Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 16 ಮೇ 2023 (07:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಅನಿರೀಕ್ಷಿತ ಬದಲಾವಣೆಗೆ ಸಿದ್ಧರಾಗಬೇಕಾಗುತ್ತದೆ. ಹೊಸ ಮಿತ್ರರಿಂದ ನಿಮಗೆ ಉಪಕಾರವಾದೀತು. ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.

ವೃಷಭ: ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಣಕಾಸಿನ ಖರ್ಚು ವೆಚ್ಚಗಳಿದ್ದರೂ ಅಷ್ಟೇ ಆದಾಯವೂ ಇರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಪಾಲುದಾರಿಕಾ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಸಿಗಲಿವೆ.

ಕರ್ಕಟಕ: ಕಾರ್ಯರಂಗದಲ್ಲಿ ಪರಿಶ್ರಮದಾಯಕ ದಿನವಾಗಿರಲಿದೆ. ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭಿಸಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಸಿಂಹ: ಕೆಲಸದ ನಿಮಿತ್ತ ಅನ್ಯ ಊರಿಗೆ ಸಂಚರಿಸುವ ಅನಿವಾರ್ಯತೆ ಎದುರಾಗಲಿದೆ. ಆಸ್ತಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಜಲೋತ್ಪನ್ನಗಳ ವ್ಯವಹಾರ ಮಾಡುವವರಿಗೆ ಕೊಂಚ ಹಿನ್ನಡೆಯಾದೀತು. ತಾಳ್ಮೆಯಿರಲಿ.

ಕನ್ಯಾ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ಧೀರಿ. ಸಂಗಾತಿಯ ಸಹಕಾರ ಸಿಗುವುದು. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ಅನಗತ್ಯ ಚಿಂತೆ ಬೇಡ.

ತುಲಾ: ಹೊಸದಾಗಿ ಮದುವೆಯಾಗಿದ್ದವರಿಗೆ ಮಧು ಚಂದ್ರ ಯೋಗ. ಕೃಷಿಕರಿಗೆ ಬೆಳೆ ನಷ್ಟ ಭೀತಿ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರಿಗೆ ದೇವತಾ ಕಾರ್ಯಗಳಿಂದ ನೆಮ್ಮದಿ.

ವೃಶ್ಚಿಕ: ಗೃಹೋಪಯೋಗಿ ವಸ್ತುಗಳ ಖರೀದಿ ಯೋಗ. ಉತ್ತಮ ವಾಕ್ಚತುರತೆ ಪ್ರದರ್ಶಿಸಲಿದ್ದೀರಿ. ಪಾಲುದಾರರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಮಕ್ಕಳ ವಿಚಾರದಲ್ಲಿ ಮೂಗು ತೂರಿಸಲು ಹೋಗಬೇಡಿ. ವಿದ್ಯಾರ್ಥಿಗಳು ಹೊಸ ಪರೀಕ್ಷೆಗಳಿಗೆ ತಯಾರಿ ನಡೆಸಲಿದ್ದಾರೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು. ದೇವತಾ ಪ್ರಾರ್ಥನೆ ಮಾಡಿ.

ಮಕರ: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಸಾಹಸ ಪ್ರವೃತ್ತಿಯಿಂದ ಕೂಡಿದ ದಿನ. ಹಣ ಗಳಿಕೆಯ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ದಾಂಪತ್ಯದಲ್ಲಿ ಮಧ‍್ಯಮ ಸುಖವಿರಲಿದೆ.

ಕುಂಭ: ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಆಪ್ತರೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ಅವಿವಾಹಿತರಿಗೆ ವಿವಾಹ ಯೋಗ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಮೀನ: ಎಷ್ಟೇ ಸಂಪಾದನೆಯಿದ್ದರೂ ಮನಸ್ಸಿಗೆ ತೃಪ್ತಿಯಿರದು. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದು ಉತ್ತಮ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಬಂಧು ಮಿತ್ರರ ಭೇಟಿ ಸಾಧ‍್ಯತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Krishna Mantra: ಶ್ರೀಕೃಷ್ಣಾಷ್ಟಕಂ ಪ್ರತಿನಿತ್ಯ ಓದಿ: ಕನ್ನಡದಲ್ಲಿ ಇಲ್ಲಿದೆ

Lakshmi Mantra: ಹಣಕಾಸಿನ ಸಮಸ್ಯೆಯಿದ್ದರೆ ತಪ್ಪದೇ ಈ ಮಂತ್ರ ಓದಿ

Durga Mantra: ದುರ್ಗಾ ಚಾಲೀಸ ಮಂತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

Shiva Mantra: ಶಿವನ ದ್ವಾದಶ ಲಿಂಗ ಸ್ತೋತ್ರ ತಪ್ಪದೇ ಇಂದು ಓದಿ

Shani chalisa: ಶನಿ ಚಾಲೀಸಾ ಕನ್ನಡದಲ್ಲಿ ಇಲ್ಲಿದೆ, ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments