Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 11 ಜೂನ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಪ್ರಯಾಸಪಡಬೇಕಾದೀತು. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಕಂಡುಬರಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣವಿರಲಿ.

ವೃಷಭ: ನಿಮ್ಮ ಕೆಲಸ ಕಾರ್ಯಗಳ ನಿಮಿತ್ತ ಇನ್ನೊಬ್ಬರನ್ನು ಆಶ್ರಯಿಸಬೇಕಾದ ಪರಿಸ್ಥಿತಿಯಿರಲಿದೆ. ನಾಯಕತ್ವ ಗುಣದಿಂದ ಇತರರನ್ನು ನಿಮ್ಮತ್ತ ಸೆಳೆಯಲಿದ್ದೀರಿ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ.

ಮಿಥುನ: ನಿರುದ್ಯೋಗಿಗಳಿಗೆ ಯೋಗ್ಯತೆಗೆ ಅನುಸಾರವಾಗಿ ಉದ್ಯೋಗ ಸಿಗುವುದು. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರುವುದು. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಕುಟುಂಬ ಸೌಖ್ಯಕ್ಕಾಗಿ ಕೆಲವೊಂದು ತೀರ್ಮಾನಗಳನ್ನು ಕೈಗೊಳ್ಳಬೇಕಾಗುತ್ತದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ.

ಸಿಂಹ: ನಿಮ್ಮಲ್ಲಿರುವ ವಿಶೇಷ ಪ್ರತಿಭೆಗಳನ್ನು ಹೊರಹಾಕಲು ಅವಕಾಶ ಸಿಗುವುದು. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ವಸ್ತು ಸ್ಥಿತಿ ಅರಿತು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ತಾಳ್ಮೆಯಿರಲಿ.

ಕನ್ಯಾ: ನಿಮ್ಮ ಬೆನ್ನ ಹಿಂದೆ ನಡೆಯುತ್ತಿದ್ದ ಪಿತೂರಿಗಳು ಬೆಳಕಿಗೆ ಬರಲಿವೆ. ಮಕ್ಕಳ ಭವಿಷ್ಯದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗುವುದು. ಹಿರಿಯರ ಕೆಲಸಗಳಲ್ಲಿ ಸಹಾಯ ಮಾಡಲಿದ್ದೀರಿ. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ದುಂದು ವೆಚ್ಚಕ್ಕೆ ಕಡಿವಾಣವಿರಲಿ.

ವೃಶ್ಚಿಕ: ಸರಕಾರಿ ಲೆಕ್ಕಪತ್ರಗಳನ್ನು ಕಳೆದುಕೊಳ್ಳುವ ಭೀತಿ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ಇನ್ನೊಬ್ಬರಿಗೆ ಮಾಡುವ ಸಣ್ಣ ಪುಟ್ಟ ಸಹಾಯಗಳಿಂದ ನೆಮ್ಮದಿ ಕಂಡುಕೊಳ್ಳಲಿದ್ದೀರಿ. ಬಂಧು ಮಿತ್ರರ ಭೇಟಿ ಸಾಧ‍್ಯತೆ. ಅನಿರೀಕ್ಷಿತ ಧನಾಗಮನವಾಗಲಿದೆ. ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.

ಮಕರ: ವ್ಯವಹಾರದಲ್ಲಿ ಪಾಲುದಾರರೊಂದಿಗೆ ಭಿನ್ನಾಭಿಪ್ರಾಯಗಳಾಗುವ ಸಾಧ‍್ಯತೆ. ಶಾಂತ ಚಿತ್ತರಾಗಿ ಯೋಚಿಸಿ ಪರಿಹಾರ ಕಂಡುಕೊಳ್ಳಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ.  ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರುವುದು. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಮೀನ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಭೂಮ್ಯಾದಿ ವ್ಯವಹಾರಗಳಿಗೆ ಅನುಕೂಲಕರ ದಿನವಾಗಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ಗ್ರಹ ದೋಷ ನಿವಾರಣೆಗೆ ಏನು ಮಾಡಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಕ್ಕಳಿಗೆ ವಿದ್ಯೆ ತಲೆಗೆ ಹತ್ತದಿರಲು ಯಾವ ದೋಷ ಕಾರಣ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮನೆಯ ಮುಂಭಾಗದಲ್ಲಿ ಈ ಕೆಲವು ಗಿಡಗಳಿದ್ದರೆ ದರಿದ್ರ ತಪ್ಪಿದ್ದಲ್ಲ

ಮುಂದಿನ ಸುದ್ದಿ
Show comments