Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶನಿವಾರ, 27 ಮೇ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ನಿಮ್ಮ ಹಿಂದಿನ ತಪ್ಪುಗಳಿಗೆ ತಕ್ಕ ಪ್ರತಿಫಲ ಪಡೆಯಲಿದ್ದೀರಿ. ನಿಮ್ಮ ಮಾತುಗಳಿಂದ ಸಂಗಾತಿಯ ಮನಸ್ಸಿಗೆ ನೋವಾದೀತು. ವಿದ್ಯಾರ್ಥಿಗಳಿಗೆ ತಕ್ಕಮಟ್ಟಿನ ಯಶಸ್ಸು ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಲಿದ್ದೀರಿ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಮೇಲಧಿಕಾರಿಗಳ ಆದೇಶ ಪಾಲಿಸಲೇಬೇಕಾದ ಪರಿಸ್ಥಿತಿಯಿರಲಿದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಳೆದು ಹೋದ ವಸ್ತುಗಳು ತಾನಾಗಿಯೇ ಕೈ ಸೇರಲಿವೆ.

ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಬೇರೆಯವರ ಕಷ್ಟಗಳಿಗೆ ಸ್ಪಂದಿಸುವ ನಿಮ್ಮ ಗುಣ ಮೆಚ್ಚುಗೆಗೆ ಪಾತ್ರವಾಗಲಿದೆ.

ಕರ್ಕಟಕ: ವಿಶೇಷ ವ್ಯಕ್ತಿಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಸಿಂಹ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸದಾಗಿ ಆರಂಭಿಸಿದ್ದ ಉದ್ದಿಮೆಗಳು ಕೈ ಹಿಡಿಯಲಿವೆ. ನಿಮ್ಮಿಂದ ಉಪಕಾರ ಪಡೆದವರಿಂದ ಪ್ರತ್ಯುಪಕಾರ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಮನೆಯವರ ಅಭಿಪ್ರಾಯ ಪಡೆಯದೇ ಯಾವುದೇ ಕೆಲಸಕ್ಕೆ ಕೈಹಾಕಲು ಹೋಗಬೇಡಿ. ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲಿದ್ದೀರಿ. ನಿರುದ್ಯೋಗಿಗಳು ಹೊಸ ಸಾಹಸಕ್ಕೆ ಕೈ ಹಾಕಬೇಕಾಗುತ್ತದೆ.

ತುಲಾ: ಪದೇ ಪದೇ ಕಾಡುವ ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ವಿದೇಶೀ ಮೂಲಗಳಿಂದ ಧನಾಗಮನವಾಗಲಿದೆ. ದೇವತಾ ಪ್ರಾರ್ಥನೆ ಮಾಡಲಿದ್ದೀರಿ.

ವೃಶ್ಚಿಕ: ಯಾವುದೇ ಕೆಲಸಕ್ಕೆ ಕೈ ಹಾಕುವ ಮೊದಲು ಹಿರಿಯರ ಸಲಹೆ ಪಡೆಯುವುದು ಉತ್ತಮ. ಮಕ್ಕಳ ಜೀವನದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ‍್ಳಲಿದ್ದೀರಿ. ನಿಮ್ಮ ತೀರ್ಮಾಗಳಿಗೆ ಬದ್ಧರಾಗಬೇಕಾಗುತ್ತದೆ.

ಧನು: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆಯಾದೀತು. ಯಶಸ್ಸಿಗೆ ಪರಿಶ್ರಮ ಇನ್ನೂ ಹೆಚ್ಚು ಪಡಬೇಕಾದ ಅನಿವಾರ್ಯತೆ. ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರುವುದು.

ಮಕರ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದಾಂಪತ್ಯದಲ್ಲಿ ಸುಂದರ ಕ್ಷಣ ಕಳೆಯುವ ಯೋಗ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ. ಆಸ್ತಿ, ವಾಹನ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನ ಸಾಧ‍್ಯತೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಾಲಿನ ದರ ಏರಿಕೆಗೆ ಸಾರ್ವನಿಕರ ಆಕ್ರೋಶ: ಮೊದಲು ಉಚಿತ ಯೋಜನೆ ನಿಲ್ಲಿಸಿ ಎಂದ ನೆಟ್ಟಿಗರು

ಕಾಲಭೈರವ ಸ್ತೋತ್ರ ಓದುವುದರ ಮೂರು ಮುಖ್ಯ ಉಪಯೋಗಗಳು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Sade Sati Shani 2025: 2025 ರಲ್ಲಿ ಸಾಡೇ ಸಾತಿ ಶನಿ ಇರುವವರು ಈ ಪರಿಹಾರ ಮಾಡಿ

Sade Sati Shani 2025: ಶನಿ ದೆಶೆಯ ಮೂರು ಚರಣಗಳು ಮತ್ತು ಅದರ ಪರಿಣಾಮಗಳು

ಮುಂದಿನ ಸುದ್ದಿ
Show comments