ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಸೋಮವಾರ, 1 ಮೇ 2023 (06:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡಬರುವುದು. ಕಾರ್ಯಕ್ಷೇತ್ರದಲ್ಲಿ ನಿಮಗೆ ಇದ್ದ ಅಡ್ಡಿ ಆತಂಕಗಳು ನಿವಾರಣೆಯಾಗಲಿದೆ. ಕೌಟುಂಬಿಕವಾಗಿ ಸಂತೋಷದಿಂದ ಕಾಲ ಕಳೆಯಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಕಾರ್ಯರಂಗದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಇಷ್ಟಮಿತ್ರರೊಂದಿಗೆ ಸಂತೋಷದಿಂದ ಕಾಲ ಕಳೆಯುವ ಯೋಗ. ಮಾತಿನ ಮೇಲೆ ನಿಗಾ ಇರಲಿ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಮಿಥುನ: ಹೊಸದಾಗಿ ಮದುವೆಯಾಗಿದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕರ್ಕಟಕ: ಮನೆಯಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಸರಿದೂಗಿಸಿಕೊಂಡು ಹೋಗುವ ತಾಳ್ಮೆಯಿರಲಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ.

ಸಿಂಹ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಉನ್ನತ ಸ್ಥಾನಮಾನಕ್ಕಾಗಿ ಪ್ರಯತ್ನಿಸುತ್ತಿದ್ದರೆ ಯಶಸ್ಸು ಕಂಡುಬರಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದ್ದು, ಅನಗತ್ಯ ಚಿಂತೆ ಬೇಡ. ಮಕ್ಕಳ ವಿಚಾರದಲ್ಲಿ ಸಂಕಲ್ಪ ಮಾಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ.

ತುಲಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗ. ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಗುರುಹಿರಿಯರ ಸಲಹೆ ಪಡೆಯುವುದು ಉತ್ತಮ.

ವೃಶ್ಚಿಕ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಬಂಧು ಮಿತ್ರರ ಭೇಟಿ ಮಾಡಲಿದ್ದೀರಿ. ಮಹಿಳೆಯರಿಗೆ ಮಂಗಲ ವಸ್ತ್ರ ಖರೀದಿ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ತಾಳ್ಮೆಯಿರಲಿ.

ಧನು: ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರಿಗೆ ದೇವಾಲಯ ಸಂದರ್ಶನ ಯೋಗ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ.

ಮಕರ: ಅಧ್ಯಯನಶೀಲರಿಗೆ ಉನ್ನತ ಅವಕಾಶಗಳು ಬರಲಿವೆ. ಕೆಳ ಹಂತದ ನೌಕರರಿಗೆ ಉದ್ಯೋಗ ಬದಲಾವಣೆಗೆ ಪ್ರಯತ್ನ ನಡೆಸಬೇಕಾಗುತ್ತದೆ. ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭ ಕಂಡುಬಂದೀತು. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಸರಕಾರೀ ಉದ್ಯೋಗಕ್ಕೆ ಪ್ರಯತ್ನ ಪಡುತ್ತಿದ್ದರೆ ಯಶಸ್ಸು ಪಡೆಯಲಿದ್ದೀರಿ. ಸಕಾಲದಲ್ಲಿ ಸ್ನೇಹಿತರ ಸಹಾಯ ಸಿಗುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾದೀತು. ವೈಯಕ್ತಿಕ ಜೀವನದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದಿನದಂತ್ಯಕ್ಕೆ ನೆಮ್ಮದಿ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಗುರುವಾರ ಸಾಯಿನಾಥ ಅಷ್ಟಕಂ ತಪ್ಪದೇ ಓದಿ

ಮುಂದಿನ ಸುದ್ದಿ
Show comments