Daily Horoscope
✕

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 24 ಮೇ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮಗೆ ಅತ್ಯಂತ ಆಪ್ತರಾದವರಿಗೆ ಕಷ್ಟಗಳು ಬಂದಾಗ ಜೊತೆ ನಿಲ್ಲಲಿದ್ದೀರಿ. ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ. ತಾಳ್ಮೆಯಿರಲಿ.

ವೃಷಭ: ಸಿಟ್ಟಿನ ಭರದಲ್ಲಿ ತೀರ್ಮಾನ ಕೈಗೊಳ್ಳಲು ಹೋಗಬೇಡಿ. ಹಿರಿಯರ ಸಲಹೆ ಪಾಲಿಸುವುದು ಉತ್ತಮ. ಮೇಲಧಿಕಾರಿಗಳಿಂದ ಕಾರ್ಯದೊತ್ತಡ ಕಂಡುಬಂದೀತು. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಅನುಕೂಲಕರವಾದ ಪರಿಸ್ಥಿತಿಯಿರುವುದು. ಸಹೋದರಾದಿ ಸಂಬಂಧಿಗಳಿಂದ ಸಹಾಯವೊದಗಿಬರಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ.

ಕರ್ಕಟಕ: ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ಕೈ ಹಿಡಿದ ಕೆಲಸಗಳು ಯಶಸ್ವಿಯಾಗಬೇಕಾದರೆ ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ.

ಸಿಂಹ: ಸ್ವಯಂ ವೃತ್ತಿಯವರಿಗೆ ಯೋಜನಾಬದ್ಧವಾಗಿ ಕೆಲಸ ಮಾಡುವುದರಿಂದ ಯಶಸ್ಸು ಸಿಗುವುದು. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಎಷ್ಟೇ ಮರೆಯಬೇಕೆಂದರೂ ಕೆಲವೊಂದು ವಿಚಾರಗಳು ನಿಮಗೆ ಕಾಡಲಿವೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳು ನಿಮ್ಮ ಏಳಿಗೆಗೆ ಸಹಾಯ ಮಾಡಲಿದ್ದಾರೆ. ಹಣಕಾಸಿನ ಹರಿವಿಗೆ ತೊಂದರೆಯಾಗದು.

ತುಲಾ: ಅಗತ್ಯವಿಲ್ಲದೇ ಹೋದರೂ ಕೆಲವೊಂದು ಖರ್ಚು ಮಾಡುವ ಪ್ರವೃತ್ತಿ ಕಂಡುಬಂದೀತು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಬ್ಯಾಂಕ್ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ.

ವೃಶ್ಚಿಕ: ಹೊಸ ವ್ಯವಹಾರಗಳು ಕೈ ಹಿಡಿಯಲಿವೆ. ನೆರೆಹೊರೆಯವರೊಂದಿಗೆ ಸಂಬಂಧ ಸುಧಾರಣೆಯಾಗುವುದು. ವಾಹನ ಸಂಚಾರದಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯ. ವಿಶೇಷ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ.

ಧನು: ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ಏಕಾಂಗಿಯಾಗಿ ಸವಾಲುಗಳನ್ನು ಎದುರಿಸುವ ಧೈರ್ಯ ತೋರಲಿದ್ದೀರಿ. ವಿದ್ಯಾರ್ಥಿಗಳಿಗೆ ಶಿಕ್ಷಕರಿಂದ ಮೆಚ್ಚುಗೆ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾದೀತು. ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಹೊಸ ಉದ್ಯೋಗಕ್ಕೆ ಪ್ರಯತ್ನಪಡುತ್ತಿದ್ದರೆ ತಕ್ಕಮಟ್ಟಿನ ಯಶಸ್ಸು ಸಿಗುವುದು. ಪರರಿಗೆ ಮಾತು ಕೊಡುವ ಮುನ್ನ ಎಚ್ಚರಿಕೆಯಿರಲಿ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ.

ಮೀನ: ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನ ಸಾ‍ಧ್ಯತೆ. ಅನಿರೀಕ್ಷಿತವಾಗಿ ಧನಾಗಮನ ಸಾಧ‍್ಯತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಶನಿಯ ಪವರ್ ಫುಲ್ ಮಂತ್ರಗಳಲ್ಲಿ ಇದೂ ಒಂದು

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಓದಿ ಶ್ರೀ ಭದ್ರಲಕ್ಷ್ಮಿ ಸ್ತೋತ್ರಂ

ಭಯ ನಿವಾರಣೆಗಾಗಿ ಗುರು ರಾಘವೇಂದ್ರ ಆಪತ್ಪರಿಹರಣ ಸ್ತೋತ್ರ

ಮುಂದಿನ ಸುದ್ದಿ
Show comments