ಮೇಷ: ರಾಜಕೀಯ ವರ್ಗದವರಿಗೆ ಮುನ್ನಡೆಯ ಯೋಗ. ವಿದ್ಯಾರ್ಥಿ ವೃಂದದವರಿಗೆ ಹೊಸ ಸವಾಲುಗಳು ಎದುರಾದೀತು. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟದಿಂದ ದೇಹಾಯಾಸವಾದೀತು. ಕಿರು ಸಂಚಾರ ಮಾಡಲಿದ್ದೀರಿ.
ವೃಷಭ: ಸಹೋದರಾದಿ ವರ್ಗದವರೊಂದಿಗೆ ಅನಗತ್ಯ ಚರ್ಚೆಗೆ ಅವಕಾಶ ಮಾಡಿಕೊಡಬೇಡಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ.
ಮಿಥುನ: ನಿಮ್ಮ ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಕಾರ್ಯರಂಗದಲ್ಲಿ ಯಶಸ್ಸು ಸಿಗುವುದು. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಮಾತಿನ ಮೇಲೆ ನಿಗಾ ಇರಲಿ.
ಕರ್ಕಟಕ: ಬಂಧು ಮಿತ್ರರಿಂದ ಪ್ರೋತ್ಸಾಹ ಕಂಡುಬರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕೊನೆಯ ಹಂತದಲ್ಲಿ ಕೆಲಸ ಕಾರ್ಯಗಳಿಗೆ ವಿಘ್ನ ಬಂದು ನಿಂತು ಹೋಗುವ ಸಾಧ್ಯತೆ. ತಾಳ್ಮೆ, ಸಂಯಮ ಅಗತ್ಯ.
ಸಿಂಹ: ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಅವಕಾಶಗಳು ಕಂಡುಬರಲಿದೆ. ಹೊಸದಾಗಿ ಆರಂಭಿಸಿದ್ದ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.
ಕನ್ಯಾ: ಮಾಡಿಯೇ ತೀರಬೇಕೆಂಬ ಹಠಕ್ಕೆ ಬಿದ್ದು ಕೆಲಸ ಮಾಡುವ ಪ್ರವೃತ್ತಿ ಕಂಡುಬಂದೀತು. ಸಂಗಾತಿಯ ಸಹಕಾರ ಕಂಡುಬರಲಿದೆ. ಮಕ್ಕಳ ನಿಮಿತ್ತ ಖರ್ಚು ವೆಚ್ಚಗಳಾದೀತು. ದೇವತಾ ಕ್ಷೇತ್ರಗಳ ಸಂದರ್ಶನ ಯೋಗ.
ತುಲಾ: ದಾಂಪತ್ಯ ಜೀವನದಲ್ಲಿ ಸಂತೋಷದಾಯಕವಾದ ದಿನವಾಗಿರಲಿದೆ. ನಿಮ್ಮ ಮಾತುಗಳಿಗೆ ಇತರರಿಂದ ಮನ್ನಣೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.
ವೃಶ್ಚಿಕ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಸುಧಾರಿಸಲಿದೆ. ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾದೀತು.
ಧನು: ಯಾವುದೇ ಕೆಲಸಕ್ಕೆ ಕೈ ಹಾಕಲು ಹೋದರೂ ಮನೆಯವರ ಸಹಕಾರವಿಲ್ಲದೇ ಬೇಸರವಾದೀತು. ಮಕ್ಕಳಿಗೆ ಸಮಾನ ಮನಸ್ಕರೊಂದಿಗೆ ಬೆರೆಯುವ ಯೋಗ. ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ. ದಿನದಂತ್ಯಕ್ಕೆ ನೆಮ್ಮದಿ.
ಮಕರ: ಕಾರ್ಯನಿಮಿತ್ತ ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಕೈಲಾಗದವರಿಗೆ ಸಹಾಯ ಮಾಡಿದ ತೃಪ್ತಿ ನಿಮ್ಮದಾಗಲಿದೆ. ಹಣಕಾಸಿನ ವಿಚಾರದಲ್ಲಿ ಹೊಸ ಸಾಹಸಕ್ಕೆ ಕೈ ಹಾಕದೇ ಇರುವುದು ಉತ್ತಮ.
ಕುಂಭ: ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಪಾಲು ಬಂಡವಾಳ ವ್ಯವಹಾರದಲ್ಲಿ ಲಾಭ ನಿರೀಕ್ಷಿಸಬಹುದು. ಸನ್ಮಿತ್ರರ ಸಲಹೆಗಳು ಉಪಯೋಗಕ್ಕೆ ಬರಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.
ಮೀನ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಕುಲದೇವರ ಪ್ರಾರ್ಥನೆ ಮರೆಯದಿರಿ.