ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 6 ಮೇ 2023 (06:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ಇಷ್ಟ ಭೋಜನ ಮಾಡುವ ಯೋಗ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನ ಮಾನಾದಿಗಳು ಸಿಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಇಷ್ಟಮಿತ್ರರನ್ನು ಭೇಟಿಯಾಗಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ.

ಮಿಥುನ: ಮನೆಯಲ್ಲಿ ಸಣ್ಣ ಪುಟ್ಟ ಬದಲಾವಣೆಗಳು ಕಂಡುಬಂದೀತು. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಬಂಧು ಮಿತ್ರರ ಭೇಟಿ ಸಾಧ‍್ಯತೆ.

ಕರ್ಕಟಕ: ಉದ್ದಿಮೆದಾರರಿಗೆ ನಿವ್ವಳ ಲಾಭ ಸಿಗುವುದು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ನೀರಿನಿಂದ ಅಪಾಯವಾಗುವ ಸಾಧ‍್ಯತೆ. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಹಿರಿಯರ ಸಲಹೆ ಸೂಚನೆ ಪಡೆಯುವುದು ಉತ್ತಮ. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರುವುದು. ರಾಜಕೀಯ ರಂಗದಲ್ಲಿರುವವರಿಗೆ ಬಿಡುವಿಲ್ಲದ ಕೆಲಸ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಪ್ರೇಮಿಗಳಿಗೆ ಶುಭ ದಿನವಾಗಲಿದೆ.

ತುಲಾ: ಮನೆಯಲ್ಲಿ ಸಣ್ಣ ಪುಟ್ಟ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚಗಳಾದೀತು. ಯೋಗ್ಯ  ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಇಷ್ಟ ಮಿತ್ರರನ್ನು ಭೇಟಿಯಾಗುವ ಸಾಧ‍್ಯತೆ. ಮಾತಿನ ಮೇಲೆ ನಿಗಾ ಇರಲಿ.

ವೃಶ್ಚಿಕ: ವ್ಯಾಪಾರೀ ವರ್ಗದವರಿಗೆ ಕೊಡು-ಕೊಳ್ಳುವ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು. ಸಂದರ್ಭಕ್ಕೆ ತಕ್ಕಂತ ನಿರ್ಧಾರ ತೆಗೆದುಕೊಳ್ಳುವ ಜಾಣ್ಮೆ ಪ್ರದರ್ಶಿಸಲಿದ್ದೀರಿ.ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ.

ಧನು: ಮನೆಯಲ್ಲಿ ಸಣ್ಣ ಪುಟ್ಟ ಘರ್ಷಣೆಗಳು ನಿಮ್ಮ ಕೆಲಸ ಕಾರ್ಯದ ಮೇಲೂ ಪರಿಣಾಮ ಬೀರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಂಗಾತಿಯ ಸಲಹೆ ಪಾಲಿಸಬೇಕಾಗುತ್ತದೆ.

ಮಕರ: ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ನಿಮ್ಮ ಉತ್ಸಾಹಕ್ಕೆ ಮನೆಯವರ ಸಾಥ್ ಸಿಗುವುದು. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ.

ಕುಂಭ: ಉದ್ಯೋಗ, ವ್ಯವಹಾರದಲ್ಲಿ ಗೌರವ, ಸ್ಥಾನಾದಿಗಳು ನಿಮಗೆ ಒಲಿಯಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ತಾಳ್ಮೆ ಅಗತ್ಯ.

ಮೀನ: ಉದ್ಯೋಗ ಸಂಬಂಧವಾದ ಸಮಸ್ಯೆಗಳಿಗೆ ಆಪ್ತರಿಂದ ಸಲಹೆ ಪಡೆಯಲಿದ್ದೀರಿ. ದಾಂಪತ್ಯದಲ್ಲಿ ಮಧ‍್ಯಮ ಸುಖವಿರಲಿದೆ. ನೆರೆಹೊರೆಯವರಿಂದ ಸಹಾಯ ಒದಗಿಬರುವುದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಸೋಮವಾರ ಶಿವನ ಕುರಿತ ಈ ಸ್ತೋತ್ರವನ್ನು ತಪ್ಪದೇ ಓದಿ

ಮನೆಯಲ್ಲಿ ಶಂಖ ಊದುತ್ತಿದ್ದರೆ ತಿಳಿದುಕೊಳ್ಳಬೇಕಾದ ಅಂಶಗಳು

ಶನಿ ಅಷ್ಟೋತ್ತರ ಶತನಾಮಾವಳಿ ಸ್ತೋತ್ರ

ಶುಕ್ರವಾರ ಈ ವಸ್ತುಗಳನ್ನು ಮನೆಗೆ ತರಬೇಡಿ

ಮುಂದಿನ ಸುದ್ದಿ
Show comments