Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 18 ಜೂನ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರ. ಇಷ್ಟ ಭೋಜನ ಮಾಡುವ ಯೋಗ. ಆದರೆ ನಾಲಿಗೆ ಚಪಲಕ್ಕೆ ಕಡಿವಾಣವಿರಲಿ. ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾಗಿಬರಲಿದೆ. ಮಾತಿನ ಮೇಲೆ ನಿಗಾ ಇರಲಿ. ಹಣಕಾಸಿನ ವ್ಯವಹಾರದಲ್ಲಿ ಬೇಋಎಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಬೇರೆಯವರ ಸಲಹೆಗಳನ್ನು ಅಲಕ್ಷಿಸುವುದು ಬೇಡ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಅನಗತ್ಯ ಚಿಂತೆ ಬೇಡ.

ಕರ್ಕಟಕ: ಧಾರ್ಮಿಕ ಚಟವಟಿಕೆಗಳಲ್ಲಿ  ತೊಡಗಿಸಿಕೊಳ್ಳಲಿದ್ದೀರಿ. ಕೌಟುಂಬಿಕವಾಗಿ ಸುಖ, ಸಮೃದ್ಧಿಯ ದಿನ. ಮಕ್ಕಳ ಜೀವನದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಸಿಂಹ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಕನ್ಯಾ: ಗೃಹ ಸಂಬಂಧೀ ವಿಚಾರವಾಗಿ ಖರ್ಚು ವೆಚ್ಚಗಳಾದೀತು. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಸುಧಾರಣೆಯಾಗಲು ಅವಕಾಶ ಸಿಗುವುದು. ಮಹಿಳೆಯರಿಗೆ ಗೃಹ ಸಂಬಂಧೀ ಕೆಲಸಗಳಿಂದ ಬಿಡುವು ಸಿಗುವುದು.

ತುಲಾ: ಜವಾಬ್ಧಾರಿಯುತ ಕಾರ್ಯನಿರ್ವಹಣೆಯಿಂದ ಇತರರ ಮೆಚ್ಚುಗೆಗೆ ವ್ಯಕ್ತವಾಗಲಿದೆ. ನಿಮ್ಮ ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ. ಗುರುಹಿರಿಯರ ಸಲಹೆ ಪಡೆದು ಕೆಲಸ ಮಾಡಲಿದ್ದೀರಿ.

ವೃಶ್ಚಿಕ: ಯಾವುದೇ ಕೆಲಸ ಆರಂಭಿಸುವ ಮುನ್ನ ಉತ್ಸಾಹವಿರಲಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದಾರೆ. ದಿನದಂತ್ಯಕ್ಕೆ ನೆಮ್ಮದಿ.

ಧನು: ಸಹೋದರ ಸಮಾನರೊಂದಿಗಿನ ಭಿನ್ನಾಭಿಪ್ರಾಯಗಳು ಸರಿ ಹೋಗಲಿವೆ. ಎಷ್ಟೇ ಕಷ್ಟವಾದರೂ ಅಂದುಕೊಂಡ ಕೆಲಸ ಪೂರ್ತಿಮಾಡಲಿದ್ದೀರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಚಿಂತೆ ಬೇಡ.

ಮಕರ: ಸರಕಾರೀ ನೌಕರರಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ ಹೆಚ್ಚಾಗಲಿದೆ.

ಮೀನ: ಹಿರಿಯರ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಸಮಸ್ಯೆಗಳಾಗಲಿದೆ. ಅನಿರೀಕ್ಷಿತವಾಗಿ ಹಣಕಾಸಿನ ಖರ್ಚು ವೆಚ್ಚವಾಗುವ ಸಾಧ‍್ಯತೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ದಿನದಂತ್ಯಕ್ಕೆ ನೆಮ್ಮದಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?