ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಅಧ್ಯಯನ ಶೀಲರಿಗೆ, ಸಂಶೋಧಕರಿಗೆ ಉತ್ತಮ ಅವಕಾಶಗಳು ದೊರೆಯಲಿವೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಇಷ್ಟ ಭೋಜನ ಮಾಡಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.
ವೃಷಭ: ಬೇಡವೆಂದರೂ ಕೆಲವೊಂದು ಜವಾಬ್ಧಾರಿಗಳು ನಿಮ್ಮ ಹೆಗಲಿಗೇರಲಿದೆ. ಕೌಟುಂಬಿಕವಾಗಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ದಿನದಂತ್ಯಕ್ಕೆ ತಾಳ್ಮೆಯಿರಲಿ.
ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಕಷ್ಟ ನಷ್ಟ ಎದುರಿಸಲಿದ್ದೀರಿ. ವಿದೇಶೀ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರುವುದು.
ಕರ್ಕಟಕ: ಪರವೂರಿಗೆ ಸಂಚರಿಸುವ ಅನಿವಾರ್ಯತೆ. ಗುರುಹಿರಿಯರಿಂದ ಕೆಲಸ ಕಾರ್ಯಗಳಲ್ಲಿ ಸಹಕಾರ ಕಂಡುಬಂದೀತು. ದಾಂಪತ್ಯ ಸುಖ ಮಧ್ಯಮವಾಗಿರಲಿದೆ. ಮನೋರಂಜನಾ ವೃತ್ತಿಯಲ್ಲಿ ತೊಡಗಿಸಿಕೊಂಡವರಿಗೆ ಕೀರ್ತಿ ಸಂಪಾದಿಸುವ ಯೋಗ.
ಸಿಂಹ: ಅನ್ಯರು ನಿಮ್ಮ ಬಗ್ಗೆ ಕೀಳಾಗಿ ಮಾತನಾಡುವ ಸಂಭವ. ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾದೀತು. ದೇವತಾ ಪ್ರಾರ್ಥನೆ ಮಾಡಿ.
ಕನ್ಯಾ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಹಲವು ಅಡಚಣೆಗಳು ಕಂಡುಬಂದೀತು. ನಿಮ್ಮ ಕಾರ್ಯವೈಖರಿ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ತುಲಾ: ಕಟ್ಟಡ ನಿರ್ಮಾಣ ಕೆಲಸಗಳಿಗೆ ಚಾಲನೆ ನೀಡಲು ಯೋಜನೆ ರೂಪಿಸಲಿದ್ದೀರಿ. ಕೆಳ ಹಂತದ ನೌಕರರಿಗೆ ಬಡ್ತಿ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.
ವೃಶ್ಚಿಕ: ಸುದೀರ್ಘ ಸಮಯದಿಂದ ಯೋಜನೆ ಮಾಡಿಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ಸಹೋದರಾದಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯ ದೂರವಾಗಲಿದೆ.
ಧನು: ಬೇರೆಯವರ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡಲು ಹೋಗಬೇಡಿ. ಸಂಗಾತಿಗೆ ನಿಮ್ಮ ಮಾತುಗಳು ಅಸಹನೀಯವೆನಿಸೀತು. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.
ಮಕರ: ಬದುಕಿನಲ್ಲಿ ಕೆಲವು ಮಹತ್ವದ ನಿರ್ಧಾರ ಕೈಗೊಳ್ಳುವ ಸಮಯವಿದು. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.
ಕುಂಭ: ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ದಂಪತಿಗಳಲ್ಲಿ ಪರಸ್ಪರ ಅನುರಾಗ ವೃದ್ಧಿಯಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ತಾಳ್ಮೆಯಿರಲಿ.
ಮೀನ: ಸರಕಾರೀ ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯದೊತ್ತಡ ಕಂಡುಬರುವುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಫಲಿತಾಂಶ ಸಿಗಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.