ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 6 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮಕ್ಕಳ ಭವಿಷ್ಯದ ವಿಚಾರದಲ್ಲಿ ಸ್ಪಷ್ಟ ತೀರ್ಮಾನ ಕೈಗೊಳ್ಳಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ವ್ಯವಹಾರ ನಿಮಿತ್ತ ಕಿರು ಸಂಚಾರ ಮಾಡಬೇಕಾದೀತು. ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ.

ವೃಷಭ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಪರಿಹಾರವಾಗಲಿದೆ. ಜನರ ಮಧ್ಯೆ ಇದ್ದರೂ ಏಕಾಂಗಿತನ ಕಾಡೀತು. ಹಿರಿಯರಿಗೆ ದೇವತಾ ಕಾರ್ಯಗಳಿಂದ ನೆಮ್ಮದಿ. ಸಾಕು ಪ್ರಾಣಿಗಳೊಂದಿಗೆ ಎಚ್ಚರ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿಮಗೆ ಎದುರಾಳಿಗಳಿಂದ ತೊಂದರೆ ಸಾಧ‍್ಯತೆ. ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ. ಸಾಂಸಾರಿಕವಾಗಿ ಪರಸ್ಪರ ಸಹಕಾರ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಇಷ್ಟ ದೇವತೆಯ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡುವುದರಿಂದ ಉದ್ಯೋಗ ಸಮಸ್ಯೆಗಳು ದೂರವಾಗಲಿದೆ. ಚಿಂತೆ ಬೇಡ.

ಸಿಂಹ: ವಾಸ್ತವವನ್ನು ಒಪ್ಪಿಕೊಂಡು ಮುಂದುವರಿಯಬೇಕಾದ ಅನಿವಾರ್ಯತೆ. ಹೊಸ ಕೆಲಸಗಳಿಗೆ ಪ್ರಯತ್ನ ಮುಂದುವರಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳು ಕಂಡುಬರಲಿದೆ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ನನಸಾಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಸಂತೋಷ ನೀಡಲಿದ್ದೀರಿ. ಅನಗತ್ಯ ಚಿಂತೆ ಬೇಡ.

ತುಲಾ: ವಿಶೇಷವಾದ ವ್ಯಕ್ತಿಗಳು ಇಂದು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಮನೆಯಲ್ಲಿ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚವಾದೀತು.

ವೃಶ್ಚಿಕ: ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ಧನು: ಅನಿರೀಕ್ಷಿತವಾಗಿ ವಿವಿಧ ಮೂಲಗಳಿಂದ ಧನಾಗಮನವಾಗಲಿದೆ. ಮನೆಯಲ್ಲಿ ಸುಖ, ಸಮೃದ್ಧಿ ಕಂಡುಬರಲಿದೆ. ಸಹೋದರಾದಿ ಸಂಬಂಧಿಗಳಿಂದ ಉಡುಗೊರೆ ಸಿಗಬಹುದು. ವಿದ್ಯಾರ್ಥಿಗಳಿಗೆ ಮುನ್ನಡೆ.

ಮಕರ: ಕಾರ್ಯನಿಮಿತ್ತ ಹಲವು ಜನರನ್ನು ಭೇಟಿಯಾಗಬೇಕಾಗುತ್ತದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ ಸಿಗುವುದು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಕುಟುಂಬ ಹಿತಕ್ಕಾಗಿ ವೈಯಕ್ತಿಕ ಸಂತೋಷ ತ್ಯಾಗ ಮಾಡಲಿದ್ದೀರಿ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ದೇವತಾ ಕಾರ್ಯಗಳಿಗೆ ಧನ ವಿನಿಯೋಗವಾದೀತು. ಮಾತಿನ ಮೇಲೆ ನಿಗಾ ಇರಲಿ.

ಮೀನ: ಎಷ್ಟೇ ಕಷ್ಟವಿದ್ದರೂ ಇನ್ನೊಬ್ಬರಿಗೆ ಸಹಾಯ ಮಾಡುವ ಗುಣ ಪ್ರದರ್ಶಿಸಲಿದ್ದೀರಿ. ನೀರಿನ ತಾಪತ್ರಯಗಳು ಪರಿಹಾರವಾದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments