Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 28 ಮೇ 2023 (07:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಉದ್ಯೋಗ, ವ್ಯವಹಾರ ನಿಮಿತ್ತ ಪರವೂರಿಗೆ ಪ್ರಯಾಣ ಮಾಡುವ ಸಂಭವ. ಭೂಮ್ಯಾದಿ ಆಸ್ತಿ ವ್ಯವಹಾರಗಳಲ್ಲಿ ಮುನ್ನಡೆ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ‍್ಳುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ವೃಷಭ: ಗೃಹ ರಿಪೇರಿ, ವಾಹನ ರಿಪೇರಿ ಇತ್ಯಾದಿ ಕೆಲಸಗಳಿಗೆ ಖರ್ಚು ವೆಚ್ಚಗಳ ಕಂಡುಬಂದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಸ್ವಯಂ ವೃತ್ತಿಯವರಿಗೆ ಮುನ್ನಡೆಯ ಯೋಗ.

ಮಿಥುನ: ಧಾರ್ಮಿಕ ವಿಚಾರದಲ್ಲಿ ಹೆಚ್ಚಿನ ಶ್ರದ್ಧೆ ಕಂಡುಬರಲಿದೆ. ಕೌಟುಂಬಿಕವಾಗಿ ಸುಖ, ಸಂತೋಷ ಕಂಡುಬರಲಿದೆ. ಆಪ್ತರೊಂದಿಗೆ ಸಮಯ ಕಳೆಯಲಿದ್ದೀರಿ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ.

ಕರ್ಕಟಕ: ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಬಂಧುಮಿತ್ರರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಸಾಥ್ ಸಿಗುವುದು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ತಾಳ್ಮೆಯಿರಲಿ.

ಸಿಂಹ: ವಿಶೇಷ ವ್ಯಕ್ತಿಗಳು ಇಂದು ನಿಮ್ಮ ಮನೆಗೆ ಭೇಟಿ ನೀಡಲಿದ್ದಾರೆ. ಇಷ್ಟ ಭೋಜನ ಮಾಡುವ ಯೋಗ. ಹಣಕಾಸಿನ ಖರ್ಚು ವೆಚ್ಚಗಳು ಕಂಡುಬಂದೀತು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ.

ಕನ್ಯಾ: ಏನೇ ವ್ಯಾಜ್ಯಗಳಿದ್ದರೂ ಸೌಹಾರ್ದಯುತವಾಗಿ ಬಗೆಹರಿಸುವುದು ಸೂಕ್ತ. ಮಕ್ಕಳ ಸಂತೋಷಕ್ಕಾಗಿ ಕಿರು ಪ್ರವಾಸ ಕೈಗೊಳ್ಳಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಸಂಚಾರದಲ್ಲಿ ಎಚ್ಚರಿಕೆಯಿರಲಿ.

ತುಲಾ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ.

ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಗುರುಹಿರಿಯರ ಮಾರ್ಗದರ್ಶನ ಲಭ್ಯವಾಗಲಿದೆ. ಅನಗತ್ಯ ಚಿಂತೆ ಬೇಡ.

ಧನು: ಹೊಸ ಕೆಲಸಗಳಿಗೆ ಕೈ ಹಾಕುವ ಮುನ್ನ ಕುಟುಂಬ ಸದಸ್ಯರ ಅಭಿಪ್ರಾಯ ಆಲಿಸಿ. ಬಹಳ ದಿನಗಳ ನಂತರ ಬಂಧು ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ.

ಮಕರ: ಅನಿವಾರ್ಯ ಕಾರ್ಯ ನಿಮಿತ್ತ ಪರವೂರಿಗೆ ಸಂಚರಿಸಬೇಕಾದೀತು. ವಾಹನ ಖರೀದಿ ಯೋಜನೆಗಳು ಮುಂದೂಡಿಕೆಯಾಗಲಿವೆ. ಸಂಗಾತಿಯ ಬಹುದಿನಗಳ ಬೇಡಿಕೆ ಪೂರ್ತಿ ಮಾಡಲಿದ್ದೀರಿ.

ಕುಂಭ: ಕಾರ್ಯರಂಗದಲ್ಲಿ ನಿಮ್ಮ ಹಿತಶತ್ರುಗಳಿಂದ ತೊಂದರೆಗಳು ಎದುರಾದೀತು. ಆತುರದಲ್ಲಿ ತೀರ್ಮಾನ ಕೈಗೊಳ್ಳಲು ಹೋಗಬೇಡಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಉದ್ಯೋಗದಲ್ಲಿ ಯಶಸ್ಸಿಗಾಗಿ ಇಂದು ಈ ಹನುಮಾನ್ ಮಂತ್ರವನ್ನು ಪಠಿಸಿ

ಶಿವನ ಅನುಗ್ರಹಕ್ಕಾಗಿ ಇಂದು ಮಹಾದೇವಷ್ಟಕಂ ಸ್ತೋತ್ರಂ ಓದಿ

ಸಾಡೇ ಸಾತಿ ಶನಿ ಇರುವವರು ಇಂದು ತಪ್ಪದೇ ಈ ಮಂತ್ರ ಜಪಿಸಿ

ಲಕ್ಷ್ಮೀ ಕೃಪಾಕಟಾಕ್ಷಕ್ಕಾಗಿ ಇಂದು ತಪ್ಪದೇ ಈ ಮಂತ್ರವನ್ನು ಜಪಿಸಿ

ಮಹಾವಿಷ್ಣುವಿನ ಕೃಪೆಗಾಗಿ ಇಂದು ತಪ್ಪದೇ ಈ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments