Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 25 ಮೇ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ.

ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಉನ್ನತ ಅಭ್ಯಾಸಕ್ಕೆ ಅವಕಾಶ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಗಣನೀಯ ಪ್ರಗತಿ ಕಂಡುಬರಲಿದೆ. ಮಾನಸಿಕವಾಗಿ ದೃಢವಾದ ಸಂಕಲ್ಪ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಅನಿರೀಕ್ಷಿತವಾಗಿ ತೊಂದರೆಗಳು ಎದುರಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ದೊರೆಯಲಿದೆ. ವ್ಯಾಪಾರಿಗಳಿಗೆ ಮುನ್ನಡೆ.

ಸಿಂಹ: ದೈಹಿಕವಾಗಿ ಆರೋಗ್ಯ ಉತ್ತಮವಾಗಿದ್ದರೂ ಮಾನಸಿಕವಾಗಿ ಯೋಚನೆಗಳು ನಿಮ್ಮ ಹೈರಾಣಾಗಿಸಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ಕನ್ಯಾ: ವೈಯಕ್ತಿಕ ಖುಷಿಯನ್ನು ಕುಟುಂಬಕ್ಕಾಗಿ ತ್ಯಾಗ ಮಾಡಬೇಕಾಗಿ ಬರಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ಇತರರ ಮೇಲೆ ಅತಿಯಾದ ಅವಲಂಬನೆ ಬೇಡ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ತೊಂದರೆಗಳು ಎದುರಾದೀತು. ಕಾರ್ಯದೊತ್ತಡ ಕಂಡುಬರಲಿದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ಸಾಮಾಜಿಕ ಕಾರ್ಯಗಳಿಂದ ನೆಮ್ಮದಿ ಸಿಗುವುದು.

ವೃಶ್ಚಿಕ: ಮನೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳುವ ಮುನ್ನ ಹಿರಿಯರ ಜೊತೆ ಸಮಾಲೋಚನೆ ನಡೆಸುವುದು ಸೂಕ್ತ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಪಾಲು ಬಂಡವಾಳ ಹೂಡಿಕೆ ಮಾಡಲು ಸಕಾಲ.

ಧನು: ಸಕಾಲದಲ್ಲಿ ನೆರವು ಪಡೆಯಲಿರುವುದರಿಂದ ಸಮಸ್ಯೆಗಳಿಂದ ದೂರವಾಗಬಹುದು. ಕಾಲಕ್ಕೆ ತಕ್ಕಂತೆ ನಿಮ್ಮ ಯೋಚನೆ, ಯೋಜನೆಗಳಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಿರುವುದು.

ಮಕರ: ಮಕ್ಕಳ ನಿಮಿತ್ತ ಖರ್ಚು ವೆಚ್ಚಗಳು ಕಂಡುಬಂದೀತು. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರವಿರಲಿದೆ. ಅನಗತ್ಯ ಚಿಂತೆ ಬೇಡ.

ಕುಂಭ: ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕೊಂಚ ಕಡಿಮೆಯಾಗಲಿದೆ. ಕೃಷಿಕರಿಗೆ ಕೊಡು-ಕೊಳ್ಳುವ ವ್ಯವಹಾರದಿಂದ ಲಾಭವಾದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಮೀನ: ಕುಟುಂಬದ ನಿಮಿತ್ತ ಕೈಗೆತ್ತಿಕೊಂಡ ಕೆಲಸ ಅರ್ಧಕ್ಕೇ ನಿಲ್ಲಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಪ್ರೇಮಿಗಳಿಗೆ ಅಡೆತಡೆಗಳು ಬಂದೀತು. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಈ ಸ್ತೋತ್ರವನ್ನು ಓದಿ

ನಾಗರಪಂಚಮಿ ದಿನವಾದ ಇಂದು ತಪ್ಪದೇ ಈ ಮಂತ್ರ ಜಪಿಸಿ

ಕಾಲಭೈರವಾಷ್ಟಕಂ ಸ್ತೋತ್ರವನ್ನು ಕನ್ನಡದಲ್ಲಿ ಓದಿ

ಶನಿ ದೋಷ ಪರಿಹಾರಕ್ಕಾಗಿ ಶನಿ ಅಷ್ಟೋತ್ತರ ಶತನಾಮಾವಳಿ ಓದಿ

ಮುಂದಿನ ಸುದ್ದಿ
Show comments