Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 16 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನೀವು ಹಿಂದೆ ಮಾಡಿದ ಒಳ್ಳೆಯ ಕೆಲಸಗಳೇ ನಿಮ್ಮ ಕೈ ಹಿಡಿಯಲಿವೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ.

ವೃಷಭ: ಬೆಟ್ಟದಂತೆ ಬಂದ ಕಷ್ಟಗಳು ಮಂಜಿನಂತೆ ಪರಿಹಾರವಾಗಲಿದೆ. ಸಂಗಾತಿಯ ಸಮಯೋಚಿತ ಸಲಹೆಗಳು ಉಪಯೋಗಕ್ಕೆ ಬರಲಿದೆ. ವ್ಯಾವಹಾರಿಕವಾಗಿ ಮುನ್ನಡೆ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.

ಮಿಥುನ: ಹೊಸದಾಗಿ ಮದುವೆಯಾಗಿದ್ದವರಿಗೆ ಮಧುಚಂದ್ರದ ಭಾಗ್ಯ. ಕಾಲಕ್ಕೆ ತಕ್ಕಂತೆ ಕೆಲವು ನಿರ್ಧಾರ, ಅಭ್ಯಾಸಗಳನ್ನು ಬದಲಾಯಿಸಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಕಂಡುಬರಲಿದೆ.

ಕರ್ಕಟಕ: ಕಾರ್ಯರಂಗದಲ್ಲಿ ನಿಮ್ಮ ಶತ್ರುಗಳಿಂದ ಪೈಪೋಟಿ ಎದುರಾದಿತು. ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ. ಹಣಕಾಸಿನ ಹರಿವಿದ್ದಷ್ಟೇ ಖರ್ಚೂ ಕಂಡುಬರಲಿದೆ. ಆತ್ಮೀಯರನ್ನು ಭೇಟಿಯಾಗಲಿದ್ದೀರಿ.

ಸಿಂಹ: ಮನೆಯಲ್ಲಿ ಕೆಲವೊಂದು ತೀರ್ಮಾನಗಳನ್ನು ಕೈಗೊಳ್ಳುವಾಗ ಭಿನ್ನಾಭಿಪ್ರಾಯಗಳು ಕಂಡುಬಂದೀತು. ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಮಕ್ಕಳಿಂದ ಸಂತೋಷ, ನೆಮ್ಮದಿ ಸಿಗುವುದು.

ಕನ್ಯಾ: ಹಣಕಾಸಿನ ವಿಚಾರದಲ್ಲಿ ಲೆಕ್ಕಾಚಾರ ತಪ್ಪುವ ಸಾಧ್ಯತೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಕೆಲವು ದಿನ ಕಾಯುವುದು ಉತ್ತಮ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ದೈವಾನುಕೂಲದಿಂದ ಇಂದು ನೀವು ಕೈಗೆತ್ತಿಕೊಳ್ಳುವ ಕೆಲಸಗಳಲ್ಲಿ ಜಯ ಸಿಗುವುದು. ಹೊಸ ಜನರನ್ನು ಭೇಟಿಯಾಗಲಿದ್ದೀರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರುವುದು. ತಾಳ್ಮೆಯಿರಲಿ.

ವೃಶ್ಚಿಕ: ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಬೇಕಾಗುತ್ತದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವೃತ್ತಿರಂಗದಲ್ಲಿ ಪೈಪೋಟಿಗಳು ಎದುರಾದೀತು. ಮಾತಿನ ಮೇಲೆ ನಿಗಾ ಇರಲಿ.

ಧನು: ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗುವ ಸಾಧ‍್ಯತೆ. ದಾಂಪತ್ಯ ಸುಖಕ್ಕೆ ಕೊರತೆಯಿರದು. ದೇವತಾ ಪ್ರಾರ್ಥನೆ ಮಾಡಿ.

ಮಕರ: ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾದೀತು. ಸ್ವಯಂ ವೃತ್ತಿಯವರಿಗೆ ಲಾಭಕರ ದಿನ. ಶುಭ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಕುಂಭ: ಅನ್ಯರ ಚಾಡಿ ಮಾತುಗಳಿಂದ ಮನಸ್ಸಿಗೆ ನೋವಾಗುವ ಪ್ರಸಂಗ ಎದುರಾದೀತು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಮನಸ್ಸಿಗೆ ಖುಷಿ ನೀಡಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ಮೀನ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?