ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 4 ಮೇ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿರೀಕ್ಷಿತ ಸ್ಥಾನ ಮಾನ ಸಿಗಬೇಕಾದರೆ ಅದಕ್ಕೆ ತಕ್ಕ ಪರಿಶ್ರಮಪಡಬೇಕಾಗುತ್ತದೆ. ನಿಮಗೆ ಹಿಂದೆ ಸಹಾಯ ಮಾಡಿದ್ದವರಿಂದ ಪ್ರತ್ಯುಪಕಾರ ಪಡೆಯಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ.

ವೃಷಭ: ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿಯಿರಲಿದೆ. ಹಣಕಾಸಿನ ಆಯ-ವ್ಯಯದ ಬಗ್ಗೆ ನಿಗಾ ಅಗತ್ಯ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಕಟ್ಟಡಗಳಿಂದ ಆದಾಯಕ್ಕೆ ದಾರಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ಮಿಥುನ: ಕೃಷಿಕರಿಗೆ ಕೆಲಸ ಕಾರ್ಯಗಳಿಗೆ ತೊಂದರೆ ಎದುರಾದೀತು. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ಆಹಾರೋದ್ಯಮಿಗಳಿಗೆ ಆದಾಯ ವೃದ್ಧಿಗೆ ದಾರಿ ಸಿಗುವುದು. ಕೋರ್ಟು ಕಚೇರಿ ಕೆಲಸಗಳಲ್ಲಿ ಮುನ್ನಡೆ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ನಿಮಗೆ ಅನುಕೂಲಕರ ಪರಿಸ್ಥಿತಿಯಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಹಣಕಾಸಿನ ವಿಚಾರದಲ್ಲಿ ಕಟ್ಟು ನಿಟ್ಟು ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.

ಸಿಂಹ: ಉತ್ತಮ ವಾಕ್ಚತುರತೆಯಿಂದ ಕೆಲಸ ಕಾರ್ಯಗಳಲ್ಲಿ ಜಯ ಸಿಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ವ್ಯಾಪಾರೀ ವರ್ಗದವರಿಗೆ ಮುನ್ನಡೆ ಕಂಡುಬರಲಿದೆ.

ಕನ್ಯಾ: ಅನಗತ್ಯ ವಿಚಾರಗಳಿಗೆ ನಿಮ್ಮ ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ವ್ಯವಹಾರದಲ್ಲಿ ಅಧಿಕ ಚಟುವಟಿಕೆಯಿಂದ ಕೂಡಿದ ದಿನ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ತುಲಾ: ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ನಿರುದ್ಯೋಗಿಗಳಿಗೆ ಸರಕಾರೀ ಉದ್ಯೋಗದ ಯೋಗ ಕೂಡಿಬರುವುದು. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ.

ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ಅಧಿಕ ಪರಿಶ್ರಮದಿಂದ ಕೂಡಿದ ದಿನವಿಂದು. ಉಳಿತಾಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.

ಧನು: ಮಕ್ಕಳ ವಿಚಾರದಲ್ಲಿ ಕೆಲವೊಂದು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು.

ಮಕರ: ಕಷ್ಟದ ಸಮಯದಲ್ಲಿ ಸನ್ಮಿತ್ರರ ಸಹಾಯ ದೊರೆಯುವುದು. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಮುಂದಾಗಲಿದ್ದೀರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ತಾಳ್ಮೆಯಿರಲಿ.

ಕುಂಭ: ಕಾರ್ಯಾನುಕೂಲಕ್ಕಾಗಿ ಕೆಲವೊಂದು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ದೇಹಾರೋಗ್ಯದ ಸಮಸ್ಯೆಯಾದೀತು.

ಮೀನ: ಗುರುಹಿರಿಯರ ಮಾರ್ಗದರ್ಶನದಿಂದ ಹಿಡಿದ ಕೆಲಸಗಳಲ್ಲಿ ಯಶಸ್ಸು. ಕೋರ್ಟು ಕಚೇರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಕಾಶೀ ವಿಶ್ವನಾಥನ ಪ್ರಾರ್ಥನೆ ಮಾಡಿ

ದೇವರ ಕೋಣೆಯಲ್ಲಿ ಒಂದೇ ದೀಪ ಹಚ್ಚಬಾರದೇ, ಏನಿದರ ಅರ್ಥ, ಇಲ್ಲಿದೆ ಮಾಹಿತಿ

ಸುಬ್ರಹ್ಮಣ್ಯನ ಅನುಗ್ರಹಕ್ಕೆ ಈ ಸ್ತೋತ್ರವನ್ನು ಓದಿ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments