ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಶುಕ್ರವಾರ, 14 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಘನತೆ ಹೆಚ್ಚುವುದು. ಹೊಸ ಉದ್ಯೋಗಾವಕಾಶಗಳು ನಿಮ್ಮಲ್ಲಿ ಹೊಸ ಉತ್ಸಾಹ ತುಂಬಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ವೃಷಭ: ಭೂಮ್ಯಾದಿ ವ್ಯವಹಾರಗಳಿಗೆ ಅನುಕೂಲಕರ ವಾತಾವರಣವಿರಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ನಿಮ್ಮ ಅಧಿಕಾರಯುತ ಧೋರಣೆ ಇತರರಿಗೆ ಕಿರಿ ಕಿರಿ ಉಂಟುಮಾಡಬಹುದು. ಕಾರ್ಯನಿಮಿತ್ತ ದೂರ ಪ್ರಯಾಣ ಮಾಡಬೇಕಾಗುತ್ತದೆ.

ಕರ್ಕಟಕ: ಪೂರ್ವಾಪರ ತಿಳಿದು ಇತರರಿಗೆ ಸಹಾಯ ಮಾಡಿ. ನೂತನ ವ್ಯವಹಾರಗಳಿಗೆ ಚಾಲನೆ ನೀಡಲು ಸಕಾಲ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ತಾಳ್ಮೆಯಿರಲಿ.

ಸಿಂಹ: ಹಣಕಾಸಿನ ವಿಚಾರದಲ್ಲಿ ಬೇರೆಯವರಿಂದ ವಂಚನೆಗೊಳಗಾಗುವ ಭೀತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕನ್ಯಾ: ವಿಶ್ವಾಸಘಾತಕರಿಗೆ ತಕ್ಕ ಪಾಠ ಕಲಿಸಲಿದ್ದೀರಿ. ಮಕ್ಕಳಿಂದ ನಿಮ್ಮ ಸಂತೋಷ ವೃದ್ಧಿಯಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ತುಲಾ: ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆಯ ಯೋಗ. ಮಾತಿನ ಮೇಲೆ ನಿಗಾ ಇರಲಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

ವೃಶ್ಚಿಕ: ಉನ್ನತ ವ್ಯಾಸಂಗದಲ್ಲಿ ಪ್ರಗತಿ. ವ್ಯವಹಾರದಲ್ಲಿ ನಿರೀಕ್ಷಿಸಿದಷ್ಟು ಲಾಭವಿಲ್ಲದಿದ್ದರೂ ನಷ್ಟವಾಗದು. ಮಹಿಳೆಯರಿಗೆ ಅಪರೂಪದ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ. ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ.

ಧನು: ಮಕ್ಕಳ ಜೀವನದಲ್ಲಿ ಮಹತ್ತರ ತಿರುವು ಸಾಧ‍್ಯತೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗದು. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಕರ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಕೈಲಾಗದವರಿಗೆ ಸಹಾಯ ಮಾಡಿದ ಸಂತೃಪ್ತಿ ಸಿಗುವುದು. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹ ಭಾಗ್ಯ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶಿವ ಪಂಚಾಕ್ಷರಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಈ ಐದು ರಾಶಿಯವರಿಗೆ 2026 ರಲ್ಲಿ ಮದುವೆ ಯೋಗವಿದೆ

ಶನಿವಾರದಂದು ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಲೇ ಬೇಡಿ

2026 ರಲ್ಲಿ ದ್ವಾದಶ ರಾಶಿಯವರಿಗೆ ಹಣಕಾಸಿನ ತೊಂದರೆ ಬರುತ್ತಾ, ಇಲ್ಲಿದೆ ವಿವರ

ಶುಕ್ರವಾರ ಓದಬೇಕಾದ ಲಕ್ಷ್ಮೀ ಮಂತ್ರ

ಮುಂದಿನ ಸುದ್ದಿ
Show comments