ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 1 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅನಿರೀಕ್ಷಿತ ಧನ ಸಂಪತ್ತು ನಿಮ್ಮದಾಗಲಿದೆ. ಹೊಸ ಉದ್ಯೋಗಾವಕಾಶಗಳು ಬಂದಾಗ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ಆಸ್ತಿ ವಿಚಾರಗಳಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ವಿವಾದಗಳು ಬಗೆಹರಿಯಲಿವೆ. ಧನಾರ್ಜನೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.

ಮಿಥುನ: ನಿರೀಕ್ಷೆಗೂ ಮೀರಿ ಧನಾರ್ಜನೆಯಾಗಲಿದೆ. ಪಾಲುದಾರಿಕಾ ವೃತ್ತಿಯಲ್ಲಿ ನಿರೀಕ್ಷಿತ ಅಭಿವೃದ್ಧಿ ಕಂಡುಬರುವುದು. ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ಉದ್ಯೋಗ, ವ್ಯವಹಾರಗಳಲ್ಲಿ ಗೌರವಾದರಗಳು ಹೆಚ್ಚಾಗಲಿವೆ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಯಿರಲಿ. ಬಂಧು ಮಿತ್ರರ ಭೇಟಿ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿಯಿರಲಿದೆ.

ಸಿಂಹ: ಸರಿಯಾದ ಸಂದರ್ಭದಲ್ಲಿ ಸರಿಯಾದ ರೀತಿಯ ತೀರ್ಮಾನ ಕೈಗೊಳ್ಳುವುದರಿಂದ ಸಮಸ್ಯೆಗಳು ಪರಿಹಾರವಾಗಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕನ್ಯಾ: ಯೋಜಿತ ರೀತಿಯಲ್ಲೇ ಕಾರ್ಯಗಳು ಸಾಗುವುದರಿಂದ ಅಭಿವೃದ್ಧಿ ಕಂಡುಬರುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಹಣಕಾಸಿನ ವಿಚಾರದಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ.

ತುಲಾ: ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಮಕ್ಕಳ ನಿಮಿತ್ತ ಖರ್ಚು ವೆಚ್ಚಗಳು ಕಂಡುಬಂದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯಸಾಧನೆಯಾದ ಸಂತೃಪ್ತಿ ನಿಮ್ಮದಾಗಲಿದೆ. ವಿವೇಚನೆಯಿಂದ ತೀರ್ಮಾನ ಕೈಗೊಳ್ಳಲಿದ್ದೀರಿ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ನಿಮ್ಮ ಕೆಲಸದ ಬಗ್ಗೆ ಬೇರೆಯವರಿಂದ ಹೊಗಳಿಕೆ ವ್ಯಕ್ತವಾಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಾಗುತ್ತದೆ. ಮಾತಿನ ಮೇಲೆ ನಿಗಾ ಇರಲಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಮಕರ: ನಿಮ್ಮದಲ್ಲದ ತಪ್ಪಿಗೆ ತೊಂದರೆಗೆ ಸಿಲುಕಿಕೊಳ್ಳಲಿದ್ದೀರಿ. ಮಾತೃ ಸಮಾನರಿಂದ ಪ್ರೋತ್ಸಾಹ ಕಂಡುಬರುವುದು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರ ವಹಿಸಿ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಸ್ವಯಂ ವೃತ್ತಿಯವರಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗಬಹುದು. ಇಷ್ಟ ಮಿತ್ರರನ್ನು ಭೇಟಿಯಾಗಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮೀನ: ನಿಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕೆಲಸ ಮಾಡಬೇಕಾಗುತ್ತದೆ. ಉದ್ದಿಮೆದಾರರಿಗೆ ಹೊಸ ಬಂಡವಾಳ ಹೂಡಿಕೆಗೆ ಅವಕಾಶ ಸಿಗಲಿದೆ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಅಂಬಾ ಪಂಚರತ್ನ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಗುರುವಾರ ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಗಣಪತಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಪಠಿಸಿ

ಇಂದು ಚಂದ್ರಗ್ರಹಣ: ಕರ್ನಾಟಕದಲ್ಲಿ ಎಷ್ಟು ಹೊತ್ತು ಗೋಚರ, ಈ ರಾಶಿಗೆ ಲಾಭದಾಯಕ

ಇಂದು ದುರ್ಗಾದೇವಿಯ ಈ ಮಂತ್ರವನ್ನು ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments