ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ವ್ಯಾಪಾರ, ವ್ಯವಹಾರದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಅಷ್ಟೇ ಖರ್ಚೂ ಇರಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಿಶೇಷ ಅತಿಥಿಗಳನ್ನು ಮನೆಗೆ ಬರಮಾಡಿಕೊಳ್ಳಲಿದ್ದೀರಿ.
ವೃಷಭ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹೊಸ ಸಾಹಸಗಳಿಗೆ ಕೈ ಹಾಕುವ ಮುನ್ನ ಆಪ್ತರ ಸಲಹೆ ಪಡೆಯಿರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಮಿಥುನ: ನಿಮ್ಮ ಉದ್ದೇಶಿತ ಕೆಲಸಗಳಿಗೆ ಅಡೆತಡೆಗಳು ಬಂದೀತು. ಕಷ್ಟದ ಸಮಯದಲ್ಲಿ ಸ್ನೇಹಿತರು ಕೈ ಹಿಡಿಯಲಿದ್ದಾರೆ. ಹಿಂದೆ ಮಾಡಿದ ಸಾಲ ತೀರಿಸಲು ಪ್ರಯತ್ನ ಪಡಲಿದ್ದೀರಿ. ಕಾರ್ಯನಿಮಿತ್ತ ಸಂಚಾರ ಮಾಡಬೇಕಾಗುತ್ತದೆ.
ಕರ್ಕಟಕ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಸಾಂಸಾರಿಕವಾಗಿ ನೆಮ್ಮದಿಯ ದಿನಗಳಾಗಿವೆ. ಆದಾಯ ವೃದ್ಧಿಗೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ತಾಳ್ಮೆಯಿರಲಿ.
ಸಿಂಹ: ಗೃಹ, ವಾಹನಾದಿ ಸೌಕರ್ಯಗಳು ನಿಮ್ಮದಾಗಲಿವೆ. ಸಂದರ್ಭಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಗುರುಹಿರಿಯರಿಂದ ಸುಖ, ಸಂತೋಷ ವೃದ್ಧಿಯಾದೀತು. ಕೆಳ ಹಂತದ ನೌಕರರಿಗೆ ಮುಂಬಡ್ತಿ ಯೋಗ.
ಕನ್ಯಾ: ನೂತನ ಬಂಧು ಮಿತ್ರರ ಸಮಾಗಮವಾಗಲಿದೆ. ಮಕ್ಕಳಿಂದ ಸಂತೋಷ ವೃದ್ಧಿಯಾಗುವುದು. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡಲಿದ್ದೀರಿ. ಹಣಕಾಸಿನ ಖರ್ಚು ವೆಚ್ಚಗಳಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.
ತುಲಾ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಅವಿವಾಹಿತರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.
ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ಚುರುಕಾಗಿ ಕೆಲಸ ಮಾಡಬೇಕಾದ ಅನಿವಾರ್ಯತೆ. ಆದಾಯ ವೃದ್ಧಿಗೆ ದಾರಿಗಳು ಕಂಡುಬರಲಿದೆ. ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.
ಧನು: ಎಷ್ಟೇ ಕಷ್ಟಗಳಿದ್ದರೂ ಆತ್ಮೀಯರ ಸಹಕಾರವಿರುವುದರಿಂದ ಕಾರ್ಯ ಸುಗಮವಾಗಿ ನೆರವೇರಲಿದೆ. ಆಪ್ತರೊಂದಿಗೆ ಮನಸ್ಸಿನ ದುಃಖ ಹಂಚಿಕೊಳ್ಳಲಿದ್ದೀರಿ. ಮಕ್ಕಳಿಗೆ ಸಂತೋಷದಾಯಕ ದಿನ. ಇಷ್ಟಭೋಜನ ಮಾಡಲಿದ್ದೀರಿ.
ಮಕರ: ಮನಸ್ಸಿನಲ್ಲಿ ಎಷ್ಟೇ ನೋವಿದ್ದರೂ ಅದುಮಿಟ್ಟು ಮುನ್ನಡೆಯಬೇಕಾದ ಪರಿಸ್ಥಿತಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪಾರುಗುವ ಸಾಧ್ಯತೆ. ತಾಂತ್ರಿಕ ವೃತ್ತಿಯಲ್ಲಿರುವವಿರಗೆ ಮುನ್ನಡೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.
ಕುಂಭ: ಉದ್ಯೋಗ, ವ್ಯವಹಾರದಲ್ಲಿ ಪರಿಶ್ರಮದಿಂದ ಕೂಡಿದ ದಿನ. ಉದ್ದಿಮೆದಾರರಿಗೆ ಲಾಭಕರ ದಿನವಾಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಕಿರು ಸಂಚಾರ ಮಾಡಲಿದ್ದೀರಿ.
ಮೀನ: ಹಠಮಾರೀತನ ಧೋರಣೆ ಬಿಟ್ಟು ಕಾರ್ಯಪ್ರವೃತ್ತರಾದರೆ ಯಶಸ್ಸು ಸಾಧ್ಯ. ಸಂಗಾತಿಯ ಸಲಹೆ ಪಾಲಿಸಬೇಕಾಗುತ್ತದೆ. ನಿಮ್ಮ ಬಹುದಿನಗಳ ಬೇಡಿಕೆ ಈಡೇರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.