ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಸಂತೋಷದಾಯಕವಾದ ದಿನವಾಗಿರಲಿದೆ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಗುರುಹಿರಿಯರ ಆಶೀರ್ವಾದ ಸಿಗುವುದು. ಹಣಕಾಸಿನ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ವೃಷಭ: ವೈಯಕ್ತಿಕ ಪ್ರತಿಷ್ಠೆಗಳನ್ನು ಬದಿಗೊತ್ತಿ ಕೆಲಸ ಮಾಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಒತ್ತಡ ಕಂಡುಬಂದೀತು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆಯಿರುವುದು. ತಾಳ್ಮೆಯಿರಲಿ.
ಮಿಥುನ: ನಿಮ್ಮ ಮಾತೇ ನಿಮಗೆ ಅಸ್ತ್ರವಾಗಲಿದೆ. ವ್ಯವಹಾರದಲ್ಲಿ ಮುನ್ನಡೆಯ ಯೋಗ. ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು. ಆದರೆ ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ಕಿರು ಸಂಚಾರ ಮಾಡಬೇಕಾಗುತ್ತದೆ.
ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಹಿಂದಿನ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಿ. ಹೊಸ ಬಂಡವಾಳ ಹೂಡಿಕೆ ಮಾಡಲು ಚಿಂತನೆ ನಡೆಸಲಿದ್ದೀರಿ. ಸಂಗಾತಿಯ ಸಲಹೆಗಳು ಉಪಯುಕ್ತವಾಗಲಿದೆ.
ಸಿಂಹ: ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ನೀರಿನ ಸಮಸ್ಯೆ ಕಂಡುಬಂದೀತು. ಮಕ್ಕಳಿಂದ ಸಂತೋಷ ಸಿಗುವುದು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.
ಕನ್ಯಾ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರಬೇಕಾದ ಸಂದರ್ಭಗಳು ಬಂದೀತು. ಹೊಸ ಜನರ ಭೇಟಿ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿಗಾಗಲಿದೆ.
ತುಲಾ: ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ದುಡಿತ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಕೃಷಿಕರಿಗೆ ನೀರಿನ ಸಮಸ್ಯೆಯಾದೀತು. ಕೌಟುಂಬಿಕವಾಗಿ ಪರಸ್ಪರ ಸಹಕಾರ ಕಂಡುಬಂದೀತು. ದೇವತಾ ಪ್ರಾರ್ಥನೆ ಮಾಡಿ.
ವೃಶ್ಚಿಕ: ನಿಮ್ಮ ನಿಲುವಿನಲ್ಲಿ ದಿಡೀರ್ ಬದಲಾವಣೆ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ. ವ್ಯಾವಹಾರಿಕವಾಗಿ ನಿಮ್ಮ ಯಶಸ್ಸು ತಡೆಯಲು ಯಾರಿಗೂ ಸಾಧ್ಯವಿಲ್ಲ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ.
ಧನು: ಮನಸ್ಸಿಗೆ ಉಲ್ಲಾಸ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಹಿರಿಯರಿಗೆ ತೀರ್ಥ ಯಾತ್ರೆ ಕೈಗೊಳ್ಳುವ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ.
ಮಕರ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಹಿಂಜರಿಕೆ ಕಂಡುಬರಲಿದೆ. ಮಾತೃ ಸಮಾನರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಕಾರ್ಯನಿಮಿತ್ತ ಸಂಚಾರ ಮಾಡಬೇಕಾದೀತು. ತಾಳ್ಮೆಯಿರಲಿ.
ಕುಂಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದೇಹಾರೋಗ್ಯದ ಸಮಸ್ಯೆಗಳಿಗೆ ತಕ್ಕಮಟ್ಟಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸ್ವಯಂ ವೃತ್ತಿಯವರಿಗೆ ಮುನ್ನಡೆಯ ಯೋಗ. ಅನಗತ್ಯ ಚಿಂತೆ ಬೇಡ.
ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನದ ಯೋಗ. ಮನೆಯಲ್ಲಿ ಶುಭ ಮಂಗಲ ಕಾರ್ಯನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಅನಿವಾರ್ಯತೆ ಎದುರಾಗಲಿದೆ.