Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 3 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ನಿಷ್ಠೆ, ಪ್ರಾಮಾಣಿಕತೆಯಿಂದ ಕೀರ್ತಿ ಸಂಪಾದಿಸಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ತಾಳ್ಮೆಯಿರಲಿ.

ವೃಷಭ: ಜವಾಬ್ಧಾರಿಯುತ ಕಾರ್ಯವೈಖರಿಯಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಇಷ್ಟಮಿತ್ರರೊಂದಿಗೆ ಸುಂದರ ಕ್ಷಣ ಕಳೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ಅಧಿಕ ಕೆಲಸದೊತ್ತಡದಿಂದ ಆಪ್ತರೊಂದಿಗೆ ಸಮಯ ಕಳೆಯಲು ಸಾಧ‍್ಯವಾಗದ ಪರಿಸ್ಥಿತಿ. ಪ್ರಾಮಾಣಿಕ ಪ್ರಯತ್ನಗಳಿಗೆ ಫಲ ನೀಡಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಕರ್ಕಟಕ: ವಿಶೇಷ ವ್ಯಕ್ತಿಗಳಿಂದ ನಿಮ್ಮ ಜೀವನಕ್ಕೆ ಹೊಸ ತಿರುವು ಸಿಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ. ಇಷ್ಟ ಭೋಜನ ಮಾಡುವ ಯೋಗ. ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.

ಸಿಂಹ: ಹಿರಿಯರೊಂದಿಗೆ ಸಮಾಧಾನದೊಂದಿಗೆ ವರ್ತಿಸಿ. ಸಾಲ ಮಾಡುವ ಮುನ್ನ ಯೋಚಿಸಿ. ಸಂಗಾತಿಯ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಕೌಟುಂಬಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಕಾರ್ಯರಂಗದಲ್ಲಿ ನಿಮ್ಮ ಶತ್ರುಗಳಿಂದ ತೊಂದರೆಗಳು ಎದುರಾದೀತು. ದೂರದ ಮಿತ್ರರನ್ನು ಭೇಟಿ ಮಾಡುವ ಯೋಗ. ವಾಕ್ಚತುರತೆಯಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ವೈವಾಹಿಕ ಸಂಬಂಧಗಳಲ್ಲಿ ಬಿರುಕು ಮೂಡದಂತೆ ಎಚ್ಚರಿಕೆ ವಹಿಸಿ. ಸಹೋದರ ಸಮಾನರೊಂದಿಗೆ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ.

ವೃಶ್ಚಿಕ: ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ. ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಕೆಲಸ ಕಾರ್ಯಗಳಲ್ಲಿ ನಿಮಗೆ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಅಧ್ಯಯನಶೀಲರಿಗೆ ಉತ್ತಮ ಅವಕಾಶಗಳು ಕಂಡುಬರಲಿದೆ. ವಾಹನ ರಿಪೇರಿ ಕೆಲಸಗಳಿಗೆ ಧನವ್ಯಯವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಮನರಂಜನಾ ವೃತ್ತಿಯಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಪತಿ-ಪತ್ನಿಯರ ನಡುವೆ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಾಗುವ ಸಾಧ‍್ಯತೆ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆ.

ಮೀನ: ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿ. ದಂಪತಿಗಳಲ್ಲಿ ಹೊಂದಾಣಿಕೆ ಕೊರತೆ ಕಂಡುಬಂದೀತು. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?