Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಮಂಗಳವಾರ, 18 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ತಾಳ್ಮೆಯಿರಲಿ.

ವೃಷಭ: ನಿರುದ್ಯೋಗಿಗಳು ಉತ್ತಮ ಅವಕಾಶಕ್ಕಾಗಿ ಕಾಯಬೇಕಾಗುತ್ತದೆ. ಕಾರ್ಯರಂಗದಲ್ಲಿ ನಿಮ್ಮ ಏಳಿಗೆಗೆ ಸಹೋದ್ಯೋಗಗಿಳ ಸಹಕಾರ ಪಡೆಯಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ.

ಮಿಥುನ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಮಧುಚಂದ್ರದ ಭಾಗ್ಯ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ.

ಕರ್ಕಟಕ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ.

ಸಿಂಹ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ಮನಸ್ಸಿನ ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಕಾರ್ಯನಿಮಿತ್ತ ಪರವೂರಿಗೆ ಸಂಚರಿಸಬೇಕಾಗುತ್ತದೆ.

ಕನ್ಯಾ: ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ನಿಮ್ಮದಾಗಲಿದೆ. ಹಿರಿಯರಿಗೆ ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು. ಬಹುದಿನಗಳಿಂದ ಬರಬೇಕಾಗಿದ್ದ ಬಾಕಿ ಹಣ ಸಂದಾಯವಾಗಲಿದೆ.

ತುಲಾ: ನಿಮ್ಮ ಒಳ್ಳೆಯತನವನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಅಪರಿಚಿತರನ್ನು ನಂಬಿ ವ್ಯವಹರಿಸಲು ಹೋಗಬೇಡಿ. ತಾಳ್ಮೆಯಿರಲಿ.

ವೃಶ್ಚಿಕ: ಸಂತಾನಹೀನ ದಂಪತಿ ದೇವರ ಮೊರೆ ಹೋಗಲಿದ್ದಾರೆ. ಪಾಲುದಾರಿಕೆ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಲಾಭ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು.

ಧನು: ನಿಮ್ಮ ಮೆಚ್ಚಿನ ವ್ಯಕ್ತಿಗಳಿಂದ ಅನಿರೀಕ್ಷಿತ ಉಡುಗೊರೆ ಪಡೆಯುವ ಯೋಗ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರೀಕ್ಷೆ ಎದುರಿಸುವ ಆತಂಕ ಕಾಡೀತು.

ಮಕರ: ನಿರೀಕ್ಷೆಗೂ ಮೀರಿದ ಸ್ಥಾನ ಮಾನ ನಿಮ್ಮದಾಗಲಿದೆ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಪೈಪೋಟಿ ಎದುರಾದೀತು. ನೆರೆಹೊರೆಯವರಿಗೆ ಸಹಾಯ ಮಾಡಲಿದ್ದೀರಿ.

ಕುಂಭ: ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ ಕಂಡುಬರಲಿದೆ. ಮಕ್ಕಳ ವಿಚಾರದಲ್ಲಿ ಹೊಸ ಸವಾಲು ಎದುರಿಸಬೇಕಾಗುತ್ತದೆ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರಲಿದೆ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಬೇಡ.

ಮೀನ: ದೈಹಿಕವಾಗಿ ಆರೋಗ್ಯ ಉತ್ತಮವಾಗಿದ್ದರೂ ಮಾನಸಿಕವಾಗಿ ಒತ್ತಡಗಳು ಎದುರಾದೀತು. ದೇವತಾ ಕಾರ್ಯದಿಂದ ಮನಃತೃಪ್ತಿ. ಬಂಧು ಮಿತ್ರರ ಭೇಟಿಯಾಗುವ ಸಾಧ‍್ಯತೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಧನಾಭಿವೃದ್ಧಿ ಆಗಬೇಕಾದ ಧನಲಕ್ಷ್ಮೀ ಸ್ತೋತ್ರ ಓದಿ

Raghavendra swamy mantra: ಶ್ರೀ ರಾಘವೇಂದ್ರ ಕವಚ ಸ್ತೋತ್ರಂ ಭಕ್ತಿಯಿಂದ ಓದಿ

Devi Mantra: ಮನೆಯಲ್ಲಿರುವ ಅವಿವಾಹಿತ ಕನ್ಯಾಮಣಿಗಳು ತಪ್ಪದೇ ಈ ಸ್ತೋತ್ರ ಓದಿ

Ardanaristaka Stothram: ವಿವಾಹಾದಿ ಸಮಸ್ಯೆಗಳಿಗೆ ಅರ್ಧನಾರೀಶ್ವರಾಷ್ಟಕಂ ಸ್ತೋತ್ರ ಓದಿ

Gayatri Mantra: ಗಾಯತ್ರಿ ಅಷ್ಟೋತ್ತರ ಶತನಾಮಾವಳಿ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments