ. ದಂಪತಿಗಳಲ್ಲಿ ಪರಸ್ಪರ ಸಹಕಾರ ಕಂಡುಬರುವುದು. ವಿದ್ಯಾರ್ಥಿಗಳಿಗೆ ಪೂರಕ  ವಾತಾವರಣವಿರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿಯಿದ್ದರೂ ಹಿತಶತ್ರುಗಳ ಕಾಟ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಇಷ್ಟು ದಿನ ಮುಚ್ಚಿಟ್ಟಿದ್ದ ವಿಚಾರಗಳು ಬಯಲಾಗಲಿವೆ.

ಮಿಥುನ: ಆತುರದ ನಿರ್ಧಾರ ಅನಾಹುತಕ್ಕೆ ಕಾರಣವಾದೀತು. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ತಾಳ್ಮೆಯಿರಲಿ.

ಕರ್ಕಟಕ: ವಿಶೇಷ ಅತಿಥಿಗಳನ್ನು ಸ್ವಾಗತಿಸಲಿದ್ದೀರಿ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಇಷ್ಟ ಭೋಜನ ಮಾಡುವ ಯೋಗ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಬೇಕಾದೀತು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಕಾರ್ಯಾನುಕೂಲಕ್ಕಾಗಿ ನಿಮ್ಮ ದೈನಂದಿಕ ಕೆಲಸಗಳಲ್ಲಿ ಕೆಲವು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಮಹಿಳೆಯರಿಗೆ ಅಲಂಕಾರಿ ವಸ್ತುಗಳ ಖರೀದಿ ಯೋಗ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕನ್ಯಾ: ನಿಮ್ಮ ಸಮಯೋಚಿತ ನಿರ್ಧಾರಕ್ಕೆ ತಕ್ಕ ಫಲ ಸಿಗಲಿದೆ. ಸಂಗಾತಿಯಿಂದ ಪ್ರಶಂಸೆಗೊಳಗಾಗಲಿದ್ದೀರಿ. ಮನೆಗೆ ಬಂಧು ಮಿತ್ರರ ಭೇಟಿ ಸಾಧ‍್ಯತೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ.

ತುಲಾ: ಹೊಸದಾಗಿ ಆರಂಭಿಸಿದ್ದ ಉದ್ದಿಮೆ, ವ್ಯಾಪಾರದಿಂದ ಉತ್ತಮ ಫಲಗಳನ್ನು  ನಿರೀಕ್ಷಿಸಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲು ಕೆಲವು ದಿನ ಕಾಯಬೇಕಾದೀತು. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ನಿರುದ್ಯೋಗಿಗಳಿಗೆ ಯೋಗ್ಯತೆಗೆ ಅನುಸಾರವಾಗಿ ಉದ್ಯೋಗಾವಕಾಶಗಳು ಒದಗಿಬರಲಿವೆ. ನೆರೆಹೊರೆಯವರಿಗೆ ನಿಮ್ಮ ಕೈಲಾದ ಸಹಾಯ ಮಾಡಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಸ್ಥಳಗಳ ಸಂದರ್ಶನ ಯೋಗ.

ಧನು: ಇಷ್ಟಾನುಸಾರ ನಿರ್ಧಾರ ತೆಗೆದುಕೊಳ್ಳಲು ಹೋದರೆ ಆತ್ಮೀಯರ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ಪರರಿಗೆ ವಾಗ್ದಾನ ಮಾಡುವ ಮೊದಲು ಎಚ್ಚರಿಕೆ ವಹಿಸಿ. ಅಧಿಕ ಪರಿಶ್ರಮದಿಂದ ದೇಹಾಯಾಸವಾದೀತು. ಎಚ್ಚರಿಕೆಯಿರಲಿ.

ಮಕರ: ನಿಮ್ಮ ಭವಿಷ್ಯಕ್ಕೆ ಪೂರಕವಾದ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ. ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ಮಕ್ಕಳಿಂದ ನಿಮ್ಮ ಸಂತೋಷ ಇಮ್ಮಡಿಯಾದೀತು. ಸಂಗಾತಿಯ ಕೆಲವೊಂದು ಸಲಹೆಗಳು ನಿಮಗೆ ಪಥ್ಯವಾಗದೇ ಹೋದೀತು. ದೀರ್ಘ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ತಾಳ್ಮೆ ಅಗತ್ಯ.

ಮೀನ: ಹೊಸ ಸ್ಥಳಗಳ ಸಂದರ್ಶನ ಯೋಗ. ಪರಿಚಿತರಿಂದಲೇ ವಂಚನೆಗೊಳಗಾಗುವ ಭೀತಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಯಿರಲಿದೆ. ವಿದ್ಯಾರ್ಥಿಗಳಿಗೆ ಅನುಕೂಲವಿರುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಕರ ಸಂಕ್ರಾಂತಿ ನಾಳೆಯಾ, ನಾಡಿದ್ದಾ.. ಕನ್ ಫ್ಯೂಷನ್ ಬೇಡ ಇಲ್ಲಿ ನೋಡಿ

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಕಾಶೀ ವಿಶ್ವನಾಥನ ಭಕ್ತರಾಗಿದ್ದರೆ ಈ ಸ್ತೋತ್ರ ತಪ್ಪದೇ ಓದಿ

ಶನಿ ದೋಷ ನಿವಾರಣೆಗೆ ದಶರಥ ಕೃತ ಶನಿ ಮಂತ್ರ ಕನ್ನಡದಲ್ಲಿ

ಅಭಿವೃದ್ಧಿಗಾಗಿ ಲಕ್ಷ್ಮೀ ದೇವಿಯ ಈ ಮಂತ್ರ ಪಠಿಸಿ

ಮುಂದಿನ ಸುದ್ದಿ
Show comments