Select Your Language

Notifications

webdunia
webdunia
webdunia
webdunia

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?
ಬೆಂಗಳೂರು , ಶನಿವಾರ, 19 ಆಗಸ್ಟ್ 2023 (08:30 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಹೊಸ ಅವಕಾಶಗಳು ಲಭ್ಯವಾಗಲಿದೆ. ಗುರುಹಿರಿಯರ ಮಾರ್ಗದರ್ಶನದಿಂದ ಸರಿಯಾದ ದಾರಿಯಲ್ಲಿ ನಡೆಯಲಿದ್ದೀರಿ. ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ವೃಷಭ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿವೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹೊಸದಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯಲಿದ್ದೀರಿ.

ಮಿಥುನ: ವ್ಯಾಪಾರಿಗಳಿಗೆ ಹಣಕಾಸಿನ ವಿಚಾರವಾಗಿ ಅಡೆತಡೆಗಳು ನಿವಾರಣೆಯಾಗಲಿವೆ. ತಾಂತ್ರಿಕ ವೃತ್ತಿಯವರಿಗೆ ಬಿಡುವಿಲ್ಲದ ಕೆಲಸ. ಪ್ರೀತಿ ಪಾತ್ರರ ಕಷ್ಟಗಳಿಗೆ ಜೊತೆಯಾಗಿ ನಿಲ್ಲಲಿದ್ದೀರಿ.

ಕರ್ಕಟಕ: ಉದ್ಯೋಗ, ವ್ಯವಹಾರ ನಿಮಿತ್ತ ದೂರ ಪ್ರಯಾಣ ಮಾಡಬೇಕಾದ ಅನಿವಾರ್ಯತೆ. ದೇವತಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ತಾಳ್ಮೆ ಅಗತ್ಯ.

ಸಿಂಹ: ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಮನೆ, ವಾಹನ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚವಾಗಲಿದೆ. ದೂರ ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ನೆರೆಹೊರೆಯವರಿಂದ ಸಹಾಯ ಪಡೆಯಲಿದ್ದೀರಿ.

ಕನ್ಯಾ: ಮಾತಿಗೆ ವಿರುದ್ಧವಾಗಿ ನಡೆದುಕೊಂಡ ಪಶ್ಚಾತ್ತಾಪ ಕಾಡಲಿದೆ. ಸಂಗಾತಿಯ ಕಷ್ಟಗಳಿಗೆ ಜೊತೆಯಾಗಿ ನಿಲ್ಲಬೇಕಾಗುತ್ತದೆ. ಮಕ್ಕಳ ಜೊತೆ ಸಂತೋಷದಿಂದ ಕಾಲ ಕಳೆಯುವ ಯೋಗ.

ತುಲಾ: ನೀವು ಮಾಡುತ್ತಿರುವ ಕೆಲಸ ಬಿಟ್ಟು ಹೊಸ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವುದರ ಬಗ್ಗೆ ಚಿಂತನೆ ನಡೆಸಲಿದ್ದೀರಿ. ತೀರ್ಥ ಯಾತ್ರಿಗಳಿಗೆ ಅಡೆತಡೆಗಳು ಬಂದೀತು. ಕೊಡು-ಕೊಳ್ಳುವ ವ್ಯವಹಾರದಲ್ಲಿ ಮುನ್ನಡೆ.

ವೃಶ್ಚಿಕ: ಮನೆಯವರ ಪ್ರೋತ್ಸಾಹದಿಂದ ನಿಮ್ಮದೇ ಸ್ವಯಂ ಉದ್ದಿಮೆ ಪ್ರಾರಂಭಿಸುವ ಕನಸು ನನಸು ಮಾಡಿಕೊಳ್ಳಲಿದ್ದೀರಿ. ನೆಂಟರಿಷ್ಟರ ಭೇಟಿ ಯೋಗ.  ದೇವಾಲಯ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿಯಾಗಲಿದೆ.

ಧನು: ಬಂಧು ಮಿತ್ರರ ಭೇಟಿ ಯೋಗ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾರಾಧನೆಯಿಂದ ಮನಸ್ಸಿಗೆ ನೆಮ್ಮದಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಸಿಗಲಿದೆ.

ಮಕರ: ದಂಪತಿಗಳಲ್ಲಿ ಪರಸ್ಪರ ಹೊಂದಾಣಿಕೆ ಕೊರತೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗಲಿದೆ.  ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಚಿಂತೆ ಬೇಡ.

ಕುಂಭ: ಸರಕಾರೀ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.  ದಂಪತಿಗಳಲ್ಲಿ ಅನುರಾಗ ವೃದ‍್ಧಿಯಾಗಲಿದೆ. ಹೊಸ ಉದ್ಯಮ ಆರಂಭಕ್ಕೆ ಅವಸರ ಬೇಡ. ತಾಳ್ಮೆಯಿರಲಿ.

ಮೀನ: ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಅನಿವಾರ್ಯ ಕಾರಣಗಳಿಗೆ ಪರವೂರಿಗೆ ಸಂಚರಿಸಬೇಕಾದೀತು. ಹಣಕಾಸಿನ ಹರಿವಿಗೆ ತೊಂದರೆಯಾಗದು. ದೇವತಾ ಪ್ರಾರ್ಥನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?