ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 22 ಏಪ್ರಿಲ್ 2023 (06:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಾಹನ, ಭೂಮಿ ಖರೀದಿ  ವಿಚಾರದಲ್ಲಿ ಪರಿಚಿತರ ಮಧ‍್ಯಸ್ಥಿಕೆ ಪಡೆಯುವುದು ಉತ್ತಮ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಯಾತ್ರಾರ್ಥಿಗಳಿಗೆ ಅಡೆತಡೆಗಳು ಬಂದೀತು. ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ಕೌಟುಂಬಿಕ ವಿಷಯಕ್ಕೆ ಹಿರಿಯರೊಂದಿಗೆ ಸಂಘರ್ಷಗಳಾಗುವ ಸಾಧ್ಯತೆ. ಮಾತಿನ ಮೇಲೆ ನಿಗಾ ಇರಲಿ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಕಡಿಮೆಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಅತ್ಯಂತ ಕ್ರಿಯಾಶೀಲರಾಗಿ ತೊಡಗಿಸಿಕೊಳ್ಳಬೇಕಾದ ದಿನವಿದು. ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ನಿಮ್ಮ ಕಷ್ಟಗಳಿಗೆ ಸ್ನೇಹಿತರಿಂದ ಪರಿಹಾರ ಸಿಗಲಿದೆ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದ್ರವ್ಯ ನಷ್ಟವಾಗುವ ಭೀತಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ.

ಸಿಂಹ: ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ಧಾರಿ ನಿಮ್ಮದಾಗಲಿದೆ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಮನಸ್ಸಿನಲ್ಲಿರುವ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆಸ್ತಿ ವಿಚಾರದಲ್ಲಿ ಹೆಚ್ಚಿನ ಜವಾಬ್ಧಾರಿ ನಿಮ್ಮದಾಗಲಿದೆ. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ.

ತುಲಾ: ಮಾನಸಿಕವಾಗಿ ಎಷ್ಟೇ ಸದೃಢವಾಗಿದ್ದರೂ ದೈಹಿಕ ಆರೋಗ್ಯ ಕೆಲಸ ಕಾರ್ಯಗಳಿಗೆ ಅಡ್ಡಿ ಮಾಡಲಿದೆ. ಮಾತಿನಲ್ಲಿ ಸಹನೆಯಿರಲಿ. ಸಂಗಾತಿಯ ಸಹಕಾರ ಸಿಗುವುದು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ತಾಳ್ಮೆಯಿರಲಿ.

ವೃಶ್ಚಿಕ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ.  ಉದ್ಯೋಗ, ವ್ಯವಹಾರದಲ್ಲಿ ಅಡೆತಡೆಗಳು ನಿವಾರಣೆಯಾಗಲಿವೆ. ಅನಗತ್ಯ ಚಿಂತೆ ಬೇಡ.

ಧನು: ಯಾವುದೇ ವಿಚಾರದ ಬಗ್ಗೆ ಪರಾಮರ್ಶೆ ನಡೆಸದೇ ನಿರ್ಧಾರಕ್ಕೆ ಬರಬೇಡಿ. ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹಠವಾದೀ ಮನೋಭಾವ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗ.

ಮಕರ: ಸರಕಾರೀ ಉದ್ಯೋಗಿಗಳಿಗೆ ಕೊಂಚ ಬಿಡುವಿನ ಸಮಯ ಸಿಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಸಮಸ್ಥಿತಿಯಿರುವುದು. ಹೊಸ ಚಿಂತನೆಗಳನ್ನು ಕಾರ್ಯರೂಪಕ್ಕೆ ತರಲು ಅವಕಾಶ ಸಿಗಲಿದೆ.

ಕುಂಭ: ನೀವು ಬಯಸಿದ ವಸ್ತು ಇಂದು ತಾನಾಗಿಯೇ ಕೈಗೆ ಸಿಗುವಂತಾಗಲಿದೆ. ವಿಶೇಷ ವ್ಯಕ್ತಿಗಳು ಇಂದು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ಸಂಗಾತಿಯ ಕಿರಿ ಕಿರಿ ಕಂಡುಬಂದೀತು. ಕಿರು ಓಡಾಟ ನಡೆಸಬೇಕಾಗುತ್ತದೆ.

ಮೀನ: ಬೇರೆಯವರ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಹೋಗಿ ನಿಷ್ಠುರ ಮಾಡಿಕೊಳ್ಳಬೇಡಿ. ನಿಮ್ಮ ಮನಸ್ಸಿನಲ್ಲಿ ಬಯಸಿದ್ದೇ ಆಗುವುದು. ದಾಂಪತ್ಯ ಸುಖಕ್ಕೆ ಕೊರತೆಯಿರದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಕೆಟ್ಟ ದೃಷ್ಟಿ ನಿವಾರಿಸಿ ಸಂಪತ್ತು ವೃದ್ಧಿಗೆ ಈ ಲಕ್ಷ್ಮೀ ಮಂತ್ರ ಪಠಿಸಿ

ಸಂಜೆ ದೀಪ ಹಚ್ಚುವ ಅತ್ಯಂತ ಮಂಗಳಕರ ಸಮಯ ಯಾವುದು ಗೊತ್ತಾ

ಮೇಷಾದಿ ದ್ವಾದಶ ರಾಶಿಫಲ 2026: ಖ್ಯಾತ ಜ್ಯೋತಿಷಿ ಶ್ರೀ ವೆಂಕಟೇಶ್ವರ ಭಟ್ ಅವರಿಂದ

ಬುಧವಾರ ಗಣೇಶನ ಅನುಗ್ರಹಕ್ಕೆ ಈ ಸ್ತೋತ್ರ ಓದಿ

ವೈಕುಂಠ ಏಕಾದಶಿ ದಿನವಾದ ಇಂದು ಮಹಾವಿಷ್ಣುವಿನ ಈ ಮಂತ್ರವನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments