ಮೇಷ: ನಿಮ್ಮ ಭವಿಷ್ಯಕ್ಕಾಗಿ ಕೆಲವೊಂದು ಮಹತ್ವದ ತೀರ್ಮಾನ ತೆಗೆದುಕೊಳ್ಳಲಿದ್ದೀರಿ. ಮಕ್ಕಳ ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಕೆಲವೊಂದು ಭಿನ್ನಾಭಿಪ್ರಾಯಗಳು ಬರಬಹುದು.
ವೃಷಭ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ ನಿಮ್ಮದಾಗಲಿದೆ. ಹಣಕಾಸಿನ ಖರ್ಚು ವೆಚ್ಚಗಳು ಕಂಡುಬಂದೀತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ತಾಳ್ಮೆಯಿರಲಿ.
ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.
ಕರ್ಕಟಕ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ. ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಗುರುಹಿರಿಯರೊಂದಿಗೆ ಚರ್ಚಿಸಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ತಾಳ್ಮೆಯಿರಲಿ.
ಸಿಂಹ: ನಿಮ್ಮಲ್ಲಿರುವ ಕ್ರಿಯಾತ್ಮಕ ಶಕ್ತಿಯನ್ನು ಹೊರಹಾಕಲಿದ್ದೀರಿ. ಮೇಲಧಿಕಾರಿಗಳ ಪ್ರೀತಿ ಪಾತ್ರರಾಗಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಯಿರಲಿ. ಅನಗತ್ಯ ಚಿಂತೆ ಬೇಡ.
ಕನ್ಯಾ: ದೈವಾನುಕೂಲದಿಂದ ನೀವು ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಮನೆಯ ಸಣ್ಣ ಪುಟ್ಟ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚಗಳಾದೀತು.
ತುಲಾ: ನೆರೆಹೊರೆಯವರು ನಿಮ್ಮ ಕಷ್ಟಗಳಿಗೆ ಸ್ಪಂದಿಸಲಿದ್ದಾರೆ. ನೀರಿನೊಂದಿಗೆ ಸಾಹಸ ಬೇಡ. ಮೇಲಧಿಕಾರಿಗಳಿಂದ ಕಿರಿ ಕಿರಿ ಇದ್ದೀತು. ತಾಳ್ಮೆ, ಸಂಯಮ ಅಗತ್ಯ. ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕೆ ಪ್ರಯತ್ನ ಮುಂದುವರಿಸಬೇಕಾಗುತ್ತದೆ.
ವೃಶ್ಚಿಕ: ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ಆಹಾರೋದ್ಯಮಿಗಳಿಗೆ ಅಭಿವೃದ್ಧಿ ಸಾಧ್ಯತೆ. ಅಪರಿಚಿತರ ನಂಬಿ ವ್ಯವಹರಿಸಲು ಹೋಗಬೇಡಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ದೇವತಾ ಪ್ರಾರ್ಥನೆ ಮಾಡಿ.
ಧನು: ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆಯಿಂದಿದ್ದರೆ ಯಶಸ್ಸು ಸಾಧ್ಯ. ಕಿರಿಯರೊಂದಿಗೆ ಸಂಘರ್ಷಗಳಾಗುವ ಸಾಧ್ಯತೆ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಕಂಡುಬರುವುದು. ಗೃಹಿಣಿಯರಿಗೆ ಕಾರ್ಯದೊತ್ತಡವಿರಲಿದೆ.
ಮಕರ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗುವುದು. ಆರೋಗ್ಯದಲ್ಲಿ ಸುಧಾರಣೆ.
ಕುಂಭ: ಕಂಕಣ ಬದ್ಧರಾಗಿ ಕೆಲಸಕ್ಕೆ ಕೈ ಹಾಕಿದರೂ ವಿಘ್ನಗಳು ಎದುರಾಗುವ ಸಾಧ್ಯತೆ. ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಹಿರಿಯರಿಗೆ ಆರೋಗ್ಯದಲ್ಲಿ ಏರುಪೇರು ಸಾಧ್ಯತೆ.
ಮೀನ: ಕಾರ್ಯರಂಗದಲ್ಲಿ ನಿಮ್ಮ ಶತ್ರುಗಳಿಗೆ ಸೋಲಾಗಲಿದೆ. ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಸೂಕ್ತ ಅವಕಾಶಗಳು ಸಿಗುವುದು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾದೀತು. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.