ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಮೇಷ: ಎಣಿಸಿದಂತೇ ಕಾರ್ಯಗಳು ನೆರವೇರಲಿದೆ. ಆರೋಗ್ಯ ಸಮಸ್ಯೆಗೆ ನಿಮ್ಮದೇ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.
ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ ಕಂಡುಬರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಇಷ್ಟಾನುಸಾರ ನಿರ್ಧಾರ ಕೈಗೊಳ್ಳಲು ಹೋದರೆ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು.
ಮಿಥುನ: ನಿಮ್ಮ ಒಳ್ಳೆಯತನಕ್ಕೆ ತಕ್ಕ ಬೆಲೆ ಸಿಗಲಿದೆ. ಶುಭ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಮನಸ್ಸಿನಲ್ಲಿರುವ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ.
ಕರ್ಕಟಕ: ಶುಭ ಕೆಲಸಗಳಿಗೆ ಕೈ ಹಾಕುವಾಗ ನೂರೆಂಟು ವಿಘ್ನಗಳು ಬಂದೀತು. ವ್ಯವಹಾರದಲ್ಲಿ ಅನಿರೀಕ್ಷಿತವಾಗಿ ಲಾಭವಾಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.
ಸಿಂಹ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಮನಗೆಲ್ಲಲಿದ್ದೀರಿ.
ಕನ್ಯಾ: ಆತ್ಮೀಯರ ಕಷ್ಟಗಳಲ್ಲಿ ಭಾಗಿಯಾಗಲಿದ್ದೀರಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ಕಾರ್ಯರಂಗದಲ್ಲಿ ಸಮಾಧಾನಕರ ವಾತಾವರಣ.
ತುಲಾ: ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗೆ ಓಡಾಟ ನಡೆಸಬೇಕಾದೀತು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ.
ವೃಶ್ಚಿಕ: ಹಿಂದಿನ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಲಿದ್ದೀರಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ನಿಮ್ಮ ಹಳೆಯ ಬಾಕಿಗಳು ಸಂದಾಯವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಧನು: ಮಕ್ಕಳ ಜೀವನದಲ್ಲಿ ಅಭಿವೃದ್ಧಿ ಮನಸ್ಸಿಗೆ ಸಂತೋಷ ನೀಡಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಜಯ. ಶಿಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಲಿದೆ. ಮಾತಿನಲ್ಲೇ ಇತರರ ಮನಗೆಲ್ಲಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.
ಮಕರ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಸನ್ಮಿತ್ರರ ಕಷ್ಟಗಳಿಗೆ ಸ್ಪಂದಿಸಲದ್ದೀರಿ. ವಿಶೇಷ ಅತಿಥಿಗಳನ್ನು ಮನೆಗೆ ಬರಮಾಡಿಕೊಳ್ಳಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.
ಕುಂಭ: ಹೊಸ ವಿಚಾರಗಳನ್ನು ಇತರರಿಗೆ ಕಲಿಸುವ ಉತ್ಸಾಹ ಕಂಡುಬರಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ.
ಮೀನ: ದಂಪತಿಗಳ ನಡುವಿನ ವಿರಸ ಮುಕ್ತಾಯವಾಗಲಿದೆ. ಮಕ್ಕಳ ಭವಿಷ್ಯಕ್ಕಾಗಿ ಮಹತ್ವದ ತೀರ್ಮಾನ ಕೈಗೊಳ‍್ಳಲಿದ್ದೀರಿ. ಅಧ್ಯಯನಾಸಕ್ತರಿಗೆ ಅನುಕೂಲಕರ ವಾತಾವರಣ. ಹೊಸ ಉದ್ಯಮದ ಬಗ್ಗೆ ಚಿಂತನೆ ನಡೆಸಲಿದ್ದೀರಿ.