ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಬುಧವಾರ, 16 ಆಗಸ್ಟ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಿಂದಿನ ಆರೋಗ್ಯ ಸಮಸ್ಯೆಗಳು ಮತ್ತೆ ಕಾಣಿಸಿಕೊಂಡು ಚಿಂತೆಗೆ ಕಾರಣವಾದೀತು. ಸಂಗಾತಿಯೊಂದಿಗೆ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ತಾಳ್ಮೆಯಿರಲಿ.

ವೃಷಭ: ವೈಯಕ್ತಿಕ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಮನಸ್ಸಿನ ಮಾತು ಹೇಳಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಸಾಧಿಸಲು ಸದವಕಾಶಗಳು ದೊರೆಯಲಿದೆ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ಕರ್ಕಟಕ: ಪ್ರೀತಿ ಪಾತ್ರರನ್ನು ಭೇಟಿಯಾಗುವ ಯೋಗ. ವಿಶೇಷ ವ್ಯಕ್ತಿಗಳು ನಿಮ್ಮ ಜೀವನಕ್ಕೆ ಹೊಸ ತಿರುವು ನೀಡಲಿದ್ದಾರೆ. ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆಯ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ಬೇರೆಯವರು ನಿಮ್ಮ ಜೀವನದಲ್ಲಿ ಮೂಗು ತೂರಿಸಲು ಅವಕಾಶ ಕೊಡಬೇಡಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಸಣ್ಣ ಪುಟ್ಟ ರಿಪೇರಿ ಕೆಲಸಗಳಿಗೆ ಕೈ ಹಾಕಲಿದ್ದೀರಿ.

ಕನ್ಯಾ: ಮಕ್ಕಳ ನಿಮಿತ್ತ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿದೆ.

ತುಲಾ: ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಕಾರ್ಯಸಿದ್ಧಿ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಅಗತ್ಯ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೂ ದುಂದು ವೆಚ್ಚಗಳಿಕೆ ಕಡಿವಾಣ ಹಾಕುವುದು ಉತ್ತಮ.

ವೃಶ್ಚಿಕ: ಹಿಂದೆ ಮಾಡಿದ್ದ ಸಾಲಗಳನ್ನು ತೀರಿಸಲು ಅವಕಾಶಗಳು ಸಿಗಲಿವೆ. ದೇವತಾ ಕಾರ್ಯನಿಮಿತ್ತ ಖರ್ಚು ವೆಚ್ಚಗಳು ಕಂಡುಬಂದೀತು. ಕೆಳಹಂತದ ನೌಕರರಿಗೆ ಮುನ್ನಡೆಯ ಯೋಗ. ಅನಗತ್ಯ ಚಿಂತೆ ಬೇಡ.

ಧನು: ಹೊಸ ಉದ್ಯಮ ಆರಂಭಿಸಲು ಚಿಂತನೆ ನಡೆಸಲಿದ್ದೀರಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ. ನೆರೆಹೊರೆಯವರ ಸಹಾಯ ಪಡೆಯಲಿದ್ದೀರಿ.

ಮಕರ: ಹೊಸದಾಗಿ ಕೆಲಸಕ್ಕೆ ಸೇರಿದ್ದವರಿಗೆ ಸವಾಲುಗಳು ಎದುರಾಗಲಿವೆ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ ನಿರೀಕ್ಷಿಸಬಹುದು. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಚಿಂತೆ ಬೇಡ.

ಕುಂಭ: ಕೈಗೆತ್ತಿಕೊಂಡ ಕೆಲಸಗಳನ್ನು ಪೂರ್ತಿ ಮಾಡಿದ ಸಂತೋಷ ನಿಮ್ಮದಾಗಲಿದೆ. ವೈಯಕ್ತಿಕ ಸಮಸ್ಯೆಗಳನ್ನು ಹಂಚಿಕೊಳ್ಳಲು ಸಂಕೋಚ ಪಡಲಿದ್ದೀರಿ. ಅವಿವಾಹಿತರಿಗೆ ಶೀಘ್ರ  ವಿವಾಹ ಯೋಗ.

ಮೀನ: ನಿಮಗೆ ಇಷ್ಟವಿದ್ದೋ, ಇಲ್ಲದೆಯೋ ಕೆಲವೊಂದು ಕೆಲಸಗಳನ್ನು ಅನಿವಾರ್ಯವಾಗಿ ಮಾಡಬೇಕಾಗುತ್ತದೆ. ಮಕ್ಕಳ ಭವಿಷ್ಯ ನಿಮಿತ್ತ ಕೆಲವೊಂದು ಯೋಜನೆ ಹಾಕಿಕೊಳ್ಳಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments