Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 30 ಮೇ 2023 (07:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಮಾತು ನಿಮಗೇ ತಿರುಗುಬಾಣವಾಗುವ ಸಾಧ‍್ಯತೆಯಿದೆ. ಮಾತಿನ ಮೇಲೆ ನಿಗಾ ಇರಲಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಆದಾಯ ಗಳಿಕೆಗೆ ಹೊಸ ದಾರಿಗಳು ಕಂಡುಬರಲಿದೆ.

ವೃಷಭ: ಕಾರ್ಯನಿಮಿತ್ತ ದೀರ್ಘ ಪ್ರಯಾಣ ಮಾಡಬೇಕಾಗುತ್ತದೆ. ನೂತನ ಮಿತ್ರರ ಸಮಾಗಮವಾಗಲಿದೆ. ಧನ ಸಂಪತ್ತು ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ: ಉದ್ಯೋಗ, ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಲಿದ್ದೀರಿ. ಸ್ನೇಹಿತರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ.

ಕರ್ಕಟಕ: ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಆಸಕ್ತಿ ಹೆಚ್ಚಾಗುವುದು. ಇಷ್ಟಮಿತ್ರರೊಂದಿಗೆ ಸುಂದರ ಕ್ಷಣ ಕಳೆಯುವಿರಿ.  ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಸಿಂಹ: ಧಾರ್ಮಿಕ ಚಟುವಟಿಕೆಯಲ್ಲಿ ಭಾಗಿಯಾಗಲಿದ್ದೀರಿ. ಹಿರಿಯರು ಸತ್ಕಾರ್ಯಗಳಿಂದ ನೆಮ್ಮದಿ ಕಂಡುಕೊಳ್ಳಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ತಾಳ್ಮೆಯಿರಲಿ.

ಕನ್ಯಾ: ಆಸ್ತಿ ವಿಚಾರದಲ್ಲಿ ಮಹತ್ವದ ತೀರ್ಮಾನ ಹೊರಬೀಳಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬರಲಿದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ತುಲಾ: ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಾರ್ಯದೊತ್ತಡ ಕಂಡುಬರಲಿದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಯಸಲಿದ್ದೀರಿ.

ವೃಶ್ಚಿಕ: ವಿಶೇಷ ವ್ಯಕ್ತಿಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ಮನೆಗೆ ಬಂಧು ಮಿತ್ರರ ಭೇಟಿ ಸಾಧ‍್ಯತೆ. ಹಣಕಾಸಿನ ಖರ್ಚು ವೆಚ್ಚಗಳು ಕಂಡುಬರಲಿದೆ. ನೆರೆಹೊರೆಯವರಿಂದ ಸಹಕಾರ ಕಂಡುಬರಲಿದೆ.

ಧನು: ಬೇರೆಯವರ ಕೆಲಸ ನಿಮಿತ್ತ ನೀವು ಪರಿಶ್ರಮಪಡುವ ಸಂದರ್ಭ ಎದುರಾದೀತು. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗುವುದು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಮಕರ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಮಹಿಳೆಯರಿಗೆ ಕೂಡಿಟ್ಟ ಹಣ ಉಪಯೋಗಕ್ಕೆ ಬರಲಿದೆ.  ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.

ಕುಂಭ: ಉತ್ತಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ಹಿಂದೆ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ಸಂಗಾತಿಯ ಸಹಕಾರ ಕಂಡುಬರುವುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗುವುದು. ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?