ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 28 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಸಂತೋಷವನ್ನು ನಿಮ್ಮ ಕೆಲಸಗಳಿಂದ ಕಂಡುಕೊಳ್ಳಲಿದ್ದೀರಿ. ಚಾಡಿ ಮಾತುಗಳನ್ನು ಅಲಕ್ಷಿಸುವುದೇ ಉತ್ತಮ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಜಯ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಸುಧಾರಣೆಗಾಗಿ ಮೇಲಧಿಕಾರಿಗಳ ವಿಶ್ವಾಸ ಗಳಿಸುವ ಕೆಲಸ ಮಾಡಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಿಥುನ: ಗುರುಹಿರಿಯರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಕರ್ಕಟಕ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಂದರ್ಭಕ್ಕೆ ಸರಿಯಾಗಿ ಪರರ ಸಹಾಯವೊದಗಿಬರಲಿದೆ. ಸಾಂಸಾರಿಕ ಸುಖ, ಸಮೃದ್ಧಿ ಕಂಡುಬರಲಿದೆ. ಮಕ್ಕಳಿಂದ ಸುಖ, ಸಂತೋಷ ಪ್ರಾಪ್ತಿಯಾಗಲಿದೆ.

ಸಿಂಹ: ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಯಂತ್ರೋಪಕರಣಗಳ ರಿಪೇರಿ ಕೆಲಸಗಳಿಗಾಗಿ ಧನವ್ಯಯವಾಗಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಕನ್ಯಾ: ಕಾರ್ಯರಂಗದಲ್ಲಿ ಎದುರಾಳಿಗಳಿಂದ ಪೈಪೋಟಿ ಎದುರಾಗಲಿದೆ. ಸರಕಾರೀ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿಯಿರುವುದು.

ತುಲಾ: ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದೂರದ ವ್ಯವಹಾರಗಳಿಂದ ವರಮಾನ ಹೆಚ್ಚಳವಾಗಲಿದೆ. ತಾಳ್ಮೆಯಿರಲಿ.

ವೃಶ್ಚಿಕ: ದಂಪತಿಗಳಲ್ಲಿ ಪರಸ್ಪರ ಸಹಕಾರ ಕಂಡುಬರಲಿದೆ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ವ್ಯಾಪಾರಿಗಳಿಗೆ ಕೊಂಚ ಹಿನ್ನಡೆಯಾದರೂ ನಷ್ಟವಾಗದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗಕ್ಕಾಗಿ ಪ್ರಯತ್ನ ಮುಂದುವರಿಸಬೇಕಾಗುತ್ತದೆ. ನೂತನ ಮಿತ್ರರನ್ನು ಸಂಪಾದಿಸಲಿದ್ದೀರಿ. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ.

ಮಕರ: ಉದ್ಯೋಗ, ವ್ಯವಹಾರಗಳಲ್ಲಿ ಚೇತರಿಕೆ ಕಂಡುಬರಲಿದೆ. ಅವಿವಾಹಿತರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾಗಿ ಬರಲಿದೆ. ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ ಕಂಡುಬರಲಿದೆ. ಸತ್ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಬೇಡ. ದೀರ್ಘ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ವಿದ್ಯಾರ್ಥಿಗಳಿಗೆ ಮುನ್ನಡೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಬುಧವಾರ ಶಾರದಾ ದೇವಿಯ ಈ ಪ್ರಾರ್ಥನಾ ಮಂತ್ರ ಹೇಳಿ

ಜ್ಯೋತಿಷ್ಯ ಪ್ರಕಾರ ಮೀನ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಏಕಾದಶಮುಖ ಹನುಮತ್ಕವಚ ಸ್ತೋತ್ರಂ ಕನ್ನಡದಲ್ಲಿ

ಜ್ಯೋತಿಷ್ಯ ಪ್ರಕಾರ ಕುಂಭ ರಾಶಿಯವರು ಯಾವ ಆರೋಗ್ಯ ಸೇವಿಸಬೇಕು

ಶಿವ ಷಡಕ್ಷರೀ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments