Daily Horoscope
✕

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 21 ಮೇ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಪಡೆದುಕೊಳ್ಳುವುದಕ್ಕಿಂತ ಇಂದು ನೀವು ಕಳೆದುಕೊಳ್ಳುವುದೇ ಹೆಚ್ಚು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಕ್ಕಳ ಬಹುದಿನಗಳ ಬೇಡಿಕೆ ಈಡೇರಿಸಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಸಾಂಸಾರಿಕವಾಗಿ ತಾಳ್ಮೆ ಅಗತ್ಯ. ಕೆಲಸದ ನಿಮಿತ್ತ ಪರವೂರಿಗೆ ತೆರಳಲು ಸಿದ್ಧತೆ ನಡೆಸಲಿದ್ದೀರಿ. ಮಹಿಳೆಯರಿಗೆ ತವರಿನಕ ಕಡೆಯವರ ಭೇಟಿ ಯೋಗ. ಶುಭ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ತಾಳ್ಮೆಯಿರಲಿ.

ಮಿಥುನ: ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಲಾಭ ಮಾಡಿಕೊಳ್ಳಲು ಅವಕಾಶ ಸಿಗಲಿದೆ. ಸರಿಯಾದ ರೀತಿಯಲ್ಲಿ ಹಣಕಾಸಿನ ಹೂಡಿಕೆ ಮಾಡಬೇಕಾಗುತ್ತದೆ. ಇಷ್ಟ ಮಿತ್ರರೊಂದಿಗೆ ಕಿರು ಪ್ರವಾಸ ಮಾಡಲಿದ್ದೀರಿ.

ಕರ್ಕಟಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲಿದ್ದೀರಿ. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು. ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಸಿಂಹ: ಕೌಟುಂಬಿಕವಾಗಿ ಕೆಲವು ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕನ್ಯಾ: ನಿಮ್ಮ ಪ್ರೀತಿ ಪಾತ್ರರೊಂದಿಗೆ ಸುಂದರ ಸಮಯ ಕಳೆಯುವ ಯೋಗ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ಇಷ್ಟ ಭೋಜನ ಮಾಡಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ತುಲಾ: ವಿದ್ಯಾರ್ಥಿಗಳಿಗೆ ಪರಿಶ್ರಮದಾಯಕ ದಿನವಾಗಿರಲಿದೆ. ಕೃಷಿಕರಿಗೆ ಕೆಲಸ ಕಾರ್ಯದಲ್ಲಿ ಕೊಂಚ ಅಡೆತಡೆಗಳು ಕಂಡುಬಂದೀತು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ದಿನದಂತ್ಯಕ್ಕೆ ನೆಮ್ಮದಿ.

ವೃಶ್ಚಿಕ: ಇಂದು ನೀವು ಮಾಡುವ ಕೆಲಸಗಳು ನಿಮ್ಮ ಭವಿಷ್ಯಕ್ಕೆ ಸಹಾಯವಾಗಲಿದೆ.  ನಿರುದ್ಯೋಗಿಗಳಿಗೆ ವಿದೇಶಗಳಿಂದ ಉದ್ಯೋಗ ಸಂದರ್ಶನ ಕರೆ ಬರಬಹುದು. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಧನು: ಬಹಳ ದಿನಗಳ ನಂತರ ಆಪ್ತರನ್ನು ಭೇಟಿ ಮಾಡಿದ ಸಂತೋಷ ನಿಮ್ಮದಾಗುವುದು. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸಲಿದ್ದಾರೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.

ಮಕರ: ಸರಕಾರೀ ನೌಕರರಿಗೆ ಬಿಡುವಿನ ದಿನವಿದ್ದರೂ ಕೆಲಸ ಮಾಡಬೇಕಾದ ಅನಿವಾರ್ಯತೆ ಬಂದೀತು. ಹಿರಿಯರಿಗೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಾಗುವ ಸಂಭವ. ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕುಂಭ: ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಇಂದಿನ ದಿನ ನಿಮಗೆ ಅನುಕೂಲಕಾರಿಯಾಗಲಿದೆ. ನೆರೆಹೊರೆಯವರಿಂದ ಸಹಾಯವಾದೀತು. ಅನಗತ್ಯ ಯೋಚನೆ ಬೇಡ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯವಸ್ಥಿತವಾಗಿ ಯೋಜನೆ ರೂಪಿಸಿ ಕೆಲಸ ಮಾಡುವುದರಿಂದ ತೊಂದರೆಗಳಾಗದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಓದಿ ಶ್ರೀ ಭದ್ರಲಕ್ಷ್ಮಿ ಸ್ತೋತ್ರಂ

ಭಯ ನಿವಾರಣೆಗಾಗಿ ಗುರು ರಾಘವೇಂದ್ರ ಆಪತ್ಪರಿಹರಣ ಸ್ತೋತ್ರ

ಮುಂದಿನ ಸುದ್ದಿ
Show comments