Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 21 ಏಪ್ರಿಲ್ 2023 (06:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆರೋಗ್ಯ ಗಮನಿಸಿ. ವ್ಯವಹಾರದಲ್ಲಿ ತಾಳ್ಮೆ ಅಗತ್ಯ. ಬೇರೆಯವರ ನಿಮ್ಮ ಬಗ್ಗೆ ಚಾಡಿ ಮಾತು ಹೇಳಿಯಾರು. ಹಣಕಾಸಿನ ಹರಿವಿಗೆ ತೊಂದರೆಯಾಗದು. ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ಎಷ್ಟೇ ಕಷ್ಟವಿದ್ದರೂ ಬೇರೆಯವರ ಸಹಾಯಕ್ಕೆ ಧಾವಿಸುವ ಗುಣ ನಿಮ್ಮದಾಗಲಿದೆ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಯಾವುದೇ ವಿಚಾರವನ್ನೂ ಕುಟುಂಬ ಸದಸ್ಯರೊಂದಿಗೆ ಪರಾಮರ್ಶಿಸಿಯೇ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಗುರುಹಿರಿಯರ ಪ್ರೀತಿಗೆ ಪಾತ್ರರಾಗಲಿದ್ದೀರಿ. ಗೃಹ, ವಾಹನಾದಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು.

ಕರ್ಕಟಕ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ಹೊಸ ಉದ್ದಿಮೆಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಕಂಡುಬರುವುದು. ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ಧೀರಿ. ಕೆಲಸ ಕಾರ್ಯಗಳಲ್ಲಿ ಪರರ ಸಹಾಯ ನಿರೀಕ್ಷಿಸದಿರಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಕನ್ಯಾ: ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಿದ ಸಂತೋಷ ನಿಮ್ಮದಾಗಲಿದೆ. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ತುಲಾ: ಕೆಲಸ ಕಾರ್ಯಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಲಿದ್ದು, ಕ್ರಿಯಾಶೀಲರಾಗಿ ದಿನ ಕಳೆಯಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ವೃಶ್ಚಿಕ: ಹೊಸ ಕೆಲಸಗಳಿಗೆ ಕೈ ಹಾಕಿದ್ದರೆ ಅಡೆತಡೆಗಳು ಬಂದೀತು. ಮಾತಿನ ಮೇಲೆ ನಿಗಾ ಇರಲಿ. ಅನ್ಯರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ನಿರುದ್ಯೋಗಿಗಳಿಗೆ ವಿದೇಶದಲ್ಲಿ ಉದ್ಯೋಗಾವಕಾಶ ಕಂಡುಬರಲಿದೆ. ಬಳಸಿಕೊಳ್ಳಿ.

ಧನು: ಹಿರಿಯರಿಂದ ನಿಮ್ಮ ಸುಖ, ಸ್ಥಾನ ವೃದ್ಧಿಯಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ನಿಮ್ಮ ಮಾತೇ ನಡೆಯಬೇಕೆಂಬ ಹಠವಾದೀ ಮನೋಭಾವ ಇನ್ನೊಬ್ಬರ ಅಸಮಾಧಾನಕ್ಕೆ ಗುರಿಯಾದೀತು.

ಮಕರ: ಕೆಲಸ ಕಾರ್ಯಗಳಲ್ಲಿ ನಿಮ್ಮ ಚುರುಕುತನ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ವಿವಾಹಾದಿ ಪ್ರಯತ್ನಗಳಿಗೆ ಫಲ ಸಿಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಗುರುಹಿರಿಯರೊಂದಿಗೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಕೊಡಬೇಡಿ. ಆಸ್ತಿ ವಿಚಾರದಲ್ಲಿ ಅನ್ಯರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಆಹಾರ ಸೇವನೆಯಲ್ಲಿ ಮಿತಿಯಿರಲಿ. ದೇಹಾರೋಗ್ಯ ಸಮಸ್ಯೆ ಸಂಭವವಿದೆ.

ಮೀನ: ಉದ್ಯೋಗ, ವ್ಯವಹಾರದಲ್ಲಿ ಗಣನೀಯ ಅಭಿವೃದ್ಧಿ ಕಂಡುಬರಲಿದೆ. ನಿರೀಕ್ಷೆಗೂ ಮೀರಿದ ಧನಾರ್ಜನೆಯಾದೀತು. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ. ಪಾಲುದಾರಿಕೆ ವ್ಯವಹಾರದಲ್ಲಿ ಚರ್ಚೆಗೆ ಅವಕಾಶ ಕೊಡಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva mantra: ಇಂದು ಶಿವ ಅಷ್ಟೋತ್ತರ ತಪ್ಪದೇ ಓದಿ

Surya Mantra: ಇಂದು ಸೂರ್ಯನ ಕುರಿತಾದ ಈ ಸ್ತೋತ್ರವನ್ನು ತಪ್ಪದೇ ಓದಿ

Anjaneya Mantra: ಶನಿದೋಷವಿದ್ದವರು ಆಂಜನೇಯನ ಈ ಸ್ತೋತ್ರವನ್ನು ಓದಿ

Lakshmi Mantra: ಮನಸ್ಸಿನ ಭಯ ದೂರ ಮಾಡಲು ಧೈರ್ಯ ಲಕ್ಷ್ಮಿ ಸ್ತೋತ್ರ ಇಲ್ಲಿದೆ ನೋಡಿ

Vishnu Mantra: ಶ್ರೀ ವಿಷ್ಣು ಅಷ್ಟೋತ್ತರ ನಾಮಾವಳಿ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಓದಿ

ಮುಂದಿನ ಸುದ್ದಿ
Show comments