Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 22 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದೀರಿ. ಹೊಸ ಉದ್ಯೋಗ ಅವಕಾಶಗಳು ಸಿಗಲಿವೆ.

ವೃಷಭ: ಹಳೆಯ ಮಿತ್ರರನ್ನು ಭೇಟಿಯಾಗುವ ಅವಕಾಶ. ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ಕೆಳ ಹಂತದ ನೌಕರರಿಗೆ ಬಡ್ತಿ ಸಂಭವ. ಮಕ್ಕಳ  ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ‍್ಳಲಿದ್ದೀರಿ.

ಮಿಥುನ: ಆಸ್ತಿ ವಿಚಾರದಲ್ಲಿ ಸಹೋದರಾದಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳಾಗುವ ಸಾಧ‍್ಯತೆ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ನೂತನ ಮಿತ್ರರಿಂದ ಸಹಕಾರ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕವಾಗಿ ಉದ್ಯೋಗ ಲಾಭ. ಮಾತೃಸಮಾನರಿಂದ ಪ್ರೋತ್ಸಾಹ ಕಂಡುಬರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.

ಸಿಂಹ: ಉದ್ಯೋಗ, ವ್ಯವಹಾರದಲ್ಲಿ ಅನಗತ್ಯ ಚರ್ಚೆಗೆ ಅವಕಾಶ ಮಾಡಿಕೊಡದಿರಿ. ನೂತನವಾಗಿ ಆರಂಭಿಸಿರುವ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಉನ್ನತ ವ್ಯಾಸಂಗ ಮಾಡುವವರಿಗೆ ಮುನ್ನಡೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿದಾಯಕ ಬದಲಾವಣೆ ಕಂಡುಬರಲಿದೆ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಧನಾರ್ಜನೆಗೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಅವಿವಾಹಿತರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಗೃಹ, ವಾಹನಾದಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು.

ವೃಶ್ಚಿಕ: ಹಳೆಯ ವಿಚಾರಗಳು ಮನಸ್ಸಿಗೆ ಕಾಡಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಗುರುಹಿರಿಯರಿಂದ ಸಹಾಯ ನಿರೀಕ್ಷಿಸಲಿದ್ದೀರಿ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗ.

ಧನು: ಮಕ್ಕಳ ಜೀವನದಲ್ಲಿ ಅಭಿವೃದ್ಧಿ ಸೂಚನೆ ಸಿಗಲಿದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಕೆಲಸ ಕಾರ್ಯದಲ್ಲಿ ತಲ್ಲೀನತೆ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಕಾರ್ಯನಿಮಿತ್ತ ದೂರ ಪ್ರಯಾಣ ಮಾಡುವ ಸಾಧ್ಯತೆ. ಸಹೋದರಾದಿ ಸಂಬಂಧಿಗಳೊಂದಿಗಿನ ಮನಸ್ತಾಪ ಮರೆಯಾಗಲಿದೆ. ಚಿಂತೆ ಬೇಡ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರುವುದು. ದೂರದ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಅಧ್ಯಯನಶೀಲರಿಗೆ ಹೊಸ ಅವಕಾಶ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮೀನ: ಎಷ್ಟೇ ಕಾರ್ಯದೊತ್ತಡವಿದ್ದರೂ ಮನೆಯವರಿಗಾಗಿ ಸಮಯ ಮೀಸಲಿಡಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?