Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 19 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೇವತಾನುಗ್ರಹದಿಂದ ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಅವಕಾಶ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಲಾಭವಾಗಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ. ನಿಮ್ಮಲ್ಲಿರುವ ವಿಶೇಷ ಸುದ್ದಿಯನ್ನು ಇತರರಿಗೆ ಹೇಳುವ ಕಾತುರವಿರಲಿದೆ.

ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಬಂಧು ಮಿತ್ರರ ಭೇಟಿಯಾಗುವ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಕಾಲದಲ್ಲಿ ಸನ್ಮಿತ್ರರ ನೆರವು ಸಿಗುವುದು.

ಕರ್ಕಟಕ: ನೂತನ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿನ ಅನುಕೂಲ ಕಂಡುಬರುವುದು. ಸಾಹಸ ಪ್ರವೃತ್ತಿಯಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ವಿದೇಶೀ ಮೂಲಗಳಿಂದ ಧನಾಗಮನವಾಗಲಿದೆ. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ದೊರೆಯಲಿವೆ. ಮಾತಿನ ಮೇಲೆ ನಿಗಾ ಇರಲಿ. ಪಾಲು ಬಂಡವಾಳ ವ್ಯವಹಾರದಲ್ಲಿ ಅಭಿವೃದ್ಧಿ.

ಕನ್ಯಾ: ಮನೆಯ ಸಣ್ಣ ಪುಟ್ಟ ಸಮಸ್ಯೆಗಳು ಚಿಂತೆಗೆ ಕಾರಣವಾದೀತು. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ ದೊರೆಯಲಿದೆ. ತಾ‍ಳ್ಮೆಯಿರಲಿ.

ತುಲಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿವೆ.

ವೃಶ್ಚಿಕ: ಹಳೆಯ ಬಾಕಿಗಳು ಸಂದಾಯವಾಗಲಿದೆ. ಬಾಡಿಗೆದಾರರಿಗೆ ಮನೆ ಮಾಲಿಕರಿಂದ ಕಿರಿ ಕಿರಿ ಎದುರಾದೀತು. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಧನು: ನಿಮ್ಮ ಅಜಾಗರೂಕತೆಯಿಂದ ಅನಾಹುತುಗಳು ನಡೆದೀತು. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಕರ: ಸರಕಾರೀ ನೌಕರರಿಗೆ ಸದ್ಯದಲ್ಲೇ ಮುಂಬಡ್ತಿ ಯೋಗ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ಮಕ್ಕಳಿಗೆ ಪ್ರಯಾಣದ ಖುಷಿ ಸಿಗುವುದು. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಕುಂಭ: ನಿಮ್ಮ ಕೆಲಸ ಕಾರ್ಯಗಳಿಗೆ ಇದುವರೆಗೆ ಇದ್ದ ಅಡೆತಡೆಗಳು ದೂರವಾಗಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಮನೆ, ವಾಹನ ರಿಪೇರಿ ಇತ್ಯಾದಿ ಕೆಲಸಗಳಿಗೆ ಮುಂದಾಗಬೇಕಾಗುತ್ತದೆ. ಉದ್ಯೋಗ, ವ್ಯವಹಾರದಲ್ಲಿ ಯಶಸ್ಸಿಗಾಗಿ ಕಠಿಣ ಪರಿಶ್ರಮಪಡಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Shiva mantra: ಇಂದು ಶಿವ ಅಷ್ಟೋತ್ತರ ತಪ್ಪದೇ ಓದಿ

Surya Mantra: ಇಂದು ಸೂರ್ಯನ ಕುರಿತಾದ ಈ ಸ್ತೋತ್ರವನ್ನು ತಪ್ಪದೇ ಓದಿ

Anjaneya Mantra: ಶನಿದೋಷವಿದ್ದವರು ಆಂಜನೇಯನ ಈ ಸ್ತೋತ್ರವನ್ನು ಓದಿ

Lakshmi Mantra: ಮನಸ್ಸಿನ ಭಯ ದೂರ ಮಾಡಲು ಧೈರ್ಯ ಲಕ್ಷ್ಮಿ ಸ್ತೋತ್ರ ಇಲ್ಲಿದೆ ನೋಡಿ

Vishnu Mantra: ಶ್ರೀ ವಿಷ್ಣು ಅಷ್ಟೋತ್ತರ ನಾಮಾವಳಿ ಕನ್ನಡದಲ್ಲಿ ಇಲ್ಲಿದೆ ತಪ್ಪದೇ ಓದಿ

ಮುಂದಿನ ಸುದ್ದಿ
Show comments