ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 10 ಮೇ 2023 (06:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅನಿರೀಕ್ಷಿತ ಅದೃಷ್ಟ ಪ್ರಾಪ್ತಿಯಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಖುಷಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಹೊಸ ಕೆಲಸಗಳಿಗೆ ಕೈ ಹಾಕುವ ಆರಂಭಿಕ ಉತ್ಸಾಹ ಕಂಡುಬರಲಿದೆ. ಹಿರಿಯರ ಸಲಹೆ ಪಾಲಿಸುವುದು ಉತ್ತಮ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಯೋಗ್ಯ ವಯಸ್ಕರಿಗೆ ಕಂಕಣ ಬಲವಿದೆ.

ಮಿಥುನ: ಕಾರ್ಯರಂಗದಲ್ಲಿ ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ವಾಹನ, ಭೂಮಿ ಖರೀದಿಗೆ ಕೆಲವು ದಿನ ಕಾಯುವುದು ಉತ್ತಮ. ಸ್ನೇಹಿತರ ಸಹಾಯ ಒದಗಿಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಸಂಗಾತಿಯ ಕೆಲವೊಂದು ಅಭಿಪ್ರಾಯಗಳು ನಿಮಗೆ ಹಿಡಿಸದೇ ಹೋದೀತು. ಮಹಿಳೆಯರಿಗೆ ಉದ್ಯೋಗದಲ್ಲಿ ಬದಲಾವಣೆ ಸಾಧ‍್ಯತೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ವ್ಯಾಪಾರ, ವಾಣಿಜ್ಯೋದ್ಯಮಿಗಳಿಗೆ ಮುನ್ನಡೆಯ ಯೋಗ. ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗುವುದು. ನಿಮ್ಮ ಹಳೆಯ ಬಾಕಿ ಸಂದಾಯವಾಗಲಿದೆ. ಯಂತ್ರೋಪಕರಣಗಳ ರಿಪೇರಿ ಕೆಲಸಗಳಿಗೆ ಖರ್ಚಾಗಲಿದೆ.

ತುಲಾ: ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಅನಿರೀಕ್ಷಿತ ಧನಾಗಮನದಿಂದ ಅಂದುಕೊಂಡ ಕೆಲಸ ಪೂರ್ತಿಯಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ದುಂದು ವೆಚ್ಚ ಬೇಡ.

ವೃಶ್ಚಿಕ: ಅಧ್ಯಯನಶೀಲರಿಗೆ, ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರಲಿದೆ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಸರಕಾರೀ ಕೆಲಸಗಳಲ್ಲಿ ಜಯ.

ಧನು: ಬಿಗುಮಾನ ಬಿಟ್ಟು ಆತ್ಮೀಯರೊಂದಿಗೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮಕ್ಕಳಿಗೆ ಮನರಂಜನಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಖುಷಿ ಸಿಗುವುದು.

ಮಕರ: ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ಕೌಟುಂಬಿಕವಾಗಿ ಪರಸ್ಪರ ಸಹಕಾರವಿರಲಿದೆ. ದಾಂಪತ್ಯ ಸುಖಕ್ಕೆ ಕೊರತೆಯಾಗದು. ನಿರುದ್ಯೋಗಿಗಳಿಗೆ ಪ್ರಯತ್ನ ಮುಂದುವರಿಸಬೇಕಾಗುತ್ತದೆ.

ಕುಂಭ: ಸರಕಾರೀ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಸಂಗಾತಿಯ ಸಲಹೆಗಳು ಪಥ್ಯವಾಗದೇ ಹೋದೀತು. ಮಕ್ಕಳಿಗೆ ಉಡುಗೊರೆಯ ಖುಷಿ ನೀಡಲಿದ್ದೀರಿ. ದೂರದ ವ್ಯವಹಾರಗಳಿಂದ ಧನಾರ್ಜನೆಯಾಗಲಿದೆ.

ಮೀನ: ಜವಾಬ್ಧಾರಿಯುತ ಕೆಲಸಗಳಿಂದ ಜನಮನ್ನಣೆ ಗಳಿಸಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಜಲೋತ್ಪನ್ನಗಳ ವ್ಯಾಪಾರಸ್ಥರಿಗೆ ಮುನ್ನಡೆ. ಬಂಧು ಮಿತ್ರರಿಂದ ಸಹಕಾರ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದೀಪಾವಳಿಗೆ ಯಾವ ರಾಶಿಯವರು ಯಾವ ವಸ್ತುಗಳನ್ನು ದಾನ ಮಾಡಬೇಕು

ಸಂಕಷ್ಟ ನಿವಾರಣೆಗೆ ಉಚ್ಛಿಷ್ಟ ಗಣಪತಿ ಸ್ತೋತ್ರ

ದೀಪಾವಳಿ ನಂತರ ಈ ರಾಶಿಯವರ ಅದೃಷ್ಟ ಬದಲಾಗುತ್ತದೆ

ಲಲಿತಾ ಪಂಚರತ್ನಂ ಸ್ತೋತ್ರವನ್ನು ಇಂದು ತಪ್ಪದೇ ಓದಿ

ದೀಪಾವಳಿ 2025 ಗೋ ಪೂಜೆ ಮುಹೂರ್ತ ಯಾವಾಗ

ಮುಂದಿನ ಸುದ್ದಿ
Show comments