Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಗುರುವಾರ, 20 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಏಕಾಗ್ರೆತೆಯಿಂದ ಕಾರ್ಯ ಸಾಧನೆ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದಲ್ಲಿ ಆರೋಗ್ಯ ಸಮಸ್ಯೆಯಾದೀತು. ತಾಳ್ಮೆಯಿರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಸಹಕಾರ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಅವಕಾಶ. ಕಳೆದ ಕೆಲವು ಸಮಯದಿಂದ ಹುಡುಕಾಡುತ್ತಿದ್ದ ವಸ್ತು ತಾನಾಗಿಯೇ ಕೈ ಸೇರಲಿದೆ.

ಮಿಥುನ: ಅನಿರೀಕ್ಷಿತವಾಗಿ ಧನ ಲಾಭವಾಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ.

ಕರ್ಕಟಕ: ಕೌಟುಂಬಿಕವಾಗಿ ಸುಖ,ಸಮೃದ್ಧಿ ಕಂಡುಬರಲಿದೆ. ಶ್ರೀಮತಿಯವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಹಣಕಾಸಿನ ವಿಚಾರದಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ.

ಸಿಂಹ: ಕಾರ್ಯಕ್ಷೇತ್ರದಲ್ಲಿ ನಿಮ್ಮ ಎದುರಾಳಿಗಳಿಂದ ತೊಂದರೆಗಳು ಎದುರಾದೀತು. ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ ಸಂಭವ. ಬಂಧು ಮಿತ್ರರ ಭೇಟಿಯಗುವ ಯೋಗ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ. ದೂರ ಸಂಚಾರ ಮಾಡಲಿದ್ದೀರಿ.

ತುಲಾ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಕಾಡೀತು.

ವೃಶ್ಚಿಕ: ಅನಿರೀಕ್ಷಿತವಾಗಿ ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಯೋಗ. ಕೆಳ ಹಂತದ ಉದ್ಯೋಗಿಗಳಿಗೆ ಶುಭ ವಾರ್ತೆ.

ಧನು: ದೇವತಾನುಗ್ರಹದಿಂದ ಕಾರ್ಯರಂಗದಲ್ಲಿ ಯಶಸ್ಸು ಸಾಧ‍್ಯ. ಕೆಲಸ ಕಾರ್ಯಗಳಲ್ಲಿ ಸಂಗಾತಿಯ ಸಹಾಯ ಪಡೆಯಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕುಂಭ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ದೈವಾನುಗ್ರಹದಿಂದ ಕೈ ಹಿಡಿದ ಕೆಲಸಗಳು ಯಶಸ್ವಿಯಾಗಲಿದೆ. ಮಕ್ಕಳಿಂದ ಸಂತೋಷದ ವಿಚಾರ ಕೇಳಿಬರಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ.

ಮೀನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ತಾಂತ್ರಿಕ ವೃತ್ತಿಯವರಿಗೆ ಕಾರ್ಯದೊತ್ತಡವಿರಲಿದೆ. ಸ್ವಯಂ ವೃತ್ತಿಯವರಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?