ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಕಂಡುಬಂದರೂ ಧನಗಳಿಕೆಗೆ ಹಲವು ಮೂಲಗಳು ಕಂಡುಬರಲಿದೆ. ಆರ್ಥಿಕ ಯೋಜನೆಗಳನ್ನು ಮಾಡಲಿದ್ದೀರಿ. ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ.
ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೊಸಬರನ್ನು ಪರಿಚಯ ಮಾಡಿಕೊಳ್ಳಲಿದ್ದೀರಿ. ನಿಮ್ಮ ಕಾರ್ಯಕ್ಷಮತೆ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ. ಪ್ರೇಮಿಗಳಿಗೆ ಆತಂಕದ ಗಳಿಗೆ ಎದುರಾದೀತು. ತಾಳ್ಮೆಯಿರಲಿ.
ಮಿಥುನ: ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ. ಕಾರ್ಯರಂಗದಲ್ಲಿ ನಿಮ್ಮ ಕಾಲೆಳೆಯುವವರಿರುತ್ತಾರೆ. ಎಚ್ಚರಿಕೆ ಅಗತ್ಯ.
ಕರ್ಕಟಕ: ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಕಂಡುಬರಲಿದೆ. ಪಾಲಿಗೆ ಬಂದಿದ್ದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.
ಸಿಂಹ: ವಿದ್ಯಾರ್ಥಿಗಳು ಹೊಸ ಪರೀಕ್ಷೆಗೆ ಸಿದ್ಧರಾಗಬೇಕಾಗುತ್ತದೆ. ಅಪರಿಚಿತರಿಂದಲೂ ನೆರವಾಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.
ಕನ್ಯಾ: ಪ್ರಭಾವೀ ವ್ಯಕ್ತಿಗಳ ಕೃಪಾಕಟಾಕ್ಷ ಪಡೆಯಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ವೈಯಕ್ತಿಕ ವಿಚಾರದಲ್ಲಿ ಮೂರನೆಯವರ ಮಧ್ಯಪ್ರವೇಶಕ್ಕೆ ಅವಕಾಶ ಕೊಡಬೇಡಿ. ದಿನದಂತ್ಯಕ್ಕೆ ನೆಮ್ಮದಿಯಿರಲಿ.
ತುಲಾ: ಕಚೇರಿಯಲ್ಲಿ ನಿಮ್ಮ ಕೆಲಸಗಳಿಗೆ ಸಹೋದ್ಯೋಗಿಗಳ ನೆರವು ಪಡೆಯಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ. ವಂಚನೆಗೊಳಗಾಗುವ ಸಾಧ್ಯತೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.
ವೃಶ್ಚಿಕ: ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಧನು: ನಿಮ್ಮ ಸ್ನೇಹಿತರ ಮೇಲಿದ್ದ ವಿಶ್ವಾಸಕ್ಕೆ ಧಕ್ಕೆಯಾಗುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಹಣಕಾಸಿನ ಅಡಚಣೆ ಎದುರಾದೀತು. ಮಕ್ಕಳಿಂದ ಪ್ರಶಂಸೆ ಸಿಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.
ಮಕರ: ಸೂಕ್ತ ರೀತಿಯಲ್ಲಿ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ನೋಡುವ ಪರಿಸ್ಥಿತಿ. ಹಿರಿಯರ ಸಲಹೆ ಪಡೆಯುವುದು ಉತ್ತಮ. ಕಾರ್ಯಕ್ಷೇತ್ರದಲ್ಲಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ದೇವತಾ ಪ್ರಾರ್ಥನೆ ಮಾಡಿ.
ಕುಂಭ: ನಿಮ್ಮಲ್ಲಿರುವ ವಸ್ತುವನ್ನು ಇತರರೊಂದಿಗೆ ಹಂಚಿಕೊಳ್ಳುವ ಪರಿಸ್ಥಿತಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ನಿಮ್ಮ ಆದಾಯ ಮೂಲಕ್ಕೆ ತೊಂದರೆ ಎದುರಾದೀತು. ಸಹನೆ, ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಬೇಕಾಗುತ್ತದೆ.
ಮೀನ: ಉದ್ದೇಶಿತ ಕೆಲಸಗಳಿಗೆ ಅಡಚಣೆಗಳು ಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ಕಾರ್ಯರಂಗದಲ್ಲಿ ಹೊಸಜನರ ಭೇಟಿ ಮಾಡಲಿದ್ದೀರಿ. ಸಮಯಕ್ಕೆ ಗೌರವ ನೀಡಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ.