Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 5 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಾಹನ, ಭೂಮಿ ಇತ್ಯಾದಿ ಖರೀದಿ ವಿಚಾರದಲ್ಲಿ ವಂಚನೆಗೊಳಗಾಗುವ ಭೀತಿ. ಅಪರಿಚಿತರನ್ನು ನಂಬಿ ವ್ಯವಹರಿಸಬೇಡಿ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಬಿಡುವು ಸಿಗದು. ತಾಳ್ಮೆಯಿರಲಿ.

ವೃಷಭ: ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಸರಕಾರೀ ಕೆಲಸಗಳಲ್ಲಿ ಜಯ. ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮಿಥುನ: ಯೋಜನಾಬದ್ಧವಾಗಿ ಕೆಲಸ ಮಾಡುವುದರಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ. ಯಂತ್ರೋಪಕರಣಗಳ ರಿಪೇರಿ ಕೆಲಸಕ್ಕೆ ಮುಂದಾಗಲಿದ್ದೀರಿ. ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚೂ ಇರಲಿದೆ.

ಕರ್ಕಟಕ: ಜವಾಬ್ಧಾರಿಯುತ ಕಾರ್ಯವೈಖರಿಯಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಮಕ್ಕಳಿಂದ ಸಂತೋಷ ಸಿಗಲಿದೆ. ಚಿಂತೆ ಬೇಡ.

ಸಿಂಹ: ಕಟ್ಟಡ ಕಾಮಗಾರಿ ಕೆಲಸಗಳನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡುವುದು ಉತ್ತಮ. ಇಷ್ಟ ಭೋಜನ ಮಾಡುವ ಯೋಗ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕನ್ಯಾ: ನಿಮ್ಮ ಕೆಲಸ ಕಾರ್ಯಗಳಲ್ಲಿ ಮೂರನೆಯವರು ಮೂಗು ತೂರಿಸುವುದರಿಂದ ಕಿರಿ ಕಿರಿ ಅನುಭವಿಸಲಿದ್ದೀರಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕಾರ್ಯನಿಮಿತ್ತ ದೂರ ಪ್ರಯಾಣ ಮಾಡಬೇಕಾದೀತು.

ತುಲಾ: ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಆಪ್ತರನ್ನು ಭೇಟಿಯಾಗುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದಿದ್ದರೆ ಆರೋಗ್ಯ ಸಮಸ್ಯೆಯಾದೀತು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಏಕಾಗ್ರತೆ ಕಂಡುಬರಲಿದೆ.

ವೃಶ್ಚಿಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲು ಕೆಲವು ಸಮಯ ಕಾಯಬೇಕಾದೀತು. ಸ್ವಯ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಧನು: ಮಕ್ಕಳ ನಿರ್ಧಾರಗಳನ್ನು ಒಪ್ಪಿ ನಡೆಯಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಅಧ‍್ಯಯನಕ್ಕೆ ಹೊಸ ಮಾರ್ಗಗಳು ಸಿಗಲಿವೆ. ತಾಳ್ಮೆಯಿರಲಿ.

ಮಕರ: ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಕಾದೀತು. ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಕಂಡುಬಂದೀತು. ಸಾಂಸಾರಿಕವಾಗಿ ಪರಸ್ಪರ ಸಹಕಾರವಿರಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಒದಗಿಬರಲಿದೆ.

ಮೀನ: ನೆರೆಹೊರೆಯವರೊಂದಿಗೆ ಬಹುದಿನದ ಶತ್ರುತ್ವ ಅಂತ್ಯವಾಗಲಿದೆ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು. ವಿದ್ಯಾರ್ಥಿಗಳು ಶುಭ ಫಲಗಳನ್ನು ಪಡೆಯಲಿದ್ದಾರೆ. ದೇವತಾ ಪ್ರಾರ್ಥನೆ ಮರೆಯದಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Anjaneya Mantra: ಆಂಜನೇಯ ಅಷ್ಟೋತ್ತರ ಮಂತ್ರವನ್ನು ತಪ್ಪದೇ ಓದಿ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments