Webdunia - Bharat's app for daily news and videos

Install App

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

Webdunia
ಗುರುವಾರ, 17 ಆಗಸ್ಟ್ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಎಣಿಸಿದಂತೇ ಕಾರ್ಯಗಳು ನೆರವೇರಲಿದೆ. ಆರೋಗ್ಯ ಸಮಸ್ಯೆಗೆ ನಿಮ್ಮದೇ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಲಿದ್ದೀರಿ. ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ ಕಂಡುಬರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಇಷ್ಟಾನುಸಾರ ನಿರ್ಧಾರ ಕೈಗೊಳ್ಳಲು ಹೋದರೆ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು.

ಮಿಥುನ: ನಿಮ್ಮ ಒಳ್ಳೆಯತನಕ್ಕೆ ತಕ್ಕ ಬೆಲೆ ಸಿಗಲಿದೆ. ಶುಭ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಮನಸ್ಸಿನಲ್ಲಿರುವ ಕೆಲಸಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ.

ಕರ್ಕಟಕ: ಶುಭ ಕೆಲಸಗಳಿಗೆ ಕೈ ಹಾಕುವಾಗ ನೂರೆಂಟು ವಿಘ್ನಗಳು ಬಂದೀತು. ವ್ಯವಹಾರದಲ್ಲಿ ಅನಿರೀಕ್ಷಿತವಾಗಿ ಲಾಭವಾಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಸಿಂಹ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಕ್ರಿಯಾತ್ಮಕ ಕೆಲಸಗಳಿಂದ ಇತರರ ಮನಗೆಲ್ಲಲಿದ್ದೀರಿ.

ಕನ್ಯಾ: ಆತ್ಮೀಯರ ಕಷ್ಟಗಳಲ್ಲಿ ಭಾಗಿಯಾಗಲಿದ್ದೀರಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ಕಾರ್ಯರಂಗದಲ್ಲಿ ಸಮಾಧಾನಕರ ವಾತಾವರಣ.

ತುಲಾ: ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗೆ ಓಡಾಟ ನಡೆಸಬೇಕಾದೀತು. ಮಹಿಳೆಯರಿಗೆ ಅಲಂಕಾರಿಕ  ವಸ್ತುಗಳ ಖರೀದಿ ಯೋಗ.

ವೃಶ್ಚಿಕ: ಹಿಂದಿನ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಲಿದ್ದೀರಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ನಿಮ್ಮ ಹಳೆಯ ಬಾಕಿಗಳು ಸಂದಾಯವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಮಕ್ಕಳ ಜೀವನದಲ್ಲಿ ಅಭಿವೃದ್ಧಿ ಮನಸ್ಸಿಗೆ ಸಂತೋಷ ನೀಡಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳಲ್ಲಿ ಜಯ. ಶಿಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಲಿದೆ. ಮಾತಿನಲ್ಲೇ ಇತರರ ಮನಗೆಲ್ಲಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಮಕರ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಸನ್ಮಿತ್ರರ ಕಷ್ಟಗಳಿಗೆ ಸ್ಪಂದಿಸಲದ್ದೀರಿ. ವಿಶೇಷ ಅತಿಥಿಗಳನ್ನು ಮನೆಗೆ ಬರಮಾಡಿಕೊಳ್ಳಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಕುಂಭ: ಹೊಸ ವಿಚಾರಗಳನ್ನು ಇತರರಿಗೆ ಕಲಿಸುವ ಉತ್ಸಾಹ ಕಂಡುಬರಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ.

ಮೀನ: ದಂಪತಿಗಳ ನಡುವಿನ ವಿರಸ ಮುಕ್ತಾಯವಾಗಲಿದೆ. ಮಕ್ಕಳ ಭವಿಷ್ಯಕ್ಕಾಗಿ ಮಹತ್ವದ ತೀರ್ಮಾನ ಕೈಗೊಳ‍್ಳಲಿದ್ದೀರಿ. ಅಧ್ಯಯನಾಸಕ್ತರಿಗೆ ಅನುಕೂಲಕರ ವಾತಾವರಣ. ಹೊಸ ಉದ್ಯಮದ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಕರ ಸಂಕ್ರಾಂತಿ ಪೂಜೆಯನ್ನು ಹೇಗೆ ಮಾಡಬೇಕು, ಯಾವ ಮಂತ್ರ ಹೇಳಬೇಕು

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೂರ್ಯನ ಸರಳ ಮಂತ್ರಗಳು ಕನ್ನಡದಲ್ಲಿ: ಸಂಕ್ರಾಂತಿ ಸಮಯದಲ್ಲಿ ತಪ್ಪದೇ ಓದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ದೀಪ ಹಚ್ಚುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments