Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 11 ಮೇ 2023 (06:40 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಪಾಲುದಾರಿಕಾ ಕ್ಷೇತ್ರದಲ್ಲಿ ಸಮಾಧಾನಕರ ಬೆಳವಣಿಗೆ. ಮಹಿಳೆಯರಿಗೆ ಮಂಗಲ ವಸ್ತ್ರ ಖರೀದಿಸುವ ಯೋಗ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಷಭ: ಆತ್ಮೀಯರ ಕಷ್ಟಗಳಿಗೆ ಸ್ಪಂದಿಸಲು ಅವಕಾಶ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಮುನ್ನಡೆಯ ಯೋಗ.

ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಲಾಭವಾಗಲಿದೆ. ಹೊಸದಾಗಿ ಪರಿಚಿತರಾದ ಮಿತ್ರರಿಂದ ಸಹಾಯ ಒದಗಿಬರುವುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಮಕ್ಕಳ ನಿಮಿತ್ತ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರುವುದು. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ. ಸಂದರ್ಭಕ್ಕೆ ತಕ್ಕ ನಿರ್ಧಾರ ತೆಗೆದುಕೊಳ್ಳಲಿದ್ದೀರಿ.

ತುಲಾ: ಮಕ್ಕಳಿಂದ ನಿಮ್ಮ ಸಂತೋಷ ಇಮ್ಮಡಿಯಾಗಲಿದೆ. ದೂರದ ವ್ಯವಹಾರದಲ್ಲಿ ಅನುಕೂಲ ಕಂಡುಬರಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ವೃಶ್ಚಿಕ: ಕಾರ್ಯರಂಗದಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಬೇಕಾಗುತ್ತದೆ. ಮಾತಿನ ಮೇಲೆ ನಿಗಾ ಇರಲಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು. ಅನ್ಯರ ಜೊತೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ.

ಧನು: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಅನ್ಯರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಿ ವಿವಾದಕ್ಕೆ ಸಿಲುಕಬೇಡಿ. ನೆರೆಹೊರೆಯವರೊಂದಿಗೆ ಬಾಂಧವ್ಯ ವೃದ್ಧಿಯಾಗಲಿದೆ.

ಮಕರ: ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಕೂಡಿಬರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಭೂಮ್ಯಾದಿ ವ್ಯವಹಾರದಲ್ಲಿ ಅನಿರೀಕ್ಷಿತ ತಿರುವು. ಹಣಕಾಸಿನ ವಿಚಾರದಲ್ಲಿ ಪರರ ಹಸ್ತಕ್ಷೇಪಕ್ಕೆ ಅವಕಾಶ ಕೊಡದಿರಿ. ಸಾಂಸಾರಿಕವಾಗಿ ಸುಖ,ಸಮೃದ್ಧಿಯಿರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.

ಮೀನ: ಜವಾಬ್ಧಾರಿಯುತ ಕೆಲಸಗಳಿಂದ ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸೋಮವಾರ ಈ ಕೆಲಸ ಮಾಡುವುದರಿಂದ ಶಿವನ ಅನುಗ್ರಹ ಸಿಗುತ್ತದೆ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Hanumantha Mantra: ಉದ್ಯೋಗ ಪ್ರಾಪ್ತಿಗಾಗಿ ಹನುಮಂತನ ಈ ಮಂತ್ರವನ್ನು ಜಪಿಸಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಜೀವನದಲ್ಲಿ ಬರುವ ಕಷ್ಟ ನಿಭಾಯಿಸಲು ಈ ದುರ್ಗಾ ಮಂತ್ರ ಜಪಿಸಿ

ಮುಂದಿನ ಸುದ್ದಿ
Show comments