Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 15 ಜುಲೈ 2023 (07:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದಾಯಕ ದಿನ. ಸಾಂಸಾರಿಕವಾಗಿ ಕಿರಿ ಕಿರಿಗಳು ಸಾಮಾನ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಮಕ್ಕಳ ಜೀವನದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ.

ವೃಷಭ: ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ.

ಮಿಥುನ: ಗುರುಹಿರಿಯರ ಆಶೀರ್ವಾದದಿಂದ ಸಕಲ ಕಾರ್ಯಗಳಲ್ಲಿ ಜಯ ಸಿಗಲಿದೆ. ಇಷ್ಟಮಿತ್ರರೊಂದಿಗೆ ಭೋಜನ ಮಾಡುವ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಅನಿರೀಕ್ಷಿತ ಧನ ಲಾಭವಾಗಲಿದೆ. ಉದ್ಯೋಗ, ವ್ಯವಹಾರದಲ್ಲಿ ಮೇಲುಗೈ ಸಾಧಿಸಲಿದ್ದೀರಿ. ಬಹುದಿನಗಳಿಂದ ಬಾಕಿಯಿದ್ದ ಕೆಲಸ ಪೂರ್ತಿ ಮಾಡಲಿದ್ದೀರಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ.

ಸಿಂಹ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಕಾಡೀತು. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲದ್ದೀರಿ. ಮಾತಿನ ಮೇಲೆ ನಿಗಾ ಇರಲಿ.

ಕನ್ಯಾ: ದೂರದ ವ್ಯವಹಾರದಲ್ಲಿ ಆದಾಯ, ಅಭಿವೃದ್ಧಿ ಕಂಡುಬರಲಿದೆ. ಸತ್ಕಾರ್ಯಕ್ಕೆ ಧನವ್ಯಯವಾಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ತುಲಾ: ಆಸ್ತಿ ವಿಚಾರದಲ್ಲಿ ಹೆಚ್ಚಿನ ಜವಾಬ್ಧಾರಿ ನಿಮ್ಮದಾಗಲಿದೆ. ಇನ್ನೊಬ್ಬರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ವೃಶ್ಚಿಕ: ತಾಂತ್ರಿಕ ವೃತ್ತಿಯವರಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಮನಸ್ಸಿಗೆ ಖುಷಿ ಕೊಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಿರುವುದು. ಚಿಂತೆ ಬೇಡ.

ಧನು: ಅನಗತ್ಯ ವಿಚಾರಗಳನ್ನು ಯೋಚಿಸಿ ಮನಸ್ಸಿಗೆ ನೆಮ್ಮದಿ ಹಾಳುಮಾಡಿಕೊಳ್ಳಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವದು ಉತ್ತಮ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ.

ಮಕರ: ವಾಹನಾದಿ ಖರೀದಿ ವಿಚಾರದಲ್ಲಿ ವಂಚನೆಗೊಳಗಾಗುವ ಭೀತಿ. ಯಾವುದೇ ತೀರ್ಮಾನ ಕೈಗೊಳ‍್ಳುವ ಮುನ್ನ ಗೊಂದಲಗಳು ಕಾಡುವುದು ಸಹಜ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿರಲಿ.

ಕುಂಭ: ಧೈರ್ಯ, ಉತ್ಸಾಹದಿಂದ ಕೂಡಿದ ನಿಮ್ಮ ಕಾರ್ಯವೈಖರಿ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗಲಿದೆ. ಮಹಿಳೆಯರಿಗೆ ಮಾತೇ ಬಂಡವಾಳವಾಗಲಿದೆ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮೀನ: ಪಾಲುದಾರಿಕೆ ಕ್ಷೇತ್ರದಲ್ಲಿ ವ್ಯವಹಾರಗಳಿಗೆ ಅಡೆತಡೆಗಳುಂಟಾದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದೇವತಾ ಸ್ಥಳ ಸಂದರ್ಶನ ಯೋಗ. ಮಕ್ಕಳಿಂದ ನೆಮ್ಮದಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?