ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 4 ಜುಲೈ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಹತ್ವದ ತೀರ್ಮಾನ ಕೈಗೊಳ್ಳಲೇಬೇಕಾದ ಪರಿಸ್ಥಿತಿ ಎದುರಾಗಲಿದೆ. ಗುರುಹಿರಿಯರ ಪ್ರೋತ್ಸಾಹದಿಂದ ಪ್ರಗತಿ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ ನಿಮ್ಮದಾಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದೀತು. ಹಣಕಾಸಿನ ವಿಚಾರದಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ.

ಮಿಥುನ: ನಿಮ್ಮ ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯವೈಖರಿ ಮೇಲಧಿಕಾರಿಗಳ ಮೆಚ್ಚುಗೆ ಪಡೆಯಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಸಿಗಲಿವೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ನಿಮ್ಮಲ್ಲಿರುವ ಕ್ರಿಯಾತ್ಮಕ ಶಕ್ತಿಯನ್ನು ಹೊರಹಾಕುವ ಅವಕಾಶ ಸಿಗಲಿದೆ. ಯಂತ್ರೋಪಕರಣಗಳೊಂದಿಗೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ. ದೈಹಿಕವಾಗಿ ನೋವು ಉಂಟಾಗುವ ಸಾಧ‍್ಯತೆ.

ಸಿಂಹ: ಅಧ್ಯಯನ ಪ್ರವೃತ್ತರಿಗೆ ಉನ್ನತಿಯ ಯೋಗ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಬಂಧು ಮಿತ್ರರನ್ನು ಭೇಟಿ ಮಾಡಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ.

ಕನ್ಯಾ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಉನ್ನತ ವ್ಯಾಸಂಗಕ್ಕೆ ಪ್ರಯತ್ನಿಸುವವರಿಗೆ ಮುನ್ನಡೆಯಿರಲಿದೆ. ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರುವುದು. ಅನಗತ್ಯ ಚಿಂತೆ ಬೇಡ.

ತುಲಾ: ನಿಮ್ಮ ಹಳೆಯ ಬಾಕಿಗಳು ಸಂದಾಯವಾಗಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದಾರೆ. ಇಷ್ಟ ಮಿತ್ರರನ್ನು ಭೇಟಿಯಾಗುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ಸಾಮಾಜಿಕವಾಗಿ ಜನ ಮನ್ನಣೆಗೆ ಪಾತ್ರರಾಗಲಿದ್ದೀರಿ. ನೀವು ಮಾಡುವ ಕೆಲಸಗಳಿಂದ ಬೇರೆಯವರಿಗೂ ಉಪಕಾರವಾದೀತು. ಬಡ್ಡಿ ವ್ಯವಹಾರ ಮಾಡುವವರಿಗೆ ಹಿನ್ನಡೆಯಾದೀತು. ತಾಳ್ಮೆಯಿರಲಿ.

ಧನು: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ನಿಮ್ಮಿಂದ ಹಿಂದೆ ಸಹಾಯ ಪಡೆದವರಿಂದ ಪ್ರತ್ಯುಪಕಾರ ಸಿಗುವುದು. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ಮಕರ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಇಷ್ಟ ಭೋಜನ ಮಾಡುವ ಯೋಗ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ಕುಂಭ: ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾದೀತು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಪ್ರಶಂಸೆ ಸಿಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಪರಿಹಾರವಾಗಲಿದೆ. ತಾಂತ್ರಿಕ ವೃತ್ತಿಯವರಿಗೆ ಕಾರ್ಯದೊತ್ತಡ ಕಂಡುಬರಲಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಕಿರು ಸಂಚಾರ ಮಾಡಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಓದಬೇಕಾದ ಗಣೇಶ ಸ್ತೋತ್ರ

ಮಂಗಳವಾರ ಆಂಜನೇಯನ ಕೃಪೆಗೆ ಹನುಮದಷ್ಟಕಂ ಓದಿ

ಶ್ರೀ ಕಾಲಭೈರವ ಬ್ರಹ್ಮ ಕವಚಂ ಸ್ತೋತ್ರವನ್ನು ತಪ್ಪದೇ ಓದಿ

ಶನಿ ಮಂತ್ರಗಳನ್ನು ಜಪಿಸಲು ಬೆಸ್ಟ್ ಟೈಂ ಯಾವುದು

ಲಕ್ಷ್ಮಿಯ ಅನುಗ್ರಹಕ್ಕಾಗಿ ಚತುರ್ವಿಂಶತಿ ಸ್ತೋತ್ರ

ಮುಂದಿನ ಸುದ್ದಿ
Show comments