ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 26 ಜುಲೈ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಪೈಪೋಟಿಗಳು ಎದುರಾದೀತು. ಸಾಂಸಾರಿಕವಾಗಿ ನೀವು ಹೇಳಿದ ಮಾತು ನಿಮಗೇ ತಿರುಗುಬಾಣವಾಗಲಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವು ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.

ವೃಷಭ: ಧನಸಂಪತ್ತು ವಿಚಾರದಲ್ಲಿ ಅಭಿವೃದ್ಧಿ ಕಂಡುಬರುವುದು. ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದ ತೃಪ್ತಿ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ದೇಹಾರೋಗ್ಯದ ವಿಚಾರದಲ್ಲಿ ಉಪೇಕ್ಷೆ ಬೇಡ. ಬಯಸದೇ ಇದ್ದರೂ ಕೆಲವೊಂದು ವಸ್ತು, ವ್ಯಕ್ತಿಗಳು ನಿಮ್ಮ ಬಳಿ ಬರಲಿದ್ದಾರೆ. ಅಚಾತುರ್ಯದಿಂದ ಅನಾಹುತವಾದೀತು. ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.

ಕರ್ಕಟಕ: ದೇವತಾ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಸಿಂಹ: ಸಾಂಸಾರಿಕವಾಗಿ ಕಂಡುಬರುವ ರಗಳೆಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ನೀವು ಅತಿಯಾಗಿ ಹಚ್ಚಿಕೊಂಡಿರುವ ವಸ್ತು ಕೈ ತಪ್ಪುವ ಭೀತಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗುವುದು.

ಕನ್ಯಾ: ನಿಮ್ಮ ಸಾಂಸಾರಿಕ ವಿಚಾರದಲ್ಲಿ ಮೂರನೆಯವರು ಸಲಹೆ ಕೊಡಲು ಅವಕಾಶ ಕೊಡಬೇಡಿ. ಮಕ್ಕಳ ವಿಚಾರದಲ್ಲಿ ಸಂಯಮದಿಂದ ವರ್ತಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ.

ತುಲಾ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಹಿಂದೆ ಮಾಡಿದ್ದ ಸಾಲಗಳ ಬಾಕಿ ಸಂದಾಯವಾಗುವುದು. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಸಂಶೋಧನಾ ವೃತ್ತಿಯಲ್ಲಿ ತೊಡಗಿಸಿಕೊಂಡವರಿಗೆ ಕೀರ್ತಿ ಸಂಪಾದಿಸುವ ಯೋಗ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಚಾಲನಾ ವೃತ್ತಿಯಲ್ಲಿರುವವರಿಗೆ ಮುನ್ನಡೆ. ದೇವತಾ ಪ್ರಾರ್ಥನೆ ಮಾಡಿ.

ಧನು: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ನಿಮ್ಮ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದಿನದಂತ್ಯಕ್ಕೆ ನೆಮ್ಮದಿ.

ಮಕರ: ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆಯಿಂದ ವಿರಸ ಮೂಡುವ ಸಾಧ್ಯತೆ. ಮಾತಿನಲ್ಲಿ ನಿಗಾ ಇರಲಿ. ಮಕ್ಕಳಿಂದ ಸಂತೋಷ ಸಿಗುವುದು. ಹಣಕಾಸಿನ ಅಡಚಣೆಗಳಿದ್ದರೂ ಸಮಸ್ಯೆ ಎನಿಸದು. ತಾಳ್ಮೆಯಿರಲಿ.

ಕುಂಭ: ಬಯಸಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿ ನಿಮ್ಮದಾಗಲಿದೆ. ಸಂಗಾತಿಯ ಮಾತುಗಳು ಕಿರಿ ಕಿರಿ ಎನಿಸೀತು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಮೀನ: ಯಾವುದೇ ಕೆಲಸಕ್ಕೆ ತೊಡಗುವ ಮುನ್ನ ಹಿರಿಯರ ಅಭಿಪ್ರಾಯ ಆಲಿಸುವುದು ಉತ್ತಮ. ರಾಜಕೀಯ ರಂಗದಲ್ಲಿರುವವರಿಗೆ ಪೈಪೋಟಿಗಳು ಕಂಡುಬಂದೀತು. ಸ್ವಯಂ ವೃತ್ತಿಯವರಿಗೆ ಲಾಭವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments