ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಭಾನುವಾರ, 23 ಜುಲೈ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ. ಮಾತಿನ ಮೇಲೆ ನಿಗಾ ಇರಲಿ. ಅನಗತ್ಯ ಸಂಶಯಗಳಿಗೆ ಎಡೆಮಾಡಿಕೊಡದಿರಿ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರಲಿದೆ.

ವೃಷಭ: ಹೊಸ ಕೆಲಸಗಳನ್ನು, ಕಾಮಗಾರಿಗಳನ್ನು ಆರಂಭಿಸಲು ಇದು ಸಕಾಲ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸ್ನೇಹಿತರಿಂದ ಸಹಾಯವೊದಗಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಮಿಥುನ: ಆಸ್ತಿ ವಿಚಾರದಲ್ಲಿ ಹಿರಿಯರ ಮಧ್ಯಸ್ಥಿಕೆ ಪಡೆಯಲಿದ್ದೀರಿ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಹಣ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಉನ್ನತ ವ್ಯಾಸಂಗಕ್ಕಾಗಿ ಪರವೂರಿಗೆ ಪ್ರಯಾಣಿಸುವ ಅನಿವಾರ್ಯತೆ ಕಂಡುಬರಲಿದೆ. ಇಷ್ಟಮಿತ್ರರನ್ನು ಬಹಳ ದಿನಗಳ ನಂತರ ಭೇಟಿಯಾಗುವ ಯೋಗ. ಮಕ್ಕಳಿಂದ ಸಂತೋಷ ವೃದ್ಧಿಯಾಗಲಿದೆ.

ಸಿಂಹ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಆಸ್ತಿ ವಿಚಾರದಲ್ಲಿ ಬೇರೆಯವರ ಸಲಹೆ ಪಡೆಯಬೇಕಾಗುತ್ತದೆ. ಮನೆಗೆ ಬಂಧು ಮಿತ್ರರ ಭೇಟಿ ಯೋಗ.

ಕನ್ಯಾ: ಮನೆಯಲ್ಲಿ ಶುಭ ಮಂಗಲ ಕಾರ್ಯನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದಾಂಪತ್ಯದಲ್ಲಿ ಸುಖ, ಸಮೃದ್ಧಿ ಕಂಡುಬರಲಿದೆ. ಮಕ್ಕಳಿಂದ ಸಂತೋಷ ಸಿಗುವುದು.

ತುಲಾ: ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಸರಕಾರೀ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ವೃಶ್ಚಿಕ: ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಉತ್ಸಾಹ ಕಂಡುಬರಲಿದೆ. ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚೂ ಇರಲಿದೆ. ಯಂತ್ರೋಪಕರಣಗಳ ರಿಪೇರಿ ಕೆಲಸಗಳಿಗೆ ಮುಂದಾಗಲಿದ್ದೀರಿ. ಅನಗತ್ಯ ಚಿಂತೆ ಬೇಡ.

ಧನು: ಸರಕಾರೀ ಉದ್ಯೋಗಿಗಳಿಗೆ ಬಿಡುವಿನ ದಿನದ ಖುಷಿ ಸಿಗುವುದ. ಸ್ನೇಹಿತರೊಂದಿಗೆ ಕಿರು ಪ್ರವಾಸ ಮಾಡಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ನಿಮ್ಮ ಸಾಹಸ ಪ್ರವೃತ್ತಿ ಇತರರಿಗೆ ತೊಂದರೆ ಉಂಟುಮಾಡಬಹುದು.  ಮಾನಸಿಕವಾಗಿ ಉಲ್ಲಾಸ ಕೊಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ದಾಂಪತ್ಯ ಸುಖಕ್ಕೆ ಕೊರತೆಯಾಗದು.

ಕುಂಭ: ಬಹಳ ದಿನಗಳಿಂದ ಬಾಕಿಯಿದ್ದ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನಿಸಲಿದ್ದೀರಿ. ನಿಮ್ಮಲ್ಲಿರುವ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಭೀತಿ. ಮನೆಗೆ ನೆಂಟರಿಷ್ಟರ ಭೇಟಿ ಸಾಧ್ಯತೆ. ತಾಳ್ಮೆಯಿರಲಿ.

ಮೀನ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗುವುದು. ತಾಳ್ಮೆಯಿರಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳು ಯಶಸ್ಸಿಗಾಗಿ ಸರಸ್ವತಿಯ ಈ ಸ್ತೋತ್ರ ಓದಿ

ಮಂಗಳವಾರ ಆಂಜನೇಯನ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹ ಪಡೆಯಲು ಪಶುಪತ್ಯಷ್ಟಕಂ ಸ್ತೋತ್ರವನ್ನು ಓದಿ

ಶನಿ ಗ್ರಹ ಪಂಚರತ್ನ ಸ್ತೋತ್ರ ಕನ್ನಡದಲ್ಲಿ

ಸೌಭಾಗ್ಯ ಲಕ್ಷ್ಮೀ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments