Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಬುಧವಾರ, 9 ಆಗಸ್ಟ್ 2023 (08:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿಶೇಷ ಅತಿಥಿಗಳನ್ನು ಸ್ವಾಗತಿಸಲು ಸಿದ್ಧತೆ ನಡೆಸಲಿದ್ದೀರಿ. ಸಂಗಾತಿಯ ವರ್ತನೆ ಅಸಮಾಧಾನಕ್ಕೆ ಕಾರಣವಾದೀತು. ಹಣಕಾಸಿನ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ತಾಳ್ಮೆಯಿರಲಿ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಬೇರೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಸನ್ಮಿತ್ರರ ಸಹಕಾರದಿಂದ ಬೆಟ್ಟದಂತೆ ಬಂದ ಕಷ್ಟ ಮಂಜಿನಂತೆ ಕರಗಲಿದೆ. ವ್ಯಾಪಾರಿಗಳಿಗೆ ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ಹುಡುಕಿಕೊಂಡು ಬರಲಿದೆ.

ಕರ್ಕಟಕ: ಮನಸ್ಸಿನಲ್ಲಿರುವ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲು ಪರದಾಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ.

ಸಿಂಹ: ಮಕ್ಕಳ ಸಾಧನೆ ಪೋಷಕರಿಗೆ ಸಂತೋಷ ನೀಡಲಿದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣಕ್ಕೆ ಮೆಚ್ಚುಗೆ ಸಿಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ವಿದೇಶದಲ್ಲಿ ಉದ್ಯೋಗದಲ್ಲಿರುವವರಿಗೆ ತವರಿಗೆ ಭೇಟಿ ನೀಡುವ ಯೋಗ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ತುಲಾ: ಉದ್ಯೋಗ ಕ್ಷೇತ್ರದಲ್ಲಿ ಮುಂಬಡ್ತಿಗಾಗಿ ಪ್ರಯತ್ನಿಸುತ್ತಿದ್ದ ಫಲ ಸಿಗುವುದು. ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರುವುದು. ವಾಹನಾದಿ ಸೌಕರ್ಯ ತನ್ನದಾಗಿಸಿಕೊಳ್ಳಲು ಹೊರಟಾಗ ಅಡೆತಡೆಗಳು ಕಂಡುಬಂದೀತು.

ವೃಶ್ಚಿಕ: ವಿಶೇಷ ವ್ಯಕ್ತಿಯಿಂದ ನಿಮ್ಮ ಜೀವನಕ್ಕೆ ಹೊಸ ತಿರುವು ಸಿಗಲಿದೆ. ಬಂಧು ವರ್ಗದವರನ್ನು ಭೇಟಿಯಾಗುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ದುಂದು ವೆಚ್ಚಕ್ಕೆ ಕಡಿವಾಣವಿರಲಿ.

ಧನು: ಸರಕಾರೀ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಪಾಲುದಾರಿಕಾ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮಕರ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಸ್ಥಾನ ಮಾನ ಸಿಗಲಿದೆ. ಹಿರಿಯರಿಂದ ಸಮಯೋಚಿತ ಸಲಹೆಗಳು ಬರಲಿವೆ. ಭೂ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ.

ಕುಂಭ: ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬರಲಿದೆ. ಹಿಂದೆ ಮಾಡಿದ ತಪ್ಪುಗಳನ್ನು ತಿದ್ದುವ ಪ್ರಯತ್ನ ನಡೆಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ಮೀನ: ಮಕ್ಕಳ ನಿಮಿತ್ತ ಜವಾಬ್ಧಾರಿ ಹೆಚ್ಚಾಗಲಿದೆ. ಹಣಕಾಸಿನ ವಿಚಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?