Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಮಂಗಳವಾರ, 25 ಜುಲೈ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬೇರೆಯವರ ಕೆಲಸಕ್ಕೆ ಸಹಾಯ ಮಾಡುವ ಉದಾರತೆ ತೋರಿಸಲಿದ್ದೀರಿ. ಮಹಿಳೆಯರಿಗೆ ಆರ್ಥಿಕವಾಗಿ ಖರ್ಚು ವೆಚ್ಚಗಳು ಕಂಡುಬರಲಿವೆ. ದೈಹಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ವೃಷಭ: ಕಾರ್ಯರಂಗದಲ್ಲಿ ಹೆಚ್ಚಿನ ಪ್ರಯತ್ನ ನಡೆಸಬೇಕಾಗುತ್ತದೆ. ನೂತನ ದಂಪತಿಗಳಿಗೆ ಮಧುಚಂದ್ರ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಾಂಸಾರಿಕವಾಗಿ ಸುಖ,ಸಮೃದ್ಧಿಯಿರಲಿದೆ.

ಮಿಥುನ: ನಿಮ್ಮಲ್ಲಿರುವ ಒಳ್ಳೆಯತನ ದುರುಪಯೋಗ ಪಡಿಸಿಕೊಳ್ಳುವವರಿರುತ್ತಾರೆ. ಎಚ್ಚರಿಕೆಯಿಂದಿರಿ. ಹಳೆಯ ಬಾಕಿಗಳನ್ನು ತೀರಿಸಲು ಮುಂದಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಓದನಲ್ಲಿ ಏಕಾಗ್ರತೆಗೆ ಭಂಗ ಉಂಟಾದೀತು.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ಯಶಸ್ಸು ನಿಮ್ಮದಾಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ದೇವತಾ ಪ್ರಾರ್ಥನೆ ಮಾಡಿ.

ಸಿಂಹ: ಮನಸ್ಸಿನಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಲಿದ್ದೀರಿ. ಹೊಸ ಕೆಲಸಗಳಿಗೆ ಕೈ ಹಾಕಲು ಇದು ಸಕಾಲ. ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.

ಕನ್ಯಾ: ಹಣಕಾಸು ವಿಚಾರದಲ್ಲಿ ಕಷ್ಟಗಳು ಬಂದರೂ ಸಕಾಲದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಮಕ್ಕಳಿಂದ ಸಂತೋಷ ಸಿಗುವುದು. ದಾಂಪತ್ಯದಲ್ಲಿ ಮಧ‍್ಯಮ ಸುಖ. ಸ್ವಯಂ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನ ಮಾನಾದಿಗಳು ನಿಮ್ಮದಾಗಲಿದೆ. ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ.

ವೃಶ್ಚಿಕ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಉಂಟಾದೀತು. ಮಾತಿನ ಮೇಲೆ ನಿಗಾ ಇರಲಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾಗುವ ಸಾಧ‍್ಯತೆ. ತಾಳ್ಮೆಯಿರಲಿ.

ಧನು: ನಿಮ್ಮ ಮನಸ್ಸಿನ ಭಾರವನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಆತ್ಮೀಯರೊಂದಿಗೆ ಪರಾಮರ್ಶಿಸಿ. ನೆರೆಹೊರೆಯವರಿಂದ ಸಹಾಯವೊದಗಿಬರಲಿದೆ.

ಮಕರ: ದೇಹಾಯಾಸವಾಗುವಂತಹ ಕೆಲಸ ಮಾಡಬೇಕಾದ ಅನಿವಾರ್ಯತೆ. ಉದ್ಯೋಗ ನಿಮಿತ್ತ ಪರವೂರಿಗೆ ಸಂಚರಿಸುವ ಸಾಧ‍್ಯತೆ. ಗೃಹೋಪಯೋಗಿ ವಸ್ತುಗಳ ಸಂಗ್ರಹ ಮಾಡಲಿದ್ದೀರಿ. ದುಂದು  ವೆಚ್ಚಗಳಿಗೆ ಕಡಿವಾಣವಿರಲಿ.

ಕುಂಭ: ಸಂತಾನಾಪೇಕ್ಷಿತ ದಂಪತಿಗಳು ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದಾರೆ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ನೀವು ಇದುವರೆಗೆ ಎದುರಿಸುತ್ತಿದ್ದ ಸಮಸ್ಯೆಗಳು ಪರಿಹಾರವಾಗಲಿದೆ. ಗೃಹ ಸಂಬಂಧೀ ಖರ್ಚು ವೆಚ್ಚಗಳು ಕಂಡುಬರಲಿದೆ. ಪರರ ಹಿತಕ್ಕಾಗಿ ಕೆಲವು ಕೆಲಸ ಮಾಡಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?