Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶುಕ್ರವಾರ, 30 ಜೂನ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಕೆಲಸ ಕಾರ್ಯಗಳಿಗೆ ಗುರು ಹಿರಿಯರ ಆಶೀರ್ವಾದ ಸಿಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ತಾಳ್ಮೆಯಿರಲಿ.

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡದಿಂದ ಆತ್ಮೀಯರ ಮೇಲೆ ರೇಗಾಡುವ ಸಂದರ್ಭಗಳು ಬರಬಹುದು. ಮಾತಿನ ಮೇಲೆ ನಿಗಾ ಇರಲಿ. ಮಕ್ಕಳಿಂದ ಸಂತೋಷ, ನೆಮ್ಮದಿ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ನಿರೀಕ್ಷೆಗೂ ಮೀರಿ ಆದಾಯ ಗಳಿಕೆಯಾಗಲಿದ್ದು, ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸೂಕ್ತ ಸಮಯ. ಸನ್ಮಿತ್ರರಿಂದ ಸಹಕಾರ ನಿರೀಕ್ಷಿಸಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಸಿಂಹ: ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ, ಮುನ್ನಡೆ ನಿರೀಕ್ಷಿಸಬಹುದು. ನಿಗದಿತ ಸಮಯಕ್ಕೆ ಹಣಕಾಸಿನ ಸಹಾಯವೊದಗಿಬರಲಿದೆ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ಚಿಂತೆ ಬೇಡ.

ಕನ್ಯಾ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು.

ತುಲಾ: ಬೇರೆಯವರ ಸಮಸ್ಯೆಗಳಿಗೆ ಹೆಗಲುಕೊಡಲಿದ್ದೀರಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಸನ್ಮಿತ್ರರಿಂದ ಪ್ರೋತ್ಸಾಹ ಸಿಗುವುದು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಪರಿಹಾರ ಸಿಗಲಿದೆ. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ ಸಿಗುವುದು.

ಧನು: ಸರಕಾರೀ ಕೆಲಸದಲ್ಲಿರುವವರಿಗೆ ಕಾರ್ಯದೊತ್ತಡ ಕಂಡುಬಂದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಯಿರಲಿ. ವ್ಯವಹಾರಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ.

ಮಕರ: ಮನರಂಜನಾ ವೃತ್ತಿಯಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಕಾರ್ಯನಿಮಿತ್ತ ದೀರ್ಘ ಪ್ರಯಾಣ ಮಾಡಬೇಕಾಗಿ ಬಂದೀತು. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ಕುಂಭ: ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ. ಪಾಲು ಬಂಡವಾಳ ಹೂಡಿಕೆ ವ್ಯವಹಾರಗಳಿಂದ ಲಾಭ ಕಂಡುಬರುವುದು. ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಸಂತೋಷ ಸಿಗಲಿದೆ.

ಮೀನ: ಆಸ್ತಿ ಖರೀದಿ ವಿಚಾರದಲ್ಲಿ ಅಡೆತಡೆಗಳು ಬಂದೀತು. ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ದೇವಾಲಯ ಸಂದರ್ಶನ ಯೋಗ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?