ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಉದ್ಯೋಗ, ವ್ಯವಹಾರದಲ್ಲಿ ಹೊಸ ಸಾಹಸಕ್ಕೆ ಕೈ ಹಾಕಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಆದರೆ ಕೌಟುಂಬಿಕವಾಗಿ ಅನಾದರಣೆಗೊಳಗಾಗಲಿದ್ದೀರಿ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಬೇಕಾಗುತ್ತದೆ.
ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಭೀತಿ. ಮಕ್ಕಳ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ವ್ಯವಸ್ಥಿತವಾಗಿ ಯೋಜನೆ ರೂಪಿಸಿ ಮುನ್ನಡೆಯಬೇಕಾಗುತ್ತದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.
ಮಿಥುನ: ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಸ್ಪಷ್ಟ ನಿರ್ಧಾರಗಳಿಂದ ನಾಲ್ಕು ಜನರ ಮಧ್ಯೆ ನಾಯಕರಾಗಿ ನಿಲ್ಲಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ತಾಳ್ಮೆಯಿರಲಿ.
ಕರ್ಕಟಕ: ಮನಸ್ಸಿನಲ್ಲಿ ಅಂದುಕೊಂಡಿದ್ದು ಒಂದು, ಆಗಿದ್ದು ಇನ್ನೊಂದು ಎಂಬ ಪರಿಸ್ಥಿತಿ ಎದುರಾಗಲಿದೆ. ಯಾಂತ್ರಿಕವಾಗಿ ಕೆಲಸಗಳು ನಡೆಯುತ್ತಿದ್ದರೂ ಮನಸ್ಸಿನಲ್ಲಿ ಆಲೋಚನೆಗಳು ಹೈರಾಣಾಗಿಸಲಿದೆ. ದೇವತಾ ಪ್ರಾರ್ಥನೆ ಮಾಡಿ.
ಸಿಂಹ: ವ್ಯಾಪಾರಸ್ಥರಿಗೆ ಅನುಕೂಲಕರ ಪರಿಸ್ಥಿತಿಯಿರಲಿದೆ. ನಿಮ್ಮ ವ್ಯವಹಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ಕನ್ಯಾ: ಕೆಲಸದಲ್ಲಿ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದರಿಂದ ತೃಪ್ತಿಯಾಗಲಿದೆ. ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯಬೇಕಾಗುತ್ತದೆ. ಪಾಲು ಬಂಡವಾಳ ವ್ಯವಹಾರದಲ್ಲಿ ನಿರೀಕ್ಷಿತ ಫಲ ಕಂಡುಬರಲಿದೆ. ಚಿಂತೆ ಬೇಡ.
ತುಲಾ: ಹಣಕಾಸಿನ ವಿಚಾರದಲ್ಲಿ ನಿರೀಕ್ಷಿತ ಸಫಲತೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಇಷ್ಟಭೋಜನ ಮಾಡುವ ಯೋಗ. ಸಹೋದ್ಯೋಗಿಗಳಿಂದ ಸಹಕಾರ ಕಂಡುಬರುವುದು. ದಿನದಂತ್ಯಕ್ಕೆ ನೆಮ್ಮದಿ.
ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಸ್ಥಾನ ಮಾನ ಲಭ್ಯವಾಗಲಿದೆ. ಕೈಲಾಗದವರಿಗೆ ಸಹಾಯ ಮಾಡಿದ ತೃಪ್ತಿ ನಿಮ್ಮದಾಗುವುದು. ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ದುಂದು ವೆಚ್ಚ ಬೇಡ.
ಧನು: ಬೇರೆಯವರು ನಿಮ್ಮ ಅಭಿಪ್ರಾಯಕ್ಕೇ ಬೆಲೆ ಕೊಡಬೇಕೆಂದು ಹಠ ಹಿಡಿಯುವ ಪ್ರವೃತ್ತಿ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಹೊಸ ವಿಚಾರಗಳನ್ನು ಕಲಿಯುವ ಅವಕಾಶ ಕಂಡುಬರುವುದು. ಪಾಲುದಾರಿಕಾ ವೃತ್ತಿಯಲ್ಲಿ ಯಶಸ್ಸು.
ಮಕರ: ಜವಾಬ್ಧಾರಿಯುತ ನಡೆಯಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಯಂತ್ರೋಪಕರಣಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವಾಹನ ಸಂಚಾರದಲ್ಲಿ ಎಚ್ಚರ.
ಕುಂಭ: ಕಷ್ಟಗಳು ಎದುರಾದರೂ ಸಂದರ್ಭಕ್ಕೆ ತಕ್ಕಂತೆ ಸಹಾಯ ಸಿಗುವುದರಿಂದ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ಆಸ್ತಿ, ವಾಹನಾದಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರುವುದು.
ಮೀನ: ಇನ್ನೊಬ್ಬರ ಧನ ಸಂಪತ್ತು ರಕ್ಷಿಸುವ ಹೊಣೆ ನಿಮ್ಮ ಹೆಗಲಿಗೇರಲಿದೆ. ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ನಿರ್ಧಾರ ಬದಲಾಯಿಸಬೇಕಾದೀತು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.