Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಭಾನುವಾರ, 2 ಜುಲೈ 2023 (07:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮಕ್ಕಳ ಖುಷಿಗಾಗಿ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ಕೊಡಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಮಾತಿನ ಮೇಲೆ ನಿಗಾ ಇರಲಿ. ಇಷ್ಟ ಭೋಜನ ಮಾಡುವ ಯೋಗ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ವೃಷಭ: ನಿಮ್ಮದಲ್ಲದ ತಪ್ಪಿಗೆ ದಂಡ ತೆರುವ ಪ್ರಸಂಗ ಬಂದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ ಸಿಗಲಿದೆ. ತಾಳ್ಮೆಯಿರಲಿ.

ಮಿಥುನ: ಆತುರದಲ್ಲಿ ಕೈಗೊಂಡ ನಿರ್ಧಾರಗಳಿಂದ ಕೈ ಸುಟ್ಟುಕೊಳ್ಳಬೇಕಾದೀತು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ಓದಿನ ಬಗ್ಗೆ ಹೆಚ್ಚು ಪರಿಶ್ರಮಪಡಬೇಕಾದೀತು.

ಕರ್ಕಟಕ: ನಿಮ್ಮ ಸ್ವಭಾವಕ್ಕೆ ವಿರುದ್ಧವಾಗಿ ನಡೆದುಕೊಳ್ಳಬೇಕಾಗುತ್ತದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಸಾಮಾಜಿಕವಾಗಿ ಉತ್ತಮ ಸ್ಥಾನಮಾನಾದಿಗಳು ನಿಮ್ಮದಾಗಲಿದೆ. ಕೌಟುಂಬಿಕವಾಗಿ ಸುಖ, ಸಮೃದ್ಧಿಯಿರುವುದು. ಹಣಕಾಸಿನ ಗಳಿಕೆಗೆ ಹೊಸ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ಕನ್ಯಾ: ಮಕ್ಕಳ ಸಂತೋಷದಲ್ಲಿ ಭಾಗಿಯಾಗಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ನೆರೆಹೊರೆಯವರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗ. ಕಿರು ಸಂಚಾರರ ಮಾಡಲಿದ್ದೀರಿ.

ತುಲಾ: ದಂಪತಿಗಳಲ್ಲಿ ಅನುರಾಗ ವೃದ್ಧಿ. ಕುಟುಂಬ ಸದಸ್ಯರ ನಡುವೆ ಭಿನ್ನಾಭಿಪ್ರಾಯ ಬಾರದರೆ ಎಚ್ಚರಿಕೆ ವಹಿಸಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು. ಪಾಲಿಗೆ ಬಂದ ಅವಕಾಶಗಳನ್ನು ಬಳಸಿಕೊಳ್ಳಿ.

ವೃಶ್ಚಿಕ: ಉದ್ಯೋಗ ಬದಲಾವಣೆಗೆ ನೀವು ಪಡುತ್ತಿದ್ದ ಪ್ರಯತ್ನಕ್ಕೆ ಫಲ ಸಿಗಲಿದೆ. ಮಹಿಳೆಯರು ಅಡುಗೆ ಮನೆ ಉಪಕರಣಗಳಿಂದ ತೊಂದರೆ ಅನುಭವಿಸುವ ಸಾಧ‍್ಯತೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಭೂಮ್ಯಾದಿ ವ್ಯಾಜ್ಯಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳಲಿದ್ದೀರಿ. ಮಕ್ಕಳಿಗೆ ಕಿರು ಪ್ರವಾಸ ಮಾಡುವ ಯೋಗ. ಅನಿರೀಕ್ಷಿತವಾಗಿ ಧನಾಗಮನವಾಗಲಿದೆ. ಬಂಧು ಮಿತ್ರರನ್ನು ಭೇಟಿಯಾಗಲಿದ್ದೀರಿ.

ಮಕರ: ಮನಸ್ಸಿಗೆ ಖುಷಿ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಮನರಂಜನಾ ವೃತ್ತಿಯವರಿಗೆ ಶುಭ, ಲಾಭ ದಿನ. ಸಮಾನ ಮನಸ್ಕರೊಂದಿಗೆ ಮನಸ್ಸಿನ ಮಾತು ಹಂಚಿಕೊಳ್ಳಲಿದ್ದೀರಿ. ಪಿತೃ ಸಮಾನರಿಂದ ಅನುಕೂಲ.

ಕುಂಭ: ವ್ಯಾಪಾರೀ ವರ್ಗದವರಿಗೆ ಲಾಭಕರ ದಿನ. ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚೂ ಇರಲಿದೆ. ಜ್ಞಾನಿಗಳ ಸೂಕ್ತ ಮಾರ್ಗದರ್ಶನ ಸಿಗಲಿದೆ. ನಿಮಗೆ ತಿಳಿದ ವಿದ್ಯೆಯನ್ನು ಇನ್ನೊಬ್ಬರಿಗೆ ಹೇಳುವ ಖುಷಿ ನಿಮ್ಮದಾಗಲಿದೆ.

ಮೀನ: ಮಕ್ಕಳ ನಿಮಿತ್ತ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಗೃಹಕೃತ್ಯಗಳಲ್ಲಿ ಅಡಚಣೆಗಳು ಕಂಡುಬಂದೀತು. ಕುಲದೇವರ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?