Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 20 ಮೇ 2023 (07:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕೆಲವೊಂದು ವಿಚಿತ್ರ ಘಟನೆಗಳಿಗೆ ಇಂದು ನೀವು ಸಾಕ್ಷಿಯಾಗಬೇಕಾಗುತ್ತದೆ. ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ತಾಳ್ಮೆಯಿರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಹಿತ ಶತ್ರುಗಳಿಂದ ತೊಂದರೆಗಳು ಎದುರಾದೀತು. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ವಯೋಸಹಜ ಆಸೆ ಆಕಾಂಕ್ಷೆಗಳನ್ನು ಪೂರೈಸಿಕೊಳ್ಳಲು ಹಣಕಾಸಿನ ಖರ್ಚು ವೆಚ್ಚಗಳು ಕಂಡುಬಂದೀತು. ಆತ್ಮೀಯರಿಂದಲೇ ವಂಚನೆಗೊಳಗಾಗುವ ಭೀತಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಶತ್ರುಪೀಡೆ ನಾಶವಾಗಲಿದೆ. ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಸಾಲಗಾರರಿಂದ ಮುಕ್ತಿ ಸಿಗುವುದು. ಇಷ್ಟ ಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ದೇವತಾ ಪ್ರಾರ್ಥನೆ ಮರೆಯದಿರಿ.

ಸಿಂಹ: ಹಣಕಾಸಿನ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ.

ಕನ್ಯಾ: ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿದೆ. ಹೊಸದಾಗಿ ಪರಿಚಿತರಾದವರಿಂದ ಸಹಾಯ ಸಿಗುವುದು. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರಲಿದೆ.

ತುಲಾ: ವ್ಯಾಪಾರೋದ್ಯಮಿಗಳಿಗೆ ವರ್ಚಸ್ಸು ವೃದ್ಧಿಯಾಗಲಿದೆ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದಿನದಂತ್ಯಕ್ಕೆ ನೆಮ್ಮದಿ ಸಿಗಲಿದೆ.

ವೃಶ್ಚಿಕ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾದ ನೆಮ್ಮದಿ ಸಿಗುವುದು. ಫಲಾಪೇಕ್ಷೆಯಿಲ್ಲದೇ ಕೆಲಸ ಮಾಡುವುದರಿಂದ ಎಲ್ಲರ ಮೆಚ್ಚುಗೆ ಪಡೆಯುವಿರಿ.

ಧನು: ಮನೆಯಲ್ಲಿರುವ ಆಗು ಹೋಗುಗಳ ಬಗ್ಗೆ ವಿಶೇಷ ಗಮನ ಹರಿಸಬೇಕಾಗುತ್ತದೆ. ದೇವತಾನುಗ್ರಹದಿಂದ ಶುಭ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ.

ಮಕರ: ಹಠ ಪ್ರವೃತ್ತಿಯಿಂದ ಇತರರಿಗೆ ತೊಂದರೆಯಾದೀತು. ಮಾತಿನ ಮೇಲೆ ನಿಗಾ ಇರಲಿ. ಹಣಕಾಸಿನ ವಿಚಾರದಲ್ಲಿ ಪಾರದರ್ಕತೆಯಿರಲಿ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಆಸ್ತಿ ವಿಚಾರದಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಅನುಕೂಲವಾದೀತು.  ಸಹೋದರರೊಂದಿಗಿನ ಭಿನ್ನಾಭಿಪ್ರಾಯ ನಿವಾರಣೆಯಾಗಲಿದೆ.

ಮೀನ: ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಕೆಲಸದ ನಿಮಿತ್ತ ಪರಿಶ್ರಮ ಪಡಬೇಕಾಗುತ್ತದೆ. ಸಾಂಸಾರಿಕವಾಗಿ ಸುಖ  ವೃದ್ಧಿಯಾಗಲಿದೆ. ದೇವತಾ ಸ್ಥಳಗಳ ಸಂದರ್ಶನ ಮಾಡಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?