Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 18 ಮೇ 2023 (06:50 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬೇರೆಯವರ ತಪ್ಪುಗಳನ್ನು ಹುಡುಕುತ್ತಾ ಕೂರುವ ಬದಲು ನಿಮ್ಮ ಕೆಲಸಗಳ ಬಗ್ಗೆ ಗಮನ ಹರಿಸುವುದು ಉತ್ತಮ. ಹಣಕಾಸಿನ ವಿಚಾರದಲ್ಲಿ ಬೇರೆಯವರ ಹಸ್ತಕ್ಷೇಪಕ್ಕೆ ಅವಕಾಶ ಕೊಡಬೇಡಿ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ರಾಜಕೀಯ ಕ್ಷೇತ್ರದಲ್ಲಿರುವವಿರಗೆ ತಮ್ಮ ನಿರ್ಧಾರ ಮರು ಪರಿಶೀಲಿಸುವ ಅಗತ್ಯ ಕಂಡುಬರಲಿದೆ. ಆಹಾರೋದ್ಯಮಿಗಳಿಗೆ ಮುನ್ನಡೆಯ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ವಿದ್ಯಾರ್ಥಿ ವರ್ಗದವರಿಗೆ ಹೊಸ ಅವಕಾಶಗಳನ್ನು ಕಂಡುಕೊಳ್ಳಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ.

ಕರ್ಕಟಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ಅನುಕೂಲ ಕಂಡುಬರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ಸಿಂಹ: ಗೃಹೋಪಯೋಗಿ ವಸ್ತುಗಳ ಖರೀದಿ ವಿಚಾರದಲ್ಲಿ ಸಂಗಾತಿಯ ಸಲಹೆ ಪಾಲಿಸುವುದು ಉತ್ತಮ. ಮಕ್ಕಳಿಂದ ಸಂತೋಷ ಸಿಗಲಿದೆ. ಉದ್ದಿಮೆದಾರರಿಗೆ ಹಣಕಾಸಿನ ಅಡೆತಡೆ ಕಂಡುಬಂದೀತು. ತಾಳ್ಮೆಯಿರಲಿ.

ಕನ್ಯಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಪಾಲುದಾರಿಕಾ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಒತ್ತಡ ಕಂಡುಬರಲಿದೆ. ಸಹನೆಯಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ. ದಾಂಪತ್ಯದಲ್ಲಿ ಮಧ‍್ಯಮ ಸುಖ. ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ: ಸಜ್ಜನರ ಸಹವಾಸದಿಂದ ನಿಮ್ಮ ಕೆಲವೊಂದು ಅಭ್ಯಾಸಗಳನ್ನು ಬದಲಾಯಿಸಿಕೊಳ್ಳಲಿದ್ದೀರಿ. ಹಣ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಸಹೋದ್ಯೋಗಿಗಳ ಕಷ್ಟಕ್ಕೆ ನೆರವಾಗಲಿದ್ದೀರಿ.

ಧನು: ಸೌಂಧರ್ಯ ವರ್ಧಕ ವ್ಯಾಪಾರಸ್ಥರಿಗೆ ಲಾಭವಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗಲಿದ್ದೀರಿ. ಆರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ಮಕರ: ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಲಿದ್ದೀರಿ. ದೂರದ ವ್ಯವಹಾರಗಳಿಂದ ವಂಚನೆಗೊಳಗಾಗುವ ಭೀತಿ. ಮಾನಸಿಕವಾಗಿ ಒತ್ತಡ ಕಂಡುಬಂದೀತು. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ.

ಕುಂಭ: ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಜವಾಬ್ಧಾರಿಯುತ ಕಾರ್ಯವೈಖರಿಯಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಸಂಗಾತಿಯ ಕಷ್ಟಕ್ಕೆ ಹೆಗಲು ಕೊಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಕಾರ್ಯರಂಗದಲ್ಲಿ ನಿಮ್ಮ ಇತಿಮಿತಿ ದಾಟಲಾಗದೇ ಅಸಹಾಯಕತೆಗೊಳಗಾಗಲಿದ್ದೀರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದಿನದಂತ್ಯಕ್ಕೆ ನೆಮ್ಮದಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?