Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 11 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ತಾಳ್ಮೆಯಿಂದ ವ್ಯವಹರಿಸಿ. ಬೇರೆಯವರಿಗೆ ನಿಮ್ಮ ಕೆಲಸಗಳು ಕಿರಿ ಕಿರಿ ಉಂಟು ಮಾಡೀತು. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಯಂತ್ರೋಪಕರಣಗಳಿಂದ ಅವಘಡ ಸಂಭವ, ಎಚ್ಚರವಿರಲಿ.

ವೃಷಭ: ಆರ್ಥಿಕವಾಗಿ ಸ್ಥಿತಿ, ಗತಿ ಸುಧಾರಿಸಲಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಆದರೆ ದೈಹಿಕವಾಗಿ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಕಂಡುಬಂದೀತು. ಸಂಗಾತಿಯ ಸಹಕಾರವಿರಲಿದೆ.

ಮಿಥುನ: ಲೇವಾದೇವಿ ವ್ಯವಹಾರ ನಡೆಸುವವರಿಗೆ ಮುನ್ನಡೆ. ಕಾರ್ಯರಂಗದಲ್ಲಿ ಪೈಪೋಟಿ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗ ತರುವ ಘಟನೆಗಳು ಎದುರಾದೀತು. ತಾಳ್ಮೆಯಿರಲಿ.

ಕರ್ಕಟಕ: ಹೂಡಿಕೆ ವ್ಯವಹಾರಗಳಲ್ಲಿ ಆಸಕ್ತಿ ಕಂಡುಬರುವುದು. ಸನ್ಮಿತ್ರರಿಂದ ಸಹಾಯವೊದಗಿಬರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ದೇವತಾ ಕಾರ್ಯಗಳಿಗೆ ಧನವಿನಿಯೋಗಿಸಲಿದ್ದೀರಿ. ಸಹೋದರಾದಿ ಸಂಬಂಧಿಗಳಿಂದ ಸಹಾಯವೊದಗಿಬರುವುದು.

ಕನ್ಯಾ: ಪರರ ಹಿತಕ್ಕಾಗಿ ಕೆಲವೊಂದು ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಮಕ್ಕಳ ಜೀವನದ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಶ್ರಮ ಪಡಬೇಕಾದೀತು. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಸಾಂಸಾರಿಕವಾಗಿ ಹೆಚ್ಚಿನ ಜವಾಬ್ಧಾರಿ ಹೊರಬೇಕಾಗುತ್ತದೆ. ತಾಂತ್ರಿಕ ವೃತ್ತಿಯವರಿಗೆ ಕಾರ್ಯದೊತ್ತಡ ಕಂಡುಬಂದೀತು. ಕುಟುಂಬ ಸದಸ್ಯರ ನಡುವೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ.

ವೃಶ್ಚಿಕ: ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರುವುದು. ಆಸ್ತಿ ವಿಚಾರದಲ್ಲಿ ಹಿರಿಯರ ಮಧ್ಯಸ್ಥಿಕೆ ಪಡೆಯುವುದು ಸೂಕ್ತ. ಕಿರು ಸಂಚಾರ ಮಾಡಬೇಕಾಗುತ್ತದೆ.

ಧನು: ಬಂಧು ಮಿತ್ರರನ್ನು ಭೇಟಿಯಾಗುವ ಯೋಗ. ಬಹುದಿನಗಳಿಂದ ಬಾಕಿಯಿದ್ದ ಕೆಲಸ ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ಆಸ್ತಿ ವಿವಾದಗಳಿಗೆ ಅಂತ್ಯ ಹಾಡಲಿದ್ದೀರಿ. ಕೋರ್ಟು ಕಚೇರಿ ಕೆಲಸಗಳಲ್ಲಿ ಜಯ.

ಮಕರ: ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಕಂಡುಬಂದೀತು. ಮಾತಿನ ಮೇಲೆ ನಿಗಾ ಇರಲಿ. ಮಕ್ಕಳ ನಿಮಿತ್ತ ಅನಿರೀಕ್ಷಿತ ಖರ್ಚು ವೆಚ್ಚಗಳಾಗುವ ಸಾಧ್ಯತೆ. ನಿರುದ್ಯೋಗಿಗಳಿಗೆ ನಾನಾ ಉದ್ಯೋಗಾವಕಾಶಗಳು ದೊರೆಯಲಿವೆ.

ಕುಂಭ: ಸ್ವಯಂ ವೃತ್ತಿಯವರಿಗೆ ಲಾಭದಾಯಕ ದಿನ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಯಾರಿಗೂ ಸಾಲ ಕೊಡಲು ಹೋಗಬೇಡಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.

ಮೀನ: ಕೆಲಸ ಕಾರ್ಯಗಳಲ್ಲಿ ತಲ್ಲೀನತೆ ಕಂಡುಬರಲಿದೆ. ವಿವಿಧ ಚಟುವಟಿಕೆಗಳಿಂದ ಕೂಡಿದ ದಿನ. ನಿಮ್ಮ ಕಾರ್ಯವೈಖರಿ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗುವುದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?